ಲೆನೊವೊ ಲೀಜನ್‌ Y70 ಸ್ಮಾರ್ಟ್‌ಫೋನ್‌ ಬಿಡುಗಡೆ!..68W ವೇಗದ ಚಾರ್ಜಿಂಗ್‌!

|

ಲೆನೊವೊ ಕಂಪೆನಿ ಭಿನ್ನ ಶ್ರೇಣಿಯ ಟೆಕ್‌ ಪ್ರಾಡಕ್ಟ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ವಿಶೇಷ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಟೆಕ್‌ ಮಾರುಕಟ್ಟೆಗೆ ಹೊಸ ಲೆನೊವೊ ಲೀಜನ್ Y70 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 144Hz ರಿಫ್ರೆಶ್ ರೇಟ್‌ ಬೆಂಬಲಿಸುವ 6.67-ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ.

ಲೆನೊವೊ

ಹೌದು, ಲೆನೊವೊ ಕಂಪೆನಿ ಹೊಸ ಲೆನೊವೊ ಲೀಜನ್‌ Y70 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 68W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನಿನಲ್ಲಿ 10-ಪದರದ ಆವಿ ಕೂಲಿಂಗ್ ಚೇಂಬರ್ ಅನ್ನು ನೀಡಲಾಗಿದೆ. ಇದರಿಂದ ಮೊಬೈಲ್‌ ಹೆಚ್ಚು ಬಿಸಿಯಾಗದಂತೆ ತಡೆಯಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಒಳಗೊಂಡಿರಿವ ಫೀಚರ್ಸ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಲೆನೊವೊ ಲೀಜನ್‌ Y70 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್‌ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hz ಅಡಾಪ್ಟಿವ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು HDR10+ ಮತ್ತು ಡಾಲ್ಬಿ ವಿಷನ್‌ ಬೆಂಬಲವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಏನಿದೆ?

ಪ್ರೊಸೆಸರ್‌ ಏನಿದೆ?

ಲೆನೊವೊ ಲೀಜನ್‌ Y70 ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ZUI 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM + 128GB ಮತ್ತು 12GB RAM + 256GB ಹಾಗೂ 16GB RAM + 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೆರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಲೆನೊವೊ ಲೀಜನ್‌ Y70 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಲೆನೊವೊ ಲೀಜನ್‌ Y70 ಸ್ಮಾರ್ಟ್‌ಫೋನ್‌ 68W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವರ್ಧಿತ ಶಾಖದ ಪ್ರಸರಣಕ್ಕಾಗಿ 10-ಪದರದ ಆವಿ ಕೂಲಿಂಗ್ ಚೇಂಬರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಏವಿಯೇಷನ್-ಗ್ರೇಡ್ ಅಲ್ಯೂಮಿನಿಯಂ ಮತ್ತು ಸಿಎನ್‌ಸಿ-ಕ್ರೇವ್ಡ್ ಮೆಟಲ್ ಫ್ರೇಮ್‌ನಿಂದ ಮಾಡಿದ 7.9 ಎಂಎಂ ತೆಳುವಾದ ದೇಹವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನಿನ ಬೇಸ್‌ ಮಾಡೆಲ್‌ 8GB + 128GB ಸ್ಟೋರೇಜ್ ಮಾದರಿಯ ಬೆಲೆ CNY 2,970 (ಸುಮಾರು 35,000ರೂ)ಆಗಿದೆ. ಇನ್ನು 12GB + 256GB ಸ್ಟೋರೇಜ್ ರೂಪಾಂತರದ ಬೆಲೆಯು CNY 3,370 (ಸುಮಾರು ರೂ. 40,000) ಆಗಿದೆ. ಇದರ ಹೈ ಎಂಡ್‌ 16GB + 512GB ಕಾನ್ಫಿಗರೇಶನ್ ಆಯ್ಕೆಯು CNY 4,270 (ಸುಮಾರು 50,000ರೂ) ಬೆಲೆಯನ್ನು ಪಡೆದುಕೊಂಡಿದೆ.

Best Mobiles in India

English summary
Lenovo Legion Y70 features a 10-layer vapour cooling chamber for enhanced heat dissipation.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X