ಎಲ್‌ಜಿ ಕಂಪನಿಯಿಂದ Q31 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಜನಪ್ರಿಯ ಎಲ್‌ಜಿ ಕಂಪೆನಿ ಈಗಾಗಲೇ ಹಲವು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಹೊಸದಾಗಿ LG Q31 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್ ಮಾಡೆಲ್ ಸ್ಮಾರ್ಟ್‌ಫೋನ್ ಆಗಿದೆ. ಆದರೆ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ.

ಹೊಸದಾಗಿ

ಹೌದು, ಎಲ್‌ಜಿ ಕಂಪೆನಿಯು ಹೊಸದಾಗಿ ಎಲ್‌ಜಿ Q31 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 10 ಓಎಸ್‌ ಪಡೆದಿದೆ. ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಮಾದರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಎಲ್‌ಜಿ Q31 ಸ್ಮಾರ್ಟ್‌ಫೋನ್‌ 5.7 ಇಂಚಿನ ಫುಲ್‌ವಿಷನ್ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು ಹೆಚ್‌ಡಿ ಪ್ಲಸ್‌ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 147.9 x 71 x 8.7mm ಸುತ್ತಳತೆಯನ್ನು ಪಡೆದಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಎಲ್‌ಜಿ Q31 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ P22 ಸೋಕ್ ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 3GB RAM ಮತ್ತು 32GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ Q31 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ವೈಡ್-ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಎಲ್‌ಜಿ Q31 ಸ್ಮಾರ್ಟ್‌ಫೋನ್‌ 3,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಬ್ಲೂಟೂತ್ ವಿ 5.0, ಜಿಪಿಎಸ್, 3.5 mm ಹೆಡ್‌ಫೋನ್ ಜ್ಯಾಕ್ ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಎಲ್‌ಜಿ Q31 ಸ್ಮಾರ್ಟ್‌ಫೋನ್‌ ಬೆಲೆ ದಕ್ಷಿಣ ಕೊರೊಯಾದಲ್ಲಿ 2,09,000 Won (ಭಾರತದಲ್ಲಿ ಅಂದಾಜು 13,000ರೂ) ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೆಟಾಲಿಕ್ ಸಿಲ್ವರ್ ಬಣ್ಣದ ಆಯ್ಕೆಯನ್ನು ಹೊಂದಿದೆ.

Best Mobiles in India

English summary
LG Q31 relies on the MediaTek Helio P22 chipset. It is combined with 3GB of RAM and 32GB of internal storage.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X