Home
ಸುದ್ದಿಜಾಲ

LG Velvet: ಎಲ್‌ಜಿ ವೆಲ್ವೆಟ್‌ 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ಟೆಕ್ ಮಾರುಕಟ್ಟೆಯಲ್ಲಿ ಎಲೆಕ್ಟ್ರಾನಿಕ್ಸ್‌ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ಕಂಪೆನಿ ತನ್ನದೇ ಆದ ವಿಭಿನ್ನ ಸ್ಮಾರ್ಟ್‌ಫೋನ್‌ಗಳನ್ನು ಸಹ ಪರಿಚಯಿಸಿದೆ. ತನ್ನ ವಿಶಿಷ್ಟ ಶೈಲಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಈಗಾಗಲೇ ಹಲವು ವಿಶಿಷ್ಟ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಎಲ್‌ಜಿ ಕಂಪೆನಿ ಇತ್ತೀಚಿನ ದಿನಗಳಲ್ಲಿ ಹೊಸ ಡಿಸೈನ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಬಿಡುಗಡೆಗೆ ಸಿದ್ದತೆ ನಡೆಸಿದೆ. ಪ್ರತಿ ಭಾರಿಯು ನವೀನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಎಲ್‌ಜಿ ಈ ಭಾರಿ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಹೌದು

ಹೌದು, ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ದೈತ್ಯ ಎಂದೇ ಖ್ಯಾತಿ ಪಡೆದುಕೊಂಡಿರುವ ಎಲ್‌ಜಿ ಕಂಪೆನಿ ತನ್ನ ಎಲ್‌ಜಿ ಜಿ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಹೊಸ ಆವತರಣಿಕೆಯಲ್ಲಿ ತರಲು ಮುಂದಾಗಿದೆ ಎನ್ನಲಾಗ್ತಿತ್ತು. ಆದರಂರೆ ಇದೀಗ ಹೊಸದಾಗಿ ಎಲ್‌ಜಿ ವೆಲ್ವೆಟ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಇದೀಗ ಬಿಡುಗಡೆ ಆಗಿರುವ ಎಲ್‌ಜಿ ವೆಲ್ವೆಟ್‌ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸದ್ಯ ಎಲ್‌ಜಿ ವೆಲ್ವೆಟ್ ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಹೊಂದಿರುವ 6.8-ಇಂಚಿನ ಫುಲ್‌ ಎಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಪೋಲ್ಡ್ ಡಿಸ್‌ಪ್ಲೇಯನ್ನು ಹೊಂದಿದ್ದು, 20: 5: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಎಲ್ಜಿ ವೆಲ್ವೆಟ್‌ ಸ್ಮಾರ್ಟ್‌ಫೋನ್‌ ಡ್ಯುಯಲ್ ಸ್ಕ್ರೀನ್ ಕ್ರಿಯಾತ್ಮಕತೆ ಬೆಂಬಲ ಮತ್ತು ಸೆಲ್ಫಿ ಕ್ಯಾಮೆರಾ ವಿನ್ಯಾಸ ಉತ್ತಮವಾಗಿರುವುದಕ್ಕಾಗಿ ವಾಟರ್‌ಡ್ರಾಪ್ ನಾಚ್ ಶೈಲಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ ವೆಲ್ವೆಟ್‌ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ ಎಎಸ್ಎಂಆರ್ ರೆಕಾರ್ಡಿಂಗ್ ಎಂಬ ಹೊಸ ಮಾದರಿಯ ಫೀಚರ್ಸ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ವೇಗದ ವಾಯರ್‌ ಮತ್ತು ವಾಯರ್‌ ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಆಡಿಯೊ ಜ್ಯಾಕ್, 5G, 4G LTE, ವೈ-ಫೈ, NFC, ಬ್ಲೂಟೂತ್, GPS, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಫೋನ್‌ ಸ್ಟೈಲಸ್‌ ಅನ್ನು ಬೆಂಬಲಿಸಲಿದೆ ಮತ್ತು ಕೈಬರಹವನ್ನು ಪಠ್ಯಕ್ಕೆ ಪರಿವರ್ತಿಸುವ ಅಪ್ಲಿಕೇಶನ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಎಲ್ಜಿ ವೆಲ್ವೆಟ್ ಸ್ಮಾರ್ಟ್‌ಫೋನ್‌ ಬೆಲೆ won 899,800 (ಅಂದಾಜು 55,900 ರೂ.) ಆಗಿದ್ದು, ಇದು ಮೊದಲು ಕೊರಿಯಾದಲ್ಲಿ ಮಾರಾಟವಾಗಲಿದೆ. ಅಲ್ಲದೆ ಇದು ‘ಅರೋರಾ ಗ್ರೀನ್', ‘ಅರೋರಾ ಗ್ರೇ', ‘ಅರೋರಾ ವೈಟ್' ಮತ್ತು ‘ಇಲ್ಯೂಷನ್ ಸನ್ಸೆಟ್' ಎಂಬ ನಾಲ್ಕು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
LG Velvet is powered by Qualcomm’s Snapdragon 765G processor, and it offers a triple camera setup at the rear.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+