Home
ಸುದ್ದಿಜಾಲ

ಬಜೆಟ್‌ ಬೆಲೆಯ ಎಲ್‌ಜಿ K31 ಸ್ಮಾರ್ಟ್‌ಫೋನ್‌ ಬಿಡುಗಡೆ!

ಎಲೆಕ್ಟ್ರಾನಿಕ್ಸ್‌ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಎಲ್‌ಜಿ ಕಂಪೆನಿ ಇದೀ ತನ್ನ ಹೊಸ ಎಲ್‌ಜಿ K31 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ K ಸರಣಿಯ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಇದಾಗಿದೆ. ಈ ಫೋನ್‌ ಥಿಕ್‌ನೆಸ್‌ ಬೆಜೆಲ್‌ ಹೊಂದಿದ್ದು, ನಾಚ್‌ ಶೈಲಿಯ ಡಿಸ್‌ಪ್ಲೇಯನ್ನ ಒಳಗೊಂಡಿದೆ. ಇದಲ್ಲದೆ ಈ ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಎಲ್‌ಜಿ

ಹೌದು, ಎಲ್‌ಜಿ ಕಂಪೆನಿ ತನ್ನ K ಸರಣಿಯಲ್ಲಿ ಬಜೆಟ್‌ ಬೆಲೆಯ LGK31 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಸದ್ಯ ಯುಎಸ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಸದ್ಯದಲ್ಲೇ ಭಾರತದಲ್ಲಿಯೂ ಬಿಡುಗಡೆ ಆಗಲಿದೆ. ಇನ್ನು ಇದು ಸಿಂಗಲ್‌ RAM ಮತ್ತು ಸ್ಟೋರೇಜ್‌ ಸಾಮರ್ಥ್ಯದ ಸಂರಚನೆಯಲ್ಲಿ ಲಭ್ಯವಾಗಲಿದೆ. ಜೊತೆಗೆ ಸಿಂಗಲ್‌ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಎಲ್‌ಜಿ K31 ಸ್ಮಾರ್ಟ್‌ಫೋನ್‌ ಕೆಳಭಾಗದಲ್ಲಿ ಹೆಡ್‌ಫೋನ್ ಜ್ಯಾಕ್‌ ಅನ್ನು ಒಳಗೊಂಡಿದೆ. ಅಲ್ಲದೆ ಇದರ ಎಡಭಾಗದಲ್ಲಿ ಗೂಗಲ್ ಅಸಿಸ್ಟೆಂಟ್ ಬಟನ್ ಸಹ ಇದೆ. ಇನ್ನುಳಿದಂತೆ ಇದರ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಎಲ್‌ಜಿ K31 ಸ್ಮಾರ್ಟ್‌ಫೋನ್‌ 720x1,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 5.7-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಫುಲ್‌ವಿಷನ್ ಡಿಸ್‌ಪ್ಲೇ ಆಗಿದ್ದು, 295 ಪಿಪಿ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಅಲ್ಲದೆ ಇದು 60Hz ರಿಫ್ರೆಶ್ ರೇಟ್‌ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P22 ಸೋಕ್ ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಎಲ್‌ಜಿ UX9.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 2GB RAM ಮತ್ತು 32GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 32GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ K31 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ವೈಡ್-ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಇದು 120 ಡಿಗ್ರಿ ಫಿಲ್ಡ್‌ ಆಪ್‌ ವ್ಯೂ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 3,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 11 ಗಂಟೆಗಳ ಟಾಕ್ ಟೈಮ್ ಅನ್ನು ಹೊಂದಿದೆ ಎಂದು ಹೇಳಲಾಗ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಬ್ಲೂಟೂತ್ ವಿ 5.0, ಜಿಪಿಎಸ್, 3.5 mm ಹೆಡ್‌ಫೋನ್ ಜ್ಯಾಕ್ ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಎಲ್‌ಜಿ K31 ಸ್ಮಾರ್ಟ್‌ಫೋನ್‌ ಬೆಲೆ $149.99 (ಸುಮಾರು ರೂ. 11,200) ಹೊಂದಿದೆ. ಇನ್ನು ಈ ಫೋನ್‌ ಸಿಲ್ವರ್ ಕಲರ್ ಆಯ್ಕೆಯಲ್ಲಿ ಲಬ್ಯವಾಗಲಿದ್ದು, ಯುಎಸ್‌ನಲ್ಲಿ ಎಲ್‌ಜಿ ವೆಬ್‌ಸೈಟ್‌ನಿಂದ ಖರೀದಿಸಲು ಲಭ್ಯವಿದೆ.

Best Mobiles in India

English summary
LG K31 is powered by the MediaTek Helio P22 octa-core SoC and comes with a single 2GB RAM option.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+