Home
ಸುದ್ದಿಜಾಲ

ಎಲ್‌ಜಿ V60 ಥಿನ್‌ಕ್ಯೂ(ThinQ) ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಬಹಿರಂಗ!

ಸ್ಮಾರ್ಟ್‌ಫೋನ್‌ ವಲಯದ ವಿಸ್ಮಯ ಅಂತಾನೆ ಗುರ್ತಿಸಿಕೊಂಡಿದ್ದ ಡ್ಯುಯೆಲ್‌ ಸ್ಕ್ರೀನ್‌ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಹೊಸತನದ ಪರಿಚಯವಾಗಿ ಬಂದ ಈ ಸ್ಮಾರ್ಟ್‌ಫೋನ್‌ಗಳು ಇಂದು ಸಖತ್‌ ಸೌಂಡ್‌ ಮಾಡ್ತಿರೋದು ಎಲ್ಲರಿಗೂ ಗೊತ್ತಿರುವಂತಹದ್ದೆ. ಈ ಹಾದಿಯಲ್ಲಿ LG ಕಂಪೆನಿ ಕೂಡ ಡ್ಯುಯೆಲ್‌ ಸ್ಕ್ರೀನ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿತ್ತು. ಇದೀಗ ಮತ್ತೆ ತನ್ನ ಹೊಸ ಆವೃತ್ತಿಯ ಡ್ಯುಯೆಲ್‌ ಸ್ಕ್ರೀನ್‌ ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಬಿಡಲು ಎಲ್‌ಜಿ ಕಂಪೆನಿ ತಯಾರಿ ನಡೆಸಿದೆ.

ಎಲೆಕ್ಟ್ರಾನಿಕ್ಸ್‌

ಹೌದು, ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಕ್ಷೇತ್ರದಲ್ಲಿ ಸೈ ಎನಿಸಿಕೊಂಡಿರುವ ಎಲ್‌ಜಿ ಕಂಪೆನಿ, ಸ್ಮಾರ್ಟ್‌ಫೋನ್‌ ವಲಯದಲ್ಲೂ ಜನಪ್ರಿಯತೆ ಪಡೆದಿದೆ. ಹೊಸ ಮಾದರಿಯ ಫೀಚರ್ಸ್‌ಗಳ ಸ್ಮಾರ್ಟ್‌ಪೋನ್‌ಗಳನ್ನ ಪರಿಚಯಿಸಿದೆ. ಸದ್ಯ ಎಲ್‌ಜಿ ಕಂಪೆನಿ ತನ್ನ ಹೊಸ V60 ಥಿನ್‌ಕ್ಯೂ (ThinQ) ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ V50ಥಿನ್‌ಕ್ಯೂ (ThinQ) ಸ್ಮಾರ್ಟ್‌ಫೋನ್‌ನ ಮುಂದುವರೆದ ಆವೃತ್ತಿ ಎಂದು ಹೇಳಲಾಗ್ತಿದೆ. ಈ ಹೊಸ ಫೋನ್‌ ಕೂಡ ಡ್ಯುಯಲ್ ಸ್ಕ್ರೀನ್ ಮಾದರಿಯಲ್ಲಿ ಬರಲಿದ್ದು,ಫೀಚರ್ಸ್‌ಗಳೇನು ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದೆ. ಹಾಗಾದ್ರೆ ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಎಲ್‌ಜಿ V60 ಥಿನ್‌ಕ್ಯೂ (ThinQ) ಸ್ಮಾರ್ಟ್‌ಫೋನ್‌ 6.3 ಇಂಚಿನ ಬೆಜೆಲ್‌ಲೆಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಡ್ಯುಯೆಲ್‌ ಸ್ಕ್ರೀನ್‌ ಅನ್ನು ಹೊಂದಿದ್ದು, ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಯ ಸ್ಕ್ರೀನ್‌ ರೆಸಲ್ಯೂಶನ್‌ ಎಷ್ಟಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ. ಆದರೆ ಇದು ಡ್ಯುಯೆಲ್‌ ಸ್ಕ್ರೀನ್‌ಡಿಸ್‌ಪ್ಲೇ ಹೊಂದಿರುವುದರಿಂದ ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ ನಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 855 ಆಕ್ಟಾ ಕೋರ್‌ ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಎಲ್‌ಜಿ V60 ಥಿನ್‌ಕ್ಯೂ (ThinQ) ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಂಭಾಗದಲ್ಲಿ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ ಸೆಟ್‌ಆಪ್‌ನಲ್ಲಿ ಮೊದಲನೇ ಕ್ಯಾಮೆರಾ 13ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಹಾಗೂ ಮೂರನೇ ಕ್ಯಾಮೆರಾ 16ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, ವೇಗದ ಚಾರ್ಜಿಂಗ್‌ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ನಾಲ್ಕು ಮೈಕ್ರೋಫೋನ್‌ಗಳನ್ನ ಹೊಂದಿದೆ ಎನ್ನಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಯುಎಸ್ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಮತ್ತು ಸ್ಪೀಕರ್ ಗ್ರಿಲ್ಸ್‌, ಬ್ಲೂಟೂತ್‌ 5.0 ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ತಿಂಗಳು ಬಾರ್ಸಿಲೋನಾದಲ್ಲಿ ನಡೆಯಲಿರುವ ಮೊಬೈಲ್‌ ವರ್ಲ್ಡ್‌ ಕಾಂಗ್ರೆಸ್‌ ಸಮ್ಮೆಳನದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಬೆಲೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
LG V60 ThinQ was earlier expected to launch at the Mobile World Congress (MWC) 2020 in Barcelona later this month.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+