ದುಬಾರಿ ಬೆಲೆಯಲ್ಲಿ ಬಿಡುಗಡೆ ಆಯ್ತು 'ಎಲ್‌ಜಿ'ಯ ಡ್ಯುಯಲ್‌ ಸ್ಕ್ರೀನ್ ಫೋನ್!

|

ವಿಶ್ವದ ಟಾಪ್‌ ಸ್ಮಾರ್ಟ್‌ಫೋನ್‌ ತಯಾರಿಕಾ ಸಂಸ್ಥೆಗಳಲ್ಲಿ ''ಎಲ್‌ಜಿ'' ಸಹ ಒಂದು. ಎಲ್‌ಜಿ ಕಂಪನಿಯು ಈಗಾಗಲೇ ಅತ್ಯುತ್ತಮ ಡಿಸ್‌ಪ್ಲೇ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಹೆಸರುವಾಸಿಯಾಗಿದೆ. ಈ ನಿಟ್ಟಿನಲ್ಲಿ ಮುಂದುವರೆದಿರುವ ಸಂಸ್ಥೆಯು ಇದೀಗ ಹೊಸದಾಗಿ ಹೈಎಂಡ್ ಮಾದರಿಯ ಸ್ಮಾರ್ಟ್‌ಫೋನ್ ಒಂದನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಹುಟ್ಟುಹಾಕಿದೆ.

ಎಲ್‌ಜಿ ಸಂಸ್ಥೆ

ಹೌದು, ಜನಪ್ರಿಯ ಎಲ್‌ಜಿ ಸಂಸ್ಥೆಯು ಇದೀಗ ಭಾರತೀಯ ಮಾರುಕಟ್ಟೆಗೆ ಹೊಸ ಎಲ್‌ಜಿ G8ಎಕ್ಸ್‌ ಥಿನ್ಕ್ಯು-LG G8X ThinQ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಡ್ಯುಯಲ್ ಸ್ಕ್ರೀನ್ ಮಾದರಿಯನ್ನು ಪಡೆದಿರುವ ಈ ಸ್ಮಾರ್ಟ್‌ಫೋನ್ OLED ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯೊಂದಿಗೆ ಪವರ್‌ಫುಲ್ ಲುಕ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೇ ಎಲ್‌ಜಿ G8ಎಕ್ಸ್‌ ಥಿನ್ಕ್ಯು ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳೆನು ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಎಲ್‌ಜಿ G8ಎಕ್ಸ್‌ ಥಿನ್ಕ್ಯು ಸ್ಮಾರ್ಟ್‌ಫೋನ್ 2340×1080 ಪಿಕ್ಸಲ್ ರೆಸಲ್ಯೂಶನ ಸಾಮರ್ಥ್ಯದೊಂದಿಗೆ 6.4 ಇಂಚಿನ ಫುಲ್‌ ವಿಜನ್ OLED ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಫೋನ್ 19.5:9 ಅನುಪಾತದ ಡಿಸ್‌ಪ್ಲೇಯ ರಚನೆಯನ್ನು ಪಡೆದುಕೊಂಡಿದೆ. ಅಂದಹಾಗೇ ಈ ಫೋನ್ ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಪಡೆದಿದೆ. ಎರಡನೇ ಸ್ಕ್ರೀನ್‌ ಪಿಕ್ಸಲ್ ರೆಸಲ್ಯೂಶನನ್ನು ಒಂದನೇಯ ಸ್ಕ್ರೀನ್ ಮಾದರಿಯಲ್ಲಿಯೇ ಇದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ಎಲ್‌ಜಿ G8ಎಕ್ಸ್‌ ಥಿನ್ಕ್ಯು ಸ್ಮಾರ್ಟ್‌ಫೋನ್ ಆಕ್ಟಾಕೋರ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್‌ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಅಂಡ್ರಾಯ್ಡ್ 9 ಪೈ ಓಎಸ್‌ ಬೆಂಬಲವನ್ನು ಹೊಂದಿದೆ. ಹಾಗೆಯೇ ಅಡ್ರೆನೊ 640 GPU ಸಪೋರ್ಟ್‌ ಸಹ ಒಳಗೊಂಡಿದೆ. ಇದರೊಂದಿಗೆ 6GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರುವುದು ಪ್ಲಸ್‌ ಪಾಯಿಂಟ್ ಅನಿಸಲಿದೆ. ಬಾಹ್ಯ ಮೆಮೊರಿಯನ್ನು 2TB ವರೆಗೂ ವಿಸ್ತರಿಸಬಹುದಾದ ಆಯ್ಕೆ ಇದೆ.

ಕ್ಯಾಮೆರಾ ಸ್ಪೆಷಲ್

ಕ್ಯಾಮೆರಾ ಸ್ಪೆಷಲ್

ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ಡ್ಯುಯಲ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾವು f/1.8 ಅಪರ್ಚರ್ ನೊಂದಿಗೆ 12ಎಂಪಿಯ ಸೆನ್ಸಾರ್ ಒಳಗೊಂಡಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು f/2.4 ಅಪರ್ಚರ್ ನೊಂದಿಗೆ 13ಎಂಪಿ ಅಲ್ಟ್ರಾ ವೈಲ್ಟ್‌ ಆಂಗಲ್ ಕ್ಯಾಮೆರಾವನ್ನು ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು f/1.9 ಅಪರ್ಚರ್ ನೊಂದಿಗೆ 32ಎಂಪಿ ಸೆನ್ಸಾರ್ ಅನ್ನು ಹೊಂದಿದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ಎಲ್‌ಜಿ G8ಎಕ್ಸ್‌ ಥಿನ್ಕ್ಯು ಸ್ಮಾರ್ಟ್‌ಫೋನ್ 4,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ ಕ್ವಾಲ್ಕಮ್ ಕ್ವಿಕ್ ಚಾರ್ಜಿಂಗ್ 3.0 ಸಪೋರ್ಟ್‌ ಪಡೆದಿದೆ. ಇನ್ನು ಈ ಫೋನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಯುಎಸ್‌ಬಿ ಟೈಪ್-ಸಿ, ಸ್ಟೀರಿಯೊ ಸ್ಪೀಕರ್ಸ್, ಆಡಿಯೊ ಜಾಕ್‌ನಂತಹ ಸೌಲಭ್ಯವನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಎಲ್‌ಜಿ G8ಎಕ್ಸ್‌ ಥಿನ್ಕ್ಯು ಸ್ಮಾರ್ಟ್‌ಫೋನ್ 49,999ರೂ.ಗಳ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದೆ. ಡಿ.21ರಿಂದ ಪ್ರಮುಖ ಮೊಬೈಲ್ ಸ್ಟೋರ್‌ಗಳಲ್ಲಿ, ಅಧಿಕೃತ ಎಲ್‌ಜಿ ಶಾಪ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಅರೋರಾ ಬ್ಲಾಕ್ ಬಣ್ಣದ ಆಯ್ಕೆಯನ್ನು ಪಡೆದಿದೆ.

Most Read Articles
Best Mobiles in India

English summary
LG has launched its latest LG G8X ThinQ smartphone in India. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X