ಎಲ್‌ಜಿ K92 5G ಸ್ಮಾರ್ಟ್‌ಫೋನ್‌ ಬಿಡುಗಡೆ!..64ಎಂಪಿ ಕ್ಯಾಮೆರಾ!

|

ಜನಪ್ರಿಯ ಎಲ್‌ಜಿ ಕಂಪನಿಯು ಹಲವು ಸ್ಮಾರ್ಟ್‌ಫೋನ್‌ ಸರಣಿಗಳನ್ನು ಪರಿಚಯಿಸಿ ಮೊಬೈಲ್ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಎಲ್‌ಜಿ ಕಂಪನಿಯು ಇತ್ತೀಚಿಗೆ K ಸರಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದ್ದು, ಆ ಸರಣಿಯ ಮುಂದುವರಿದ ಭಾಗವಾಗಿ ಸಂಸ್ಥೆಯು ಈಗ ಎಲ್‌ಜಿ K92 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಸರಣಿಯಲ್ಲಿ

ಹೌದು, ಎಲ್‌ಜಿ ಕಂಪೆನಿ ತನ್ನ K ಸರಣಿಯಲ್ಲಿ ಎಲ್‌ಜಿ K92 5G ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 690 SoC ಪ್ರೊಸೆಸರ್‌ ಅನ್ನು ಹೊಂದಿದ್ದು, 4,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗೆಯೇ ಈ ಫೋನ್ 6GB RAM ಹಾಗೂ 128GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಎಲ್‌ಜಿ K92 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಫುಲ್‌ವಿಷನ್ ಡಿಸ್‌ಪ್ಲೇ ಆಗಿದ್ದು, ರೀಫ್ರೇಶ್ ರೇಟ್‌ ಸಹ ತನ್ನ ವರ್ಗದಲ್ಲಿಯೇ ಉತ್ತಮವಾಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಎಲ್‌ಜಿ K92 5G ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 690 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್‌ ಸಫೋರ್ಟ್‌ ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 6GB RAM ಹಾಗೂ 128GB ಆಂತರೀಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ K92 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದ್ದು, ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್‌ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಎಲ್‌ಜಿ K92 5G ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ ವೈ-ಫೈ 802.11 ಎಸಿ, ಎನ್‌ಎಫ್‌ಸಿ, ಬ್ಲೂಟೂತ್ 5.1, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಫೋನ್ ಸ್ಟೀರಿಯೋ ಸ್ಪೀಕರ್‌ಗಳನ್ನು ಹೊಂದಿದೆ, ಎಲ್‌ಜಿ 3 ಡಿ ಸೌಂಡ್ ಎಂಜಿನ್ ಅನ್ನು ಬೆಂಬಲಿಸುತ್ತದೆ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೌಲಭ್ಯ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಎಲ್‌ಜಿ K92 5G ಸ್ಮಾರ್ಟ್‌ಫೋನ್‌ ಬೆಲೆಯು $ 359 (ಭಾರತದಲ್ಲಿ ಸರಿಸುಮಾರು 26,600ರೂ ಎಂದು ಅಂದಾಜಿಸಲಾಗಿದೆ). ಭಾರತದಲ್ಲಿ ಈ ಫೋನ್‌ ಲಭ್ಯತೆಯ ಬಗ್ಗೆ ಮಾಹಿತಿ ಹೊರಹಾಕಿಲ್ಲ.

Best Mobiles in India

English summary
The LG K92 5G has a quad rear camera setup with a 64-megapixel main sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X