Home
ಸುದ್ದಿಜಾಲ

7777ರೂ.ಗೆ ಲಾಂಚ್ ಆಯ್ತು ಸ್ವದೇಶಿ ಲಾವಾ Z66 ಸ್ಮಾರ್ಟ್‌ಫೋನ್!

ಭಾರತೀಯ ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ ಲಾವಾ ಇಂಟರ್ನ್ಯಾಷನಲ್ ಲಿಮಿಟೆಡ್‌ ಈಗಾಗಲೇ ಹಲವು ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇತ್ತೀಗಷ್ಟೆ ಲಾವಾ Z61 ಫೋನ್ ಬಿಡುಗಡೆ ಮಾಡಿರುವ ಸಂಸ್ಥೆಯು ಇದೀಗ ಭಾರತೀಯ ಮಾರುಕಟ್ಟೆಗೆ ನೂತನ ಬಜೆಟ್‌ ಸ್ಮಾರ್ಟ್‌ಫೋನ್‌ವೊಂದನ್ನು ಬಿಡುಗಡೆ ಮಾಡಿದೆ. ಈ ಮೂಲಕ ಸ್ವದೇಶಿ ಮೊಬೈಲ್ ಪ್ರಿಯರ ಗಮನ ಸೆಳೆದಿದೆ.

ಲಾವಾ Z66

ಹೌದು, ಲಾವಾ ಕಂಪೆನಿಯ ಹೊಸದಾಗಿ ಲಾವಾ Z66 ಸ್ಮಾರ್ಟ್‌ಫೋನ್ ಅನ್ನು ದೇಶದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 1.6GHz ಆಕ್ಟಾ ಕೋರ್ ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, 3GB RAM + 32GB ವೇರಿಯಂಟ್ ಆಯ್ಕೆ ಹೊಂದಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ 128GB ವರೆಗೂ ವಿಸ್ತರಿಸುವ ಅವಕಾಶವನ್ನು ಪಡೆದಿದ್ದು, 3950mAh ಬ್ಯಾಟರಿ ಬ್ಯಾಕ್‌ಅಪ್ ಒದಗಿಸಲಾಗಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 7,777ರೂ. ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಲಾವಾ Z66 ಸ್ಮಾರ್ಟ್‌ಫೋನ್‌ 6.08 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, 720x1560 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಡಿಸ್‌ಪ್ಲೇ ಅನುಪಾತವು 19:9 ಆಗಿದ್ದು, 2.5D ಕರ್ವಡ್‌ ಸ್ಕ್ರೀನ್ ಮಾದರಿಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಲಾವಾ Z66 ಸ್ಮಾರ್ಟ್‌ಫೋನ್‌ 1.6GHz ಆಕ್ಟಾ ಕೋರ್ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಲಾವಾ Z66 ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್ ವೇರಿಯೆಂಟ್‌ ಆಯ್ಕೆ ಹೊಂದಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ 128GB ವರೆಗೂ ವಿಸ್ತರಿಸುವ ಅವಕಾಶವನ್ನು ಪಡೆದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಲಾವಾ Z66 ಸ್ಮಾರ್ಟ್‌ಫೋನ್‌ ಸಿಂಗಲ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದೆ. ಕ್ಯಾಮೆರಾವು 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದ್ದು, 8 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಲವು ಫೋಟೊ ಎಡಿಟಿಂಗ್ ಆಯ್ಕೆಗಳು ಸಹ ಇವೆ.

ಬ್ಯಾಟರಿ ಬ್ಯಾಕ್‌ಅಪ್‌

ಬ್ಯಾಟರಿ ಬ್ಯಾಕ್‌ಅಪ್‌

ಲಾವಾ Z66 ಪ್ರೊ ಸ್ಮಾರ್ಟ್‌ಫೋನ್‌ 3950mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಇದರೊಂದಿಗೆ ಬ್ಲೂಟೂತ್ 4.2, ವೈ-ಫೈ, ಜಿಪಿಎಸ್, ಯುಎಸ್‌ಬಿ ಒಟಿಜಿ ಬೆಂಬಲ ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್. ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್, HDR, ಪನೋರಮಾ, ಸ್ಲೋ ಮೋಶನ್ ಆಯ್ಕೆಗಳು ಇವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ Z66 ಪ್ರೊ ಸ್ಮಾರ್ಟ್‌ಫೋನ್‌ 7,777ರೂ.ಗಳ ಬೆಲೆಯನ್ನ ಹೊಂದಿದ್ದು, ಸದ್ಯದಲ್ಲಿಯೇ ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್ ಸೇರಿದಂತೆ ಪ್ರಮುಖ ಆಫ್‌ಲೈನ್ ಮಳಿಗೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮರೀನಾ ಬ್ಲೂ, ಬೆರಿ ರೆಡ್‌, ಮಿಡ್‌ನೈಟ್‌ ಬ್ಲೂ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

Best Mobiles in India

English summary
Lava Z66 runs on Android 10 and features a 6.08-inch HD+ display with 283ppi pixel density.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+