ಎಲ್‌ಜಿ ವೆಲ್ವೆಟ್‌ 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಟೆಕ್ ಮಾರುಕಟ್ಟೆಯಲ್ಲಿ ತನ್ನದೇ ಆದ ವಿಭಿನ್ನ ಸ್ಮಾರ್ಟ್‌ಫೋನ್‌ಗಳಿಗೆ ಎಲ್‌ಜಿ ಕಂಪೆನಿ ಹೆಸರುವಾಸಿಯಾಗಿದೆ. ತನ್ನ ವಿಶಿಷ್ಟ ಶೈಲಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಈಗಾಗಲೇ ಹಲವು ವಿಶಿಷ್ಟ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಎಲ್‌ಜಿ ಕಂಪೆನಿ ಇತ್ತೀಚಿನ ದಿನಗಳಲ್ಲಿ ಹೊಸ ಡಿಸೈನ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಬಿಡುಗಡೆಗೆ ಸಿದ್ದತೆ ನಡೆಸಿದೆ. ಪ್ರತಿ ಭಾರಿಯು ನವೀನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಎಲ್‌ಜಿ ಈ ಭಾರಿ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲಿದೆ ಎನ್ನಲಾಗ್ತಿದೆ.

ವಲಯದಲ್ಲಿ

ಹೌದು, ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ದೈತ್ಯ ಎಂದೇ ಖ್ಯಾತಿ ಪಡೆದುಕೊಂಡಿರುವ ಎಲ್‌ಜಿ ಕಂಪೆನಿ ಪ್ರತಿ ಭಾರಿಯು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಲೇ ಬಂದಿದೆ. ಸದ್ಯ ಇದೀಗ ತನ್ನ ಎಲ್‌ಜಿ ಜಿ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಹೊಸ ಆವತರಣಿಕೆಯಲ್ಲಿ ತರಲು ಮುಂದಾಗಿದ್ದು, ಹೊಸದಾಗಿ ಎಲ್‌ಜಿ ವೆಲ್ವೆಟ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲಿದೆ ಎಂದು ಹೇಳಲಾಗ್ತಿದೆ. ಸದ್ಯ ಬಿಡುಗಡೆಗೆ ಸಿದ್ದವಾಗಿರುವ ಎಲ್‌ಜಿ ವೆಲ್ವೆಟ್‌ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿರಲಿದೆ ಅನ್ನೊದು ಬಹಿರಂಗಗೊಂಡಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸದ್ಯ ಲೀಕ್‌ ಮಾಹಿತಿ ಪ್ರಕಾರ ಎಲ್‌ಜಿ ವೆಲ್ವೆಟ್‌ 5G ಸ್ಮಾರ್ಟ್‌ಫೋನ್‌ ಹೊಸ ಮಾದರಿಯ ಡಿಸ್‌ಪ್ಲೇ ವಿನ್ಯಾಸ ಹೊಂದಿರುವ ಸಾದ್ಯತೆ ಇದೆ. ಹೊಸ ಆವತರಣಿಕೆಯಲ್ಲಿ ಈ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗುತ್ತಿದ್ದು ಇದು ಆಮೋಲೆಡ್‌ ಡಿಸ್‌ಪ್ಲೆ ವಿನ್ಯಾಸವನ್ನ ಹೊಂದಿರಲಿದೆ ಎಂದು ನಿರೀಕ್ಷಿಲಸಾಗಿದೆ. ಇನ್ನು ಈ ಡಿಸ್‌ಪ್ಲೇಯು 6.1ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ ಈ ಡಿಸ್‌ಪ್ಲೇಯು ವೀಡಿಯೋ ವೀಕ್ಷಣೆ ಹಾಗೂ ವೀಡಿಯೋ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇಯನ್ನ ಹೊಂದಿದೆ.ಅಲ್ಲದೆ ಇನ್ನು ಈ ಡಿಸ್‌ಪ್ಲೇಯು ಐಪಿ 68 ಡಸ್ಟ್‌ ರೆಸಿಸ್ನಟೆಂಟ್‌ ಹಾಗೂ ವಾಟರ್‌ ಪ್ರೂಪ್‌ ರೇಟಿಂಗ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಅಂದರೆ ಇದರ ಪ್ರೊಸೆಸರ್‌ ಆಗಿದ್ದು, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765 ಪ್ರೊಸೆಸರ್‌ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ ವೆಲ್ವೆಟ್‌ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರನಡೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಎಲ್‌ಜಿ ವೆಲ್ವೆಟ್ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು ವೇಗದ ವೈರ್ಡ್ ಚಾರ್ಜಿಂಗ್ ಮತ್ತು ವೈರ್ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುವ ಸಾದ್ಯತೆ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್‌ ಅನ್ನು ಹೊಂದಿರುವ ಸಾಧ್ಯತೆ ಇದೆ. ಅಲ್ಲದೆ ಎಐ-ಚಾಲಿತ ವಾಯ್ಸ್‌ ಔಟ್‌ಪುಟ್‌ ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅರೋರಾ ಗ್ರೀನ್, ಅರೋರಾ ಗ್ರೇ, ಅರೋರಾ ವೈಟ್ ಮತ್ತು ಇಲ್ಯೂಷನ್ ಸನ್ಸೆಟ್ ಬಣ್ಣ ಆಯ್ಕೆಗಳಲ್ಲಿ ಲಬ್ಯವಾಗುವ ನಿರೀಕ್ಷೆ ಇದ್ದು, ಈ ಸ್ಮಾರ್ಟ್‌ಫೋನ್ ಮೇ 7 ರಂದು ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
The LG Velvet will be an upper mid-range, 5G-anabled device with the Snapdragon 765 SoC, 8GB RAM, 48 megapixel camera and more.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X