ಎಲ್‌ಜಿ ಸಂಸ್ಥೆಯಿಂದ ಎಲ್‌ಜಿ ಸ್ಟೈಲ್ 3 ಸ್ಮಾರ್ಟ್‌ಫೋನ್ ಬಿಡುಗಡೆ!
ಟೆಕ್ ವಲಯದಲ್ಲಿಯೂ ಕೂಡ ಕೊರೊನಾ ಬೀತಿ ಆವರಿಸಿರೊದ್ರಿಂದ ಸಾಕಷ್ಟು ಈವೆಂಟ್‌ಗಳು ರದ್ದಾಗಿವೆ. ಪ್ರತಿನಿತ್ಯವೂ ಒಂದಲ್ಲ ಒಂದು ಸ್ಮಾರ್ಟ್‌ಫೋನ್‌ಗಳ ಬಿಡುಗಡೆಗೆ ವೇದಿಕೆ ಆಗುತ್ತಿದ್ದ ಟೆಕ್‌ವಲಯ ಸಾಕಷ್ಟು ಹಿನ್ನಡೆಯನ್ನ ಅನುಭವಿಸಿದೆ. ಇದರ ನಡುವೆಯೂ ಕೆಲ ಬ್ರಾಂಡ್ ಕಂಪೆನಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳನ್ನ ಆನ್‌ಲೈನ್ ಈವೆಂಟ್‌ಗಳ ಮೂಲಕ ಇಲ್ಲವೇ ಸಣ್ಣ ಪ್ರಮಾಣದ ವೇದಿಕೆ ಕಾರ್ಯಕ್ರಮಗಳ ಮೂಲಕ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡುತ್ತಿವೆ. ಇಂತಹ ಕಂಪೆನಿಗಳಲ್ಲಿ ಎಲ್‌ಜಿ ಕಂಪನಿ ಕೂಡ ಒಂದಾಗಿದ್ದು, ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಎಲ್‌ಜಿ ಕಂಪೆನಿ ತನ್ನ ಹೊಸ ಎಲ್‌ಜಿ ಸ್ಟೈಲ್ 3 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಹೊಸ ಆಕರ್ಷಕ ವಿನ್ಯಾಸವನ್ನ ಹೊಂದಿದೆ ಎಂದು ಹೇಳಲಾಗಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ಎಲ್‌ಜಿ V40 ಥಿಂಕ್ಯೂನ ಟ್ವೀಕ್ಡ್ ಆವೃತ್ತಿಯಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಡಿಸ್‌ಪ್ಲೇ
ಎಲ್‌ಜಿ ಸ್ಟೈಲ್ 3 ಸ್ಮಾರ್ಟ್‌ಫೋನ್ 1,440x3,120 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.1-ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಕ್ಯೂಹೆಚ್ಡಿ + ಒಎಲ್‌ಇಡಿ ಡಿಸ್‌ಪ್ಲೇ ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು 19.5:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಉತ್ತಮ ಪಿಪಿಐ ಪಿಕ್ಸೆಲ್ ಸಾಂಧ್ರತೆಯನ್ನ ಒಳಗೊಂಡಿದೆ. ಜೊತೆಗೆ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 845 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಎಲ್‌ಜಿ ಸ್ಟೈಲ್3 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯಕ್ಯಾಮೆರಾ 48 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ f/ 2.2 ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ, 8 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ 3,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE , ವೈ-ಫೈ, ಬ್ಲೂಟೂತ್ V5.0, GPS, NFC, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಅಲ್ಲದೆ ರಿಯರ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ಬೆಲೆ ಏನು ಅನ್ನೊದು ಮಾತ್ರ ತಿಳಿದು ಬಂದಿಲ್ಲ.


Click it and Unblock the Notifications








