Just In
Don't Miss
- Education
International Labour Day 2021: ಮೇ 1ರಂದು ಕಾರ್ಮಿಕರ ದಿನವನ್ನಾಗಿ ಏಕೆ ಆಚರಿಸಲಾಗುತ್ತೆ ?
- News
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ಸೋಂಕಿತೆ ಸಾವು
- Sports
ಐಪಿಎಲ್ 2021: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್
- Movies
ಸಿನಿಮಾಕ್ಕಾಗಿ ಪ್ರಭಾಸ್-ಸೈಪ್ ಅಲಿ ಖಾನ್ ತೆಗೆದುಕೊಳ್ಳುತ್ತಿದ್ದಾರೆ ದೊಡ್ಡ ರಿಸ್ಕ್
- Finance
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಏಪ್ರಿಲ್ 19ರ ಮಾರುಕಟ್ಟೆ ದರ ಇಲ್ಲಿದೆ
- Automobiles
ಪವರ್ಫುಲ್ ಎಂಜಿನ್ ಹೊಂದಿರುವ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್ಯುವಿ ಕಾರಿನ ವಿಡಿಯೋ
- Lifestyle
ಪ್ರತಿದಿನ ಒಂದು ಕಪ್ ಅನಾನಸ್ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳಿವು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲ್ಜಿ ಸಂಸ್ಥೆಯಿಂದ ಮತ್ತೆ ಮೂರು ಬಜೆಟ್ ಬೆಲೆಯ ಫೋನ್ಗಳ ಘೋಷಣೆ!
ಎಲ್ಜಿ ಮೊಬೈಲ್ ತಯಾರಿಕಾ ಸಂಸ್ಥೆಯು ಬಜೆಟ್ ದರದಲ್ಲಿ ಹಲವು ಸ್ಮಾರ್ಟ್ಫೋನ್ಗಳನ್ನು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಅದರ ಬೆನ್ನಲೇ ಎಲ್ಜಿ ಕಂಪನಿಯು W ಸರಣಿಯಲ್ಲಿ ಈಗ ಮತ್ತೆ ಮೂರು ನೂತನ ಸ್ಮಾರ್ಟ್ಫೋನ್ಗಳನ್ನು ದೇಶಿಯ ಮಾರುಕಟ್ಟೆಗೆ ಅನಾವರಣ ಮಾಡಿದೆ. ಈ ಸ್ಮಾರ್ಟ್ಫೋನ್ಗಳು ಆಕರ್ಷಕ ಫೀಚರ್ಸ್ ಜೊತೆ ಬಜೆಟ್ ಪ್ರೈಸ್ ಅನ್ನು ಹೊಂದಿವೆ.

ಹೌದು, ಎಲ್ಜಿ ಕಂಪನಿಯು W ಸರಣಿಯಲ್ಲಿ ಎಲ್ W11, ಎಲ್ಜಿ W31 ಹಾಗೂ ಎಲ್ಜಿ W31+ ಹೆಸರಿನ ಮೂರು ಸ್ಮಾರ್ಟ್ಫೋನ್ಗಳನ್ನು ಘೋಷಣೆ ಮಾಡಿದೆ. ಈ ಮೂರು ಸ್ಮಾರ್ಟ್ಫೋನ್ಗಳು ಆಂಡ್ರಾಯ್ಡ್ 10 ಓಎಸ್ ಅನ್ನು ಹೊಂದಿದ್ದು, ಗೂಗಲ್ ಅಸಿಸ್ಟಂಟ್ ಬಟನ್ ಅನ್ನು ಪಡೆದಿವೆ. ಹಾಗೆಯೇ ಈ ಮೂರು ಸ್ಮಾರ್ಟ್ಫೋನ್ಗಳು 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಅನ್ನು ಒಳಗೊಂಡಿವೆ. ಹಾಗಾದರೇ ಈ ಎಲ್ಜಿ ಈ ಮೂರು ಸ್ಮಾರ್ಟ್ಫೋನ್ಗಳ ಫೀಚರ್ಸ್ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಎಲ್ W11 ಸ್ಮಾರ್ಟ್ಫೋನ್
ಎಲ್ W11 ಸ್ಮಾರ್ಟ್ಫೋನ್ 6.52-ಇಂಚಿನ ಹೆಚ್ಡಿ + ಫುಲ್ ವಿಷನ್ ಡಿಸ್ಪ್ಲೇಯನ್ನು ಹೊಂದಿದೆ. 2.0GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಣೆಗೆ ಅವಕಾಶ ನೀಡಿದೆ. ಇದರೊಂದಿಗೆ 3GB RAM ಮತ್ತು 32GB ಆಂತರಿಕ ಸಂಗ್ರಹಣೆಯ ಆಯ್ಕೆ ಪಡೆದಿದೆ. ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದೆ. ಜೊತೆಗೆ 4,000mAh ಬ್ಯಾಟರಿ ಬ್ಯಾಕ್ಅಪ್ ಹೊಂದಿದೆ.

ಎಲ್ W31 ಸ್ಮಾರ್ಟ್ಫೋನ್
ಎಲ್ W31 ಸ್ಮಾರ್ಟ್ಫೋನ್ 6.52-ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. 2.0GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಣೆಗೆ ಅವಕಾಶ ನೀಡಿದೆ. ಇದರೊಂದಿಗೆ 4GB RAM ಮತ್ತು 64GB ಆಂತರಿಕ ಸಂಗ್ರಹಣೆಯ ಆಯ್ಕೆ ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಇದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5ಎಂಪಿ ಸೆನ್ಸಾರ್ನಲ್ಲಿದ್ದು, ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದೆ. ಜೊತೆಗೆ 4,000mAh ಬ್ಯಾಟರಿ ಬ್ಯಾಕ್ಅಪ್ ಹೊಂದಿದೆ.

ಎಲ್ W31+ ಸ್ಮಾರ್ಟ್ಫೋನ್
ಎಲ್ W31+ ಸ್ಮಾರ್ಟ್ಫೋನ್ ಸಹ 6.52-ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. 2.0GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಣೆಗೆ ಅವಕಾಶ ನೀಡಿದೆ. ಇದರೊಂದಿಗೆ 4GB RAM ಮತ್ತು 128GB ಆಂತರಿಕ ಸಂಗ್ರಹಣೆಯ ಆಯ್ಕೆ ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಇದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5ಎಂಪಿ ಸೆನ್ಸಾರ್ನಲ್ಲಿದ್ದು, ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದೆ. ಜೊತೆಗೆ 4,000mAh ಬ್ಯಾಟರಿ ಬ್ಯಾಕ್ಅಪ್ ಹೊಂದಿದೆ.

ಬೆಲೆ ಎಷ್ಟು?
ಭಾರತದಲ್ಲಿ ಎಲ್ಜಿ W11 ಫೋನಿನ ಆರಂಭಿಕ ವೇರಿಯಂಟ್ ಬೆಲೆಯ 9,490ರೂ. ಆಗಿದೆ. ಬರುತ್ತದೆ. ಎಲ್ W31 ಸ್ಮಾರ್ಟ್ಫೋನ್ ಬೇಸ್ ವೇರಿಯಂಟ್ ದರವು 10,990ರೂ.ಗಳು ಆಗಿದೆ. ಹಾಗೂ ಎಲ್ W31+ ಫೋನ್ ಆರಂಭಿಕ ಬೆಲೆಯು 11,990ರೂ.ಗಳು ಆಗಿದೆ. ಕಂಪನಿಯು ಈ ಫೋನ್ಗಳ ಅಧಿಕೃತ ಬಿಡುಗಡೆ ದಿನಾಂಕ ಬಹಿರಂಗ ಮಾಡಿಲ್ಲ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999