ಲೆನೊವೊ K12 ನೋಟ್ ಸ್ಮಾರ್ಟ್‌ಫೋನ್ ಲಾಂಚ್!
ಜನಪ್ರಿಯ ಲೆನೊವೊ ಮೊಬೈಲ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಗಮನ ಸೆಳೆದಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಲೆನೊವೊ K12 ನೋಟ್ ಅನ್ನು ಬಿಡುಗಡೆ ಮಾಡಿದೆ. ಇದು ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿದ್ದು, ಆಕ್ಟಾ-ಕೋರ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಹೌದು, ಲೆನೊವೊ ಕಂಪೆನಿಯು ಲೆನೊವೊ K12 ನೋಟ್ ಅನ್ನುಸೌದಿ ಅರೇಬಿಯಾದಲ್ಲಿ ಬಿಡುಗಡೆ ಮಾಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುವ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಫಾರೆಸ್ಟ್ ಗ್ರೀನ್ ಮತ್ತು Sapphire ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು, ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ
ಇದು 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ 6.5-ಇಂಚಿನ ಹೆಚ್‌ಡಿ + ಐಪಿಎಸ್ TFT ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 20:9 ರಚನೆಯು ಅನುಪಾತವನ್ನು ಹೊಂದಿದ್ದು, ಸ್ಕ್ರೀನ್-ಟು-ಬಾಡಿ 87% ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಬಲ
ಲೆನೊವೊ K12 ನೋಟ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM +128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, 2.4 ಮ್ಯಾಕ್ರೋ ಲೆನ್ಸ್ ಹೊಂದಿರುವ 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಹೊಂದಿದೆ. ಮೂರನೇ ಕ್ಯಾಮರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಲೆನೊವೊ K12 ನೋಟ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 20W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ವೈ-ಫೈ, ಬ್ಲೂಟೂತ್ 5.0, NFC , GPS ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇದು ಸೌದಿ ಅರೇಬಿಯಾದಲ್ಲಿ ಬಿಡುಗಡೆ ಆಇರುವುದರಿಂದ ಇದರ ಬೆಲೆ SAR 599 (ಸುಮಾರು ರೂ. 11,900) ಆಗಿದೆ. ಇನ್ನು ಈ ಫೋನ್ ಫಾರೆಸ್ಟ್ ಗ್ರೀನ್ ಮತ್ತು Sapphire ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಪ್ರಸ್ತುತ ಸೌದಿ ಅರೇಬಿಯಾದಲ್ಲಿ ಆಕ್ಸಿಯಮ್ ಟೆಲಿಕಾಂ ವೆಬ್‌ಸೈಟ್ ಮೂಲಕ ಮಾರಾಟದಲ್ಲಿದೆ.


Click it and Unblock the Notifications