Home
ಸುದ್ದಿಜಾಲ

ಎಲ್‌ಜಿ ಸಂಸ್ಥೆಯಿಂದ LG K71 ಸ್ಮಾರ್ಟ್‌ಫೋನ್‌ ಬಿಡುಗಡೆ!

ದಕ್ಷಿಣ ಕೋರಿಯಾದ ಟೆಕ್‌ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ಸಂಸ್ಥೆ ತನ್ನ ಬಜೆಟ್‌ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ವಿವಿದ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಈಗಾಗಲೇ ತನ್ನ ಸ್ಥಾನವನ್ನು ಭದ್ರ ಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ LG K71 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಮತ್ತು ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದೆ.

ಎಲ್‌ಜಿ

ಹೌದು, ಎಲ್‌ಜಿ ಕಂಪೆನಿ ತನ್ನ LG K71 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಥಿಕ್‌ನೆಸ್‌ ಬೆಜೆಲ್‌ಗಳನ್ನು ಹೊಂದಿದ್ದು, ಸ್ಪ್ರಿಂಗ್-ಲೋಡೆಡ್ ಸ್ಟೈಲಸ್ ಪೆನ್‌ ಅನ್ನು ಒಳಗೊಂಡಿದೆ. ಅಲ್ಲದೆ ಸ್ಟೈಲಸ್‌ ಪೆನ್ ಅನ್ನು ಅಗತ್ಯವಿಲ್ಲದಿದ್ದಾಗ ಫೋನ್‌ಗೆ ಸ್ಲಾಟ್ ಮಾಡಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್‌ RAM ಮತ್ತು ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ಎಲ್‌ಜಿ K71 ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ಹೆಚ್‌ಡಿ + ಯು-ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 20.5:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ ಸುತ್ತಲೂ ಎಲ್ಲಾ ಕಡೆ ಥಿಕ್‌ ಬೆಜೆಲ್‌ಗಳನ್ನು ಒಳಗೊಂಡಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ P35 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಎಲ್‌ಜಿಯ ಕಸ್ಟಮ್ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 4GB RAM ಹಾಗೂ ಮೆಮೊರಿ ಕಾರ್ಡ್‌ ಮೂಲಕ ವಿಸ್ತರಿಸಬಹುದಾದ 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ K71 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4,000mAh ಬ್ಯಾಟರಿ ಸಾಮರ್ಥ್ಯದವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 5.0, ಎಲ್‌ಟಿಇ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಚಾರ್ಜಿಂಗ್‌ ಅನ್ನು ಸಹ ಹೊಂದಿದೆ. ಇದಲ್ಲದೆ ಇದು ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಫೋನ್ ಕೋಸ್ಟರಿಕಾ, ಡೊಮಿನಿಕನ್ ರಿಪಬ್ಲಿಕ್, ಎಲ್ ಸಾಲ್ವಡಾರ್, ಗ್ವಾಟೆಮಾಲಾ, ಹೊಂಡುರಾಸ್, ನಿಕರಾಗುವಾ, ಈಕ್ವೆಡಾರ್ ಮತ್ತು ಪನಾಮದಲ್ಲಿ ಬಿಡುಗಡೆ ಆಗಿದೆ. ಇದು ಹೋಲೋ ಟೈಟಾನ್ ಮತ್ತು ಹೋಲೋ ವೈಟ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಇದರ ಬೆಲೆ ಹೇಗಿದೆ ಅನ್ನೊದು ಸಹ ಇನ್ನು ಲಭ್ಯವಾಗಿಲ್ಲ. ಸದ್ಯ ಈ ಸ್ಮಾರ್ಟ್‌ಫೋನ್‌ ಇನ್ನು ಭಾರತದಲ್ಲಿ ಬಿಡುಗಡೆ ಆಗಿಲ್ಲ. ಆದರೆ ಸದ್ಯದಲ್ಲಿಯೇ ಭಾರತದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

Best Mobiles in India

English summary
LG K71 has been launched as the latest mid-range smartphone from the South Korean tech giant. It boasts of a full-HD+ display, triple rear camera setup, and an octa-core processor.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+