ಎಲ್‌ಜಿ ಕಂಪೆನಿಯಿಂದ ಮೂರು ಹೊಸ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ!

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಮತ್ತೆ ಎಲ್‌ಜಿ ಕಂಪೆನಿ ಸಂಚಲನ ಮೂಡಿಸುವ ಸೂಚನೆ ನೀಡಿದೆ. ಈಗಾಗ್ಲೆ ಹೈ ರೇಂಜ್‌, ಮಿಡ್‌ ರೇಂಜ್‌, ಹಾಗೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಎಲ್‌ಜಿ ಕಂಪನಿ. ಇದೀಗ ಮತ್ತೆ ಹೊಸ ಆವೃತ್ತಿಯ ಮೂರು ಸ್ಮಾರ್ಟ್‌ಫೋನ್‌ ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು 4000mAh ಬ್ಯಾಟರಿ ಪ್ಯಾಕ್‌ಆಪ್‌ ಜೊತೆಗೆ ಕ್ವಾಡ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳಾಗಿವೆ.

ಹೌದು

ಹೌದು, ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ಕಂಪೆನಿ ತನ್ನ ಕೆ ಆವೃತ್ತಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಈ ಬಾರಿ ಕೆ ಸರಣಿಯಲ್ಲಿ LG K61, LG K51S, LG K41S ಎಂಬ ಮೂರು ಹೊಸ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದ್ದು, ಮಾರುಕಟ್ಟೆಯಲ್ಲಿ ಸೌಂಡ್‌ ಮಾಡೋ ಸೂಚನೆ ನೀಡಿದೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳು ಆಕರ್ಷಕ ವಿನ್ಯಾಸದ ಜೊತೆಗೆ ಅತ್ಯುತ್ತಮ ಫೀಚರ್ಸ್‌ಗಳನ್ನ ಹೊಂದಿವೆ ಎನ್ನಲಾಗ್ತಿದ್ದು, ಆ ಫೀಚರ್ಸ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿ.

LG K61 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

LG K61 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

LG K61 ಸ್ಮಾರ್ಟ್‌ಫೋನ್‌ 2560 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 19.5: 9 ಆಸ್ಪೆಕ್ಟ್‌ ರೆಶೀಯೋ ಹೊಂದಿದ್ದು, ಉತ್ತಮ ಬ್ರೈಟ್‌ನೆಶ್‌ ರೇಟಿಂಗ್‌ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಫುಲ್‌ ವಿಷನ್‌ ಡಿಸ್‌ಪ್ಲೇ ಆಗಿದ್ದು, ವಿಡಿಯೋ ವೀಕ್ಷಣೆಯಲ್ಲಿ ಹಾಗೂ ಗೇಮಿಂಗ್‌ನಲ್ಲೂ ಉತ್ತಮ ಅನುಭವ ನೀಡಲಿದೆ. ಡಿಸ್‌ಪ್ಲೇ ರಕ್ಷಣೆಗಾಗಿ ಗೋರಿಲ್ಲಾ ಗ್ಲಾಸ್‌ ಪ್ರೊಟೆಕ್ಷನ್‌ ಇರಲಿದೆ.

LG K61 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

LG K61 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ 2.3GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB / 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2 TB ಸ್ಟೋರೇಜ್‌ ಸಾಮರ್ಥ್ಯವನ್ನ ವಿಸ್ತರಿಸುವ ಅವಕಾಶವನ್ನ ನೀಡಲಾಗಿದೆ.

LG K61 ಸ್ಮಾರ್ಟ್‌ಫೋನ್‌ ಕ್ಯಾಮೆರಾ ವಿನ್ಯಾಸ

LG K61 ಸ್ಮಾರ್ಟ್‌ಫೋನ್‌ ಕ್ಯಾಮೆರಾ ವಿನ್ಯಾಸ

ಇದಲ್ಲದೆ LG K61 ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್‌ಸೆನ್ಸಾರ್‌ ಹೊಂದಿದ್ದು, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೂಪರ್‌ವೈಡ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಶೂಟರ್‌ಸೆನ್ಸಾರ್‌, ಹಾಗೂ ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ನೀಡಲಾಗಿದ್ದು, ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ಸಿಗಲಿದೆ ಎಂದು ಹೇಳಲಾಗ್ತಿದೆ.

LG K61 ಬ್ಯಾಟರಿ ಮತ್ತು ಇತರೆ

LG K61 ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, ವೇಗದ ಚಾಜಿಂರ್ಗ್‌ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ LG K61 ಸ್ಮಾರ್ಟ್‌ಫೋನ್‌ ವೈಫೈ, ಬ್ಲೂಟೂತ್‌ 5.0, NFC,GPS, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಹಾಗೂ ಡ್ಯುಯೆಲ್‌ ಸಿಮ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

LG K51S ಡಿಸ್‌ಪ್ಲೇ

LG K51S ಡಿಸ್‌ಪ್ಲೇ

LG K51S ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 20.9 ಆಸ್ಪೆಕ್ಟ್‌ ರೆಶೀಯೋ ಹೊಂದಿದ್ದು ಉತ್ತಮ ಸ್ಕ್ರೀನ್‌ ರೆಸಲ್ಯೂಶನ್‌ ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇ ಫುಲ್‌ ವಿಷನ್‌ ಡಿಸ್‌ಪ್ಲೇ ಆಗಿರುವುದರಿಂದ ವಿಡಿಯೋ ವೀಕ್ಷಣೆ, ವಿಡಿಯೋ ಕರೆಗಳು ಹಾಗೂ ಗೇಮಿಂಗ್‌ನಲ್ಲಿ ಉತ್ತಮ ಅನುಭವ ನೀಡಲಿದೆ. ಇನ್ನು ಈ ಡಿಸ್‌ಪ್ಲೇ ವಿನ್ಯಾಸ ಉತ್ತಮ ವಾಗಿದ್ದು, ಡಿಸ್‌ಪ್ಲೇ ಪ್ರೊಟೆಕ್ಷನ್‌ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

LG K51S ಪ್ರೊಸೆಸರ್‌

LG K51S ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ 2.3 GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ LG K51S ಸ್ಮಾರ್ಟ್‌ಫೋನ್‌ 3GB RAM, 64GB ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

LG K51S ಕ್ಯಾಮೆರಾ ವಿನ್ಯಾಸ

LG K51S ಕ್ಯಾಮೆರಾ ವಿನ್ಯಾಸ

LG K51S ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ರಿಯರ್‌ ಸೆಟ್‌ಆಪ್‌ ಹೊಂದಿದೆ. ಇನ್ನು ಮೊದಲನೇ ಕ್ಯಾಮೆರಾ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದ್ದು, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೂಪರ್‌ವೈಡ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

LG K51S ಬ್ಯಾಟರಿ ಮತ್ತು ಇತರೆ

LG K51S ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, ವೇಗದ ಚಾಜಿಂಗ್‌ ವ್ಯವಸ್ಥೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ ಬ್ಲೂಟೂತ್‌ v5, NFC, ಯುಎಸ್‌ಬಿ ಟೈಪ್‌-ಸಿ ಪೋರ್ಟ್‌, LTE, ವೈಫೈ, ಹಾಗೂ ಹಾಟ್‌ಸ್ಪಾಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ರಿಯರ್‌ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌,ಗೂಗಲ್‌ ಅಸಿಸ್ಟೆಂಟ್‌ ಬಟನ್‌, ಗೂಗಲ್‌ ಲೆನ್ಸ್‌ ಅನ್ನು ಸಹ ಒಳಗೊಂಡಿದೆ.

LG K41S ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

LG K41S ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿದ್ದು, ಉತ್ತಮ ವಿನ್ಯಾಸವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20:9 ಆಸ್ಪೆಕ್ಟ್‌ ರೆಶೀಯೋ ಹೊಂದಿದ್ದು, ಉತ್ತಮ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿದೆ ಎನ್ನಲಾಗ್ತಿದೆ. ಜೊತೆಗೆ ಈ ಡಿಸ್‌ಪ್ಲೇ ಫುಲ್‌ ವಿಷನ್‌ ಡಿಸ್‌ಪ್ಲೇ ಆಗಿರುವುದರಿಂದ ಗೇಮಿಂಗ್‌, ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನೀಡಲಿದೆ.

LG K41S ಪ್ರೊಸೆಸರ್‌

LG K41S ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ 2.0GHz ಆಕ್ಟಾ ಕೋರ್‌ ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

LG K41S ಕ್ಯಾಮೆರಾ ವಿನ್ಯಾಸ

LG K41S ಕ್ಯಾಮೆರಾ ವಿನ್ಯಾಸ

LG K41S ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದೆ. ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೂಪರ್‌ ವೈಡ್‌ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಶೂಟರ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

LG K41S ಬ್ಯಾಟರಿ ಮತ್ತು ಇತರೆ

LG K41S ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ ಕೂಡ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ ಬ್ಲೂಟೂತ್‌ v5, NFC, ಯುಎಸ್‌ಬಿ ಟೈಪ್‌-ಸಿ ಪೋರ್ಟ್‌, LTE, ವೈಫೈ, ಹಾಗೂ ಹಾಟ್‌ಸ್ಪಾಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ರಿಯರ್‌ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌,ಗೂಗಲ್‌ ಅಸಿಸ್ಟೆಂಟ್‌ ಬಟನ್‌, ಗೂಗಲ್‌ ಲೆನ್ಸ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ LG ಕಂಪೆನಿ LG K61, LG K51S, LG K41S ಸ್ಮಾರ್ಟ್‌ಫೋನ್‌ಗಳ ಬೆಲೆಗಳು ಬಹಿರಂಗಗೊಂಡಿಲ್ಲ, ಆದರೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗುವ ನಿರೀಕ್ಷೆಯಿದೆ ಎಂದು ಕಂಪನಿ ಹೇಳಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಮೊದಲು ಯುಎಸ್‌ನಲ್ಲಿ ಬಿಡುಗಡೆ ಆಗಲಿದ್ದು, ನಂತರ ಯುರೋಪ್ ಮತ್ತು ಏಷ್ಯಾದ ಪ್ರಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆ ಆಗಲಿದೆ. ಇದಲ್ಲದೆ ಟೈಟಾನಿಯಂ, ವೈಟ್ ಮತ್ತು ಬ್ಲೂ ಕಲರ್, ಪಿಂಕ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗಲಿವೆ.

Best Mobiles in India

English summary
All three LG phones also come with a rear fingerprint scanner, and are MIL-STD 810G compliant for sturdiness.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X