ಲೆನೊವೊ A7 ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಬಿಡುಗಡೆ!
ಟೆಕ್ ವಲಯದಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಸ್ಮಾರ್ಟ್‌ಫೋನ್ ಪ್ರಿಯರ ಆಶಯಗಳಿಗೆ ತಕ್ಕಂತೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವಲ್ಲಿ ಹಲವು ಕಂಪೆನಿಗಳು ಸೈ ಎನಿಸಿಕೊಂಡಿವೆ. ಸದ್ಯ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡ ಕಂಪೆನಿಗಳಲ್ಲಿ ಲೆನೊವೊ ಕಂಪೆನಿ ಕೂಡ ಒಂದಾಗಿದೆ. ಸದ್ಯ ಇದೀಗ ಲೆನೊವೊ ಕಂಪೆನಿ ತನ್ನ ಹೊಸ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ಲೆನೊವೊ ಕಂಪೆನಿ ತನ್ನ ಹೊಸ ಸ್ಮಾರ್ಟ್‌ಫೋನ್ ಲೆನೊವೊ A7 ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯುನಿಸಾಕ್ ಚಿಪ್‌ಸೆಟ್ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಆಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ವಾಟರ್ ಡ್ರಾಪ್ ನಾಚ್ಡ್‌ಡಿಸ್ಪ್ಲೇ ಹೊಂದಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಪ್ ಹಾಗೂ ಸಿಂಗಲ್ ಫ್ರಂಟ್ ಫೇಸಿಂಗ್ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ
ಲೆನೊವೊ A7 ಸ್ಮಾರ್ಟ್‌ಫೋನ್ 720 x 1560 ಪಿಕ್ಸೆಲ್ ರೆಸಲ್ಯೂಶನ್ ಸ್ಕ್ರೀನ್ ಸಾಮರ್ಥ್ಯವನ್ನ ಹೊಂದಿರುವ 6.09-ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ + ವಾಟರ್‌ಡ್ರಾಪ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಡಿಸ್‌ಪ್ಕೇ ಪಿಕ್ಸೆಲ್ ಸಾಂದ್ರತೆ 320PPI ಇದೆ ಎಂದು ಕಂಪೆನಿ ಹೇಳಿಕೊಂಡಿದೆ. ಅಲ್ಲದೆ 20: 9 ರಚನೆ ಅನುಪಾತವನ್ನ ಹೊಂದಿದೆ. ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸಾಕ್ ಎಸ್‌ಸಿ 9683 SoC ಪ್ರೊಸೆಸರ್ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇನ್ನು ಈ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 90W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದು 416 ಸ್ಟ್ಯಾಂಡ್‌ಬೈ ಅನ್ನು ನೀಡಲಿದೆ. ಜೊತೆಗೆ AI ಟೆಕ್ನಾಲಜಿಯನ್ನ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲುಟೂತ್, ವೈಫೈ, ಹಾಟ್‌ಸ್ಪಾಟ್, ಅನ್ನು ಬೆಂಬಲಿಸಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಕಪ್ಪು ಮತ್ತು ನೀಲಿ ಬಣ್ಣದ ಆಯ್ಕೆಗಳಲ್ಲಿ ಲಬ್ಯವಾಗಲಿದೆ.


Click it and Unblock the Notifications