Home
ಸುದ್ದಿಜಾಲ

ಎಲ್‌ಜಿ ವೆಲ್ವೆಟ್‌ 4G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

ಸ್ಮಾರ್ಟ್‌ಫೋನ್‌ ವಲಯದಲ್ಲಿ ಎಲ್‌ ಕಂಪೆನಿ ತನ್ನದೆ ಆದ ಜನಪ್ರಿಯತೆಯನ್ನ ಪಡೆದುಕೊಂಡಿದೆ. ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಸಹ ಪರಿಚಯಿಸಿದೆ. ಅಲ್ಲದೆ ತನ್ನ ವಿಶೇಷ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರನ್ನ ತನ್ನತ್ತ ಸೆಳೆದಿದೆ. ಸದ್ಯ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಎಲ್‌ಜಿ ಇದೀಗ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಎಲ್‌ಜಿ

ಹೌದು, ಎಲೆಕ್ಟ್ರಾನಿಕ್ಸ್‌ ದೈತ್ಯ ಎಲ್‌ಜಿ‌ ಕಂಪೆನಿ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಸಿದ್ದತೆ ನಡೆಸಿದೆ. ಕಳೆದ ತಿಂಗಳು ಎಲ್‌ಜಿ ವೆಲ್ವೆಟ್ ಅನ್ನು ಪರಿಚಯಿಸಿದ್ದ ಎಲ್‌ಜಿ ಕಂಪೆನಿ ಈ ಬಾರಿ ಆದರ 4G ಮಾದರಿಯನ್ನ ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 845 SoC ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎಂದು ಹೆಳಲಾಗ್ತಿದೆ. ಸದ್ಯ ಲಭ್ಯ ವರದಿಯ ಪ್ರಕಾರ, ಪ್ರೊಸೆಸರ್, RAM, ಸಂಗ್ರಹಣೆ ಮತ್ತು ಬ್ಲೂಟೂತ್ ಮಾಹಿತಿಯನ್ನು ತೋರಿಸುವ ಲೈವ್ ಚಿತ್ರದಲ್ಲಿ ಮಾದರಿ ಸಂಖ್ಯೆ LM-G910 ಹೊಂದಿರುವ ಎಲ್ಜಿ ಫೋನ್ ಅನ್ನು ಗುರುತಿಸಲಾಗಿದೆ. ಅಷ್ಟಕ್ಕೂ ಈ ಸ್ಮಾರ್ಟ್‌ಫೋನ್‌ ವಿನ್ಯಾಸ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ನು ಈ ಸ್ಮಾರ್ಟ್‌ಫೋನ್‌ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.8-ಇಂಚಿನ ಫುಲ್‌ ಹೆಚ್‌‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಸಿನೆಮಾ ಫುಲ್‌ವಿಷನ್ ಪೋಲ್ಡ್ ಡಿಸ್‌ಪ್ಲೇ ಆಗಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಎಲ್‌ಜಿ ವೆಲ್ವೆಟ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 845 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6 GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ಮತ್ತು ಇತರೆ

ಕ್ಯಾಮೆರಾ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ ಎಂದು ಅಂದಾಜಿಲಸಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು ವಾಯರ್‌ಲೆಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ V 5.0 ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ $ 550 (ಸರಿಸುಮಾರು ರೂ. 41,500) ಹೊಂದಿರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

English summary
LG Velvet 4G variant may launch in regions that do have 5G support yet.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+