ಲೆನೊವೊ ಲೀಜನ್ ಫೋನ್ ಡ್ಯುಯೆಲ್‌ ಬಿಡುಗಡೆ!..ಡ್ಯುಯೆಲ್ ಬ್ಯಾಟರಿ ವಿಶೇಷತೆ!

|

ಟೆಕ್‌ವಲಯದ ಬಹುನಿರೀಕ್ಷಿತ ಗೇಮಿಂಗ್ ಫೋನ್‌ಗಳಲ್ಲಿ ಒಂದಾದ ಲೆನೊವೊ ಲೀಜನ್ ಫೋನ್ ಡ್ಯುಯೆಲ್‌ ಅಂತಿಮವಾಗಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಸ್ಮಾರ್ಟ್‌ಫೋನ್‌ನ ಒಂದು ಬದಿಯಲ್ಲಿ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಮತ್ತು ಡ್ಯುಯಲ್ ಬ್ಯಾಟರಿ ಪ್ಯಾಕ್‌ಅಪ್‌ ಒಳಗೊಂಡಿರುವುದು ಈ ಸ್ಮಾರ್ಟ್‌ಫೋನ್‌ನ ವಿಶೇಷವಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ horizontal UI ಯನ್ನು ಒಳಗೊಂಡಿದೆ. ಇದು ಮೊಬೈಲ್ ಗೇಮರುಗಳ ಉತ್ಕೃಷ್ಟ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎನ್ನಲಾಗಿದೆ.

ಬಹುನಿರೀಕ್ಷಿತ

ಹೌದು, ಗೇಮಿಂಗ್‌ ಸ್ಮಾರ್ಟ್‌ಫೋನ್‌ ಪ್ರಿಯರ ಬಹುನಿರೀಕ್ಷಿತ ಲೆನೊವೊ ಲೀಜನ್ ಫೋನ್ ಡ್ಯುಯೆಲ್ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865+ SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಅಲ್ಲದೆ ಈ ಫೋನ್ 144Hz ಡಿಸ್‌ಪ್ಲೇ ಮತ್ತು ಡ್ಯುಯಲ್ ಅಲ್ಟ್ರಾಸಾನಿಕ್ ಟ್ರಿಗರ್ ಬಟನ್ ಜೊತೆಗೆ ಡ್ಯುಯಲ್ ವೈಬ್ರೇಶನ್ ಎಂಜಿನ್ ಗಳನ್ನು ಸಹ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 2,500mAh ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಅಲ್ಲದೆ ಇದು 90W ವರೆಗೆ ಟರ್ಬೊ ಪವರ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಲೆನೊವೊ ಲೀಜನ್ ಫೋನ್ ಡ್ಯುಯಲ್ 2,340x1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.65-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.ಇನ್ನು ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ಅನ್ನು ಹೊಂದಿದೆ. ಅಲ್ಲದೆ 19.5:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 865+ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 UI 12 (ಲೀಜನ್ ಓಎಸ್) ಬೆಂಬಲದೊಂದಿಗೆ ಕಾರ್ಯನರ್ವಿಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 16GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಲೀಜನ್ ಫೋನ್ ಡ್ಯುಯಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/ 1.89 ಲೆನ್ಸ್ ಹೊಂದಿದೆ, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು 120 ಡಿಗ್ರಿ, f/ 2.2 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ . ಇದಲ್ಲದೆ 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿದೆ.ಇದು f/ 2.2 ಲೆನ್ಸ್ ಹೊಂದಿದೆ ಮತ್ತು ಇದು ಸೈಡ್ ಪಾಪ್-ಅಪ್ ಮಾಡ್ಯೂಲ್ನಲ್ಲಿ ಲಭ್ಯವಿದೆ. ಲ್ಯಾಂಡ್‌ಸ್ಕೇಪ್ ಮೋಡ್‌ನಲ್ಲಿ ಗೇಮಿಂಗ್‌ ಆಡುವಾಗ ವೀಡಿಯೊಗಳನ್ನು ರೆಕಾರ್ಡ್ ಮಾಡಲು ಅಥವಾ ಸೆಲ್ಫಿಗಳನ್ನು ಸೆರೆಹಿಡಿಯಲು ಇದು ಸಹಾಯ ಮಾಡುತ್ತದೆ. ಇದಲ್ಲದೆ, ನಿಮ್ಮ ಗೇಮಿಂಗ್ ಅನ್ನು ಟ್ವಿಚ್ ಅಥವಾ ಯೂಟ್ಯೂಬ್ ಮೂಲಕ ಲೈವ್ ಸ್ಟ್ರೀಮ್ ಮಾಡಲು ಲೆನೊವೊ ಫೋನ್ ಮೊಬೈಲ್ ಲೈವ್‌ ಫೀಚರ್ಸ್‌ ಅನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಲೆನೊವೊ ಲೀಜನ್ ಫೋನ್ ಡ್ಯುಯಲ್ 2,500mAh ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೆ ಇದು 90W ವರೆಗೆ ಟರ್ಬೊ ಪವರ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ಇದು ಕೇವಲ 10 ನಿಮಿಷಗಳಲ್ಲಿ 50% ಚಾರ್ಜಿಂಗ್‌ ಅನ್ನು ನೀಡಲಿದ್ದು,ಕಂಪ್ಲಿಟ್‌ ಚಾರ್ಜ್ ಮಾಡಲು 30 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಲೆನೊವೊ 5G, 4G LTE, ವೈ-ಫೈ 6, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಎನ್‌ಎಫ್‌ಸಿ, ಮತ್ತು ಎರಡು ಯುಎಸ್‌ಬಿ ಟೈಪ್-ಸಿ ಪೋರ್ಟ್‌ಗಳನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್, ಅಲ್ಟ್ರಾಸಾನಿಕ್ ಸೆನ್ಸಾರ್‌ ಅನ್ನು ಒಳಗೊಂಡಿದ್ದು, ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲೆನೊವೊ ಲೀಜನ್ ಫೋನ್ ಡ್ಯುಯಲ್ ಬೆಲೆ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ. ಆದಾಗ್ಯೂ, ಈ ತಿಂಗಳ ಕೊನೆಯಲ್ಲಿ ಚೀನಾದಲ್ಲಿ ಲೀಜನ್ ಫೋನ್ ಪ್ರೊ ಸ್ಮಾರ್ಟ್‌ಫೋನ್‌ ಪ್ರಾರಂಭವಾಗಲಿದೆ. ಇದು ನಂತರದ ಹಂತದಲ್ಲಿ ಏಷ್ಯಾ ಪೆಸಿಫಿಕ್, ಯುರೋಪ್, ಮಧ್ಯಪ್ರಾಚ್ಯ ಮತ್ತು ಆಫ್ರಿಕಾ (ಇಎಂಇಎ) ಮತ್ತು ಲ್ಯಾಟಿನ್ ಅಮೆರಿಕಾದಲ್ಲಿ "ಆಯ್ದ ಮಾರುಕಟ್ಟೆಗಳಲ್ಲಿ" ಲಭ್ಯವಾಗಲಿದೆ. ಆದರೆ ಭಾರತದಲ್ಲಿ ಅದು ಯಾವಾಗ ಮತ್ತು ಯಾವ ಬೆಲೆಗೆ ತಲುಪುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Lenovo Legion Phone Duel, one of the much-awaited gaming phones of 2020, has finally been unveiled with a pop-up selfie camera on one side and dual battery packs.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X