ಎಲ್‌ಜಿ ಕಂಪೆನಿಯ ಎಲ್‌ಜಿ Q51 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ದಕ್ಷಿಣ ಕೋರಿಯಾ ಮೂಲದ ಎಲೆಕ್ಟ್ರಾನಿಕ್ಸ್‌ ದೈತ್ಯ ಎಲ್‌ಜಿ ಕಂಪೆನಿ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈಗಾಗಲೇ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಮೂಲಕ ಜನಪ್ರಿಯತೆ ಗಳಿಸಿರುವ ಎಲ್‌ಜಿ ಕಂಪೆನಿ, ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ವಲಯದಲ್ಲೂ ಸೈ ಎನಿಸಿಕೊಂಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಬಿಡುಗಡೆಯಾಗಿದ್ದ Q ಸರಣಿಯ ಮುಂದುವರೆದ ಆವೃತ್ತಿ ಎನ್ನಲಾಗಿದ್ದು, ಈ ಸ್ಮಾರ್ಟ್‌ಫೋನ್‌ ಸದ್ಯ ದಕ್ಷಿಣ ಕೋರಿಯಾದಲ್ಲಿ ಮಾತ್ರ ಬಿಡುಗಡೆಯಾಗಿದೆ.

ಹೌದು

ಹೌದು, ಎಲೆಕ್ಟ್ರಾನಿಕ್ಸ್‌ ಉತ್ತನ್ನಗಳ ಕ್ಷೇತ್ರದಲ್ಲಿ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ಕಂಪೆನಿ ತನ್ನ ಹೊಸ ಎಲ್‌ಜಿ Q51 ಸ್ಮಾರ್ಟ್‌ಫೋನ್‌ ಅನ್ನು ದಕ್ಷಿಣ ಕೋರಿಯಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ದಕ್ಷಿಣ ಕೋರಿಯಾದಲ್ಲಿ ಎಲ್‌ಜಿ ಅಪ್ಲಸ್, ಎಸ್ಕೆ ಟೆಲಿಕಾಂ, ಮತ್ತು ಕೆಟಿ, ಎಂಬ ಮೂರು ನೆಟ್‌ವರ್ಕ್ ನಲ್ಲಿ ಮಾತ್ರ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಸದ್ಯ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಎಲ್‌ಜಿ Q51 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಎಲ್‌ಜಿ Q51 ಸ್ಮಾರ್ಟ್‌ಫೋನ್‌ 720 x 1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.5-ಇಂಚಿನ ಫುಲ್‌ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ ಯು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದ್ದು, ಫುಲ್‌ವಿಷನ್ ವಿ-ನಾಚ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇಯು 19.5: 9 ರ ಅನುಪಾತವನ್ನು ಹೊಂದಿದ್ದು, ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವವನ್ನು ನೀಡಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ 2GHz ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ P22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ ಒಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 2TBಯವರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ Q51 ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13ಮೆಗಾ ಪಿಕ್ಸೆಲ್‌, ಎರಡನೇ ಕ್ಯಾಮೆರಾ 5ಮೆಗಾ ಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದ್ದು, LED ಫ್ಲ್ಯಾಶ್‌ ಅನ್ನು ಒಳಗೊಂಡಿದೆ. ಇದಲ್ಲದೆ 13ಮೆಗಾ ಪಿಕ್ಸೆಲ್‌ ಸೆನ್ಸಾರ್‌ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಉತ್ತಮ ಬ್ಯಾಟರಿ ಬಾಳಿಕೆ ಬರಲಿದೆ. ಅಲ್ಲದೆ ಈ ಬ್ಯಾಟರಿಯು ನಾನ್‌ ರಿಮೋವೆಬಲ್‌ ಆಗಿದೆ. ಇದು ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆಯಾ ಅನ್ನುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌ v5.0, NFC, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಎಲ್‌ಜಿ Q51 ಸ್ಮಾರ್ಟ್‌ಫೋನ್‌ ದಕ್ಷಿಣ ಕೋರಿಯಾದಲ್ಲಿ ಮಾತ್ರ ಬಿಡುಗಡೆಯಾಗಿದ್ದು ಈ ಸ್ಮಾರ್ಟ್‌ಫೋನ್‌ ಬೆಲೆ KRW 317,000 (ಅಂದಾಜು 18,820ರೂ)ಆಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫ್ರೋಝನ್‌ ವೈಟ್‌ ಮತ್ತು ಮೂನ್‌ಲೈಟ್ ಟೈಟಾನಿಯಂ ಕಲರ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
LG has expanded its smartphone portfolio by launching its latest Q51.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X