Just In
- 8 min ago
ಬಳಕೆದಾರಿಗೆ ಮತ್ತೊಂದು ಅಚ್ಚರಿಯ ಫೀಚರ್ಸ್ ಪರಿಚಯಿಸಿದ ವಾಟ್ಸಾಪ್!
- 1 hr ago
ಬಹು ನಿರೀಕ್ಷಿತ ರೆಡ್ಮಿ ನೋಟ್ 10 ಸ್ಮಾರ್ಟ್ಫೋನ್ ಸರಣಿ ಬಿಡುಗಡೆ! 108MP ಕ್ಯಾಮೆರಾ ವಿಶೇಷ!
- 3 hrs ago
ಭಾರತದಲ್ಲಿ ರೆಡ್ಮಿ ನೋಟ್ 10 ಸ್ಮಾರ್ಟ್ಫೋನ್ ಬಿಡುಗಡೆ! ಬೆಲೆ ಎಷ್ಟು?
- 4 hrs ago
ವಿವೋ S9 ಸ್ಮಾರ್ಟ್ಫೋನ್ ಸರಣಿ ಬಿಡುಗಡೆ! ಡ್ಯುಯೆಲ್ ಸೆಲ್ಫಿ ಕ್ಯಾಮೆರಾ ವಿಶೇಷ!
Don't Miss
- News
ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಟಿಎಂಸಿಗೆ ನಾಲ್ವರು ನಾಯಕರು!
- Sports
ಭಾರತ vs ಇಂಗ್ಲೆಂಡ್: ಒಂದು ವಿಕೆಟ್ನಿಂದ ದೊಡ್ಡ ದಾಖಲೆ ತಪ್ಪಿಸಿಕೊಂಡ ಅಕ್ಷರ್ ಪಟೇಲ್
- Automobiles
40ನೇ ಪ್ರೀಮಿಯಂ ಬೈಕ್ ಶೋರೂಂಗೆ ಭರ್ಜರಿಯಾಗಿ ಚಾಲನೆ ನೀಡಿದ ಬೆನೆಲ್ಲಿ ಇಂಡಿಯಾ
- Movies
ರಾಬರ್ಟ್ ಮುಗಿತು, ಯುವರತ್ನ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ
- Finance
ರೆಡ್ಮಿ ನೋಟ್ 10, ರೆಡ್ಮಿ ನೋಟ್ 10 ಪ್ರೊ, ರೆಡ್ಮಿ ನೋಟ್ 10 ಮ್ಯಾಕ್ಸ್ ಭಾರತದಲ್ಲಿ ಬಿಡುಗಡೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Lifestyle
ಬೇಸಿಗೆಯಲ್ಲಿ ದೇಹ ತಂಪಾಗಿಡಲು ಆರ್ಯುರ್ವೇದ ಟಿಪ್ಸ್
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಎಲ್ಜಿ K42 ಸ್ಮಾರ್ಟ್ಫೋನ್ ಅನಾವರಣ! ಬೆಲೆ ಎಷ್ಟು?
ಎಲೆಕ್ಟ್ರಾನಿಕ್ಸ್ ದೈತ್ಯ ಎನಿಸಿಕೊಂಡಿರುವ ಎಲ್ಜಿ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಎಲ್ಜಿ ಕಂಪೆನಿ ತನ್ನ ಹೊಸ ಎಲ್ಜಿ K42 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ.

ಹೌದು, ಎಲ್ಜಿ ಕಂಪೆನಿ ತನ್ನ ಎಲ್ಜಿ K42 ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಇದು 6.6 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ P22SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ
ಎಲ್ಜಿ K42 ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್ಡಿ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 270 PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ P22 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ಎಲ್ಜಿ K 42 ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್-ವೈಡ್-ಆಂಗಲ್ ಲೆನ್ಸ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0 ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಇನ್ನು ಈ ಸ್ಮಾರ್ಟ್ಫೋನ್ ಯುಎಸ್ ಮಿಲಿಟರಿ ಡಿಫೆನ್ಸ್ ಸ್ಟ್ಯಾಂಡರ್ಡ್ ಪರೀಕ್ಷೆಯ ಒಂಬತ್ತು ವಿಭಿನ್ನ ವಿಭಾಗಗಳನ್ನು ಉತ್ತೀರ್ಣವಾಗಿದೆ ಎಂದು ಹೇಳಲಾಗುತ್ತದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಎಲ್ಜಿ K42 ಸ್ಮಾರ್ಟ್ಫೋನ್ ಬೆಲೆ ಏಕೈಕ 3GB RAM + 64GB ಶೇಖರಣಾ ರೂಪಾಂತರಕ್ಕೆ 10,990 ರೂ.ಆಗಿದೆ. ಇದು ಫ್ಲಿಪ್ಕಾರ್ಟ್ ಮೂಲಕ ಪ್ರತ್ಯೇಕವಾಗಿ ಖರೀದಿಸಲು ಲಭ್ಯವಿರುತ್ತದೆ. ಇದು ಗ್ರೇ ಮತ್ತು ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190