ಎಲ್ಜಿ ಕ್ಯೂ 52 ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷ ಎನಿಸುವ ಫೀಚರ್ಸ್!
ಎಲೆಕ್ಟ್ರಾನಿಕ್ಸ್ ವಲಯದಲ್ಲಿ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಹೈ ಎಂಡ್ ಮತ್ತು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಎಲ್‌ಜಿ ಕ್ಯೂ 52 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಎಲ್‌ಜಿ ಕ್ಯೂ 51 ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ.

ಹೌದು, ಎಲ್‌ಜಿ ಸಂಸ್ಥೆ ತನ್ನ ಹೊಸ ಎಲ್‌ಜಿ ಕ್ಯೂ 52 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಎಲ್‌ಜಿ ಕ್ಯೂ52 ಸ್ಮಾರ್ಟ್‌ಫೋನ್ 6.6-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್
ಇದು 2.3GHz ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ ವಿಶೇಷತೆ
ಎಲ್‌ಜಿ ಕ್ಯೂ52 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಫೋನ್‌ನಲ್ಲಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಅನ್ನು ಬೆಂಬಲಿಸಲಿದೆ. ಜೊತೆಗೆ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಎಲ್‌ಜಿ ಕ್ಯೂ52 ಸ್ಮಾರ್ಟ್‌ಫೋನ್ ಸದ್ಯ ದಕ್ಷಿಣ ಕೊರಿಯಾದಲ್ಲಿ ಬಿಡುಗಡೆ ಮಾಡಲಾಗಿದ್ದು, ಇದರ ಬೆಲೆ KRW 3,30,000 (ಸುಮಾರು 21,500 ರೂ) ಬೆಲೆಯೊಂದಿಗೆ ಬಿಡುಗಡೆ ಮಾಡಲಾಗಿದೆ. ಇನ್ನು ಈ ಫೋನ್ ಸಿಲ್ಕಿ ವೈಟ್ ಮತ್ತು ಸಿಲ್ಕಿ ರೆಡ್ ಎಂಬ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಎಲ್ಜಿ ಕ್ಯೂ 52 ಅಕ್ಟೋಬರ್ 28 ರಂದು ಮಾರಾಟವಾಗಲಿದೆ.


Click it and Unblock the Notifications








