ಎಲ್‌ಜಿ Q61 ಸ್ಮಾರ್ಟ್‌ಫೋನ್ ಬಿಡುಗಡೆ! ಆತ್ಯಾಕರ್ಷಕ ಫೀಚರ್ಸ್‌!

|

ಟೆಕ್‌ ವಲಯದಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಸಾಕಷ್ಟು ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿವೆ. ಇನ್ನು ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳಿದ್ದರೂ ಸ್ಮಾರ್ಟ್‌ಫೋನ್‌ ಪ್ರಿಯರು ಮಾತ್ರ ತಮ್ಮ ನೆಚ್ಚಿನ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯ ಇವುಗಳಲ್ಲಿ ಎಲ್‌ಜಿ ಕಂಪೆನಿ ಕೂಡ ಒಂದಾಗಿದ್ದು ವಿಶೇಷ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಎಲ್‌ಜಿ

ಹೌದು, ಎಲ್‌ಜಿ ಕಂಪೆನಿ ತನ್ನ ಹೊಸ ಎಲ್‌ಜಿ Q61 ಸ್ಮಾರ್ಟ್‌ಫೋನ್ ಅನ್ನು ದಕ್ಷಿಣ ಕೊರಿಯಾದಲ್ಲಿ ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅನ್ನು ಎಲ್‌ಜಿ ಕಂಪೆನಿ ತನ್ನ ಬಹು ನಿರೀಕ್ಷಿತ ಎಲ್‌ಜಿ ಕ್ಯೂ ಸರಣಿಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಹ್ಯಾಂಡ್‌ಸೆಟ್ ಮೂಲತಃ ಎಲ್‌ಜಿ K61 ರ ಜಾಗತಿಕ ಆವೃತ್ತಿಯಾಗಿದ್ದು, ಇದನ್ನು ಎಲ್‌ಜಿ k51s ಮತ್ತು ಎಲ್‌ಜಿ k41s ಫೋನ್‌ಗಳ ಜೊತೆಗೆ ಬಿಡುಗಡೆ ಮಾಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಎಲ್‌ಜಿ Q61 ಸ್ಮಾರ್ಟ್‌ಫೋನ್‌ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದ್ದು, ಈ ಡಿಸ್‌ಪ್ಲೇಯು ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು FHD + ರೆಸಲ್ಯೂಶನ್‌ಗೆ ಬೆಂಬಲವನ್ನು ನೀಡುತ್ತದೆ. ಜೊತೆಗೆ 19.5: 9 ಎಚನೆಯ ಅನುಪಾತವನ್ನ ಈ ಡಿಸ್‌ಪ್ಲೇ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ 2.3GHz ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2TBಯವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ಹಾಗೂ ನಾಲ್ಕನೇ ಕ್ಯಾಮೆರಾ 5ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ ಎನ್ನಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಸಹ ನಿಡಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 4,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ LTE , ವೈ-ಫೈ ಡ್ಯುಯಲ್ ಬ್ಯಾಂಡ್, ಬ್ಲೂಟೂತ್ 5.0, NFC, ಮತ್ತು ಯುಎಸ್‌ಬಿ ಟೈಪ್-ಸಿ ಅನ್ನು ಬೆಂಬಲಿಸುತ್ತದೆ. ಇನ್ನು ಇದರ ಬೆಲೆ ಅಂದಾಜು 22,740 ರೂ. ಬೆಲೆಯನ್ನ ಹೊಂದಿದೆ ಎನ್ನಲಾಗ್ತಿದೆ.

Best Mobiles in India

Read more about:
English summary
The key highlights of the handset are a big punch-hole display, a quad-camera setup including a 48-megapixel camera, and more. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X