Home
ಸುದ್ದಿಜಾಲ

ಬಜೆಟ್‌ ಬೆಲೆಯ ಎಲ್‌ಜಿ ಅರಿಸ್ಟೋ 5 ಸ್ಮಾರ್ಟ್‌ಫೋನ್‌ ಬಿಡುಗಡೆ!

ಎಲೆಕ್ಟ್ರಾನಿಕ್ಸ್‌ ದೈತ್ಯ ಎಲ್‌ಜಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಪ್ರತಿ ಭಾರಿಯೂ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಎಲ್‌ಜಿ ಇದೀಗ ತನ್ನ ಎಲ್‌ಜಿ ಅರಿಸ್ಟೊ 5 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಬಜೆಟ್ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್‌ MT6762 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಎಲ್‌ಜಿ

ಹೌದು, ಎಲ್‌ಜಿ ಅರಿಸ್ಟೋ 5 ಸ್ಮಾರ್ಟ್‌ಫೋನ್‌ ತನ್ನ ಬಾಡಿ ವಿನ್ಯಾಸದಲ್ಲಿ ದಪ್ಪ ಬೆಜೆಲ್‌ಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಒಂದೇ RAM ಮತ್ತು ಶೇಖರಣಾ ಸಾಮರ್ಥ್ಯದ ಸಂರಚನೆಯನ್ನ ಹೊಂದಿದೆ ಎನ್ನಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 10 ಗಂಟೆಗಳ ಟಾಕ್ ಟೈಂ ಅನ್ನು ತಲುಪಿಸುತ್ತದೆ ಎಂದು ಎಲ್‌ಜಿ ಕಂಪೆನಿ ಹೇಳಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಎಲ್‌ಜಿ ಅರಿಸ್ಟೊ 5 ಸ್ಮಾರ್ಟ್‌ಫೋನ್‌ 720x1,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.7-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ ಫುಲ್‌ವಿಷನ್ ಡಿಸ್‌ಪ್ಲೇಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ MT6762 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 32GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ ಅರಿಸ್ಟೋ 5 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪಿಡಿಎಎಫ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 3,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 4G LTE, ಬ್ಲೂಟೂತ್ V5.0, ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಎಲ್‌ಜಿ ಅರಿಸ್ಟೋ 5 ಸ್ಮಾರ್ಟ್‌ಫೋನ್‌ ಬೆಲೆ $150 (ಸುಮಾರು ರೂ. 11,300) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸಿಲ್ವರ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
LG Aristo 5 is the company's latest entry in its budget segment. The phone comes with entry-level specifications and a price tag to match.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+