Home
ಸುದ್ದಿಜಾಲ

ಎಲ್‌ಜಿ ವಿಂಗ್‌ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ!

ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ಕಂಪೆನಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲೂ ಸೈ ಎನಿಸಿಕೊಂಡಿದೆ. ಎಲ್‌ಜಿ ಕಂಪೆನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಇದರಲ್ಲಿ ಎಲ್‌ಜಿ ವಿಂಗ್‌ ಸ್ಮಾರ್ಟ್‌ಫೋನ್‌ ಕೂಡ ಒಂದು. ಸದ್ಯ ಇದೀಗ ಭಾರತದಲ್ಲಿ ಎಲ್‌ಜಿ ವಿಂಗ್‌ ಸ್ಮಾರ್ಟ್‌ಫೋನ್‌ ಬೆಲೆಯನ್ನು ಕಡಿತಗೊಳಿಸಿದೆ.

ಎಲ್‌ಜಿ

ಹೌದು, ಎಲ್‌ಜಿ ಕಂಪೆನಿ ಎಲ್‌ಜಿ ವಿಂಗ್ ಸ್ಮಾಟಫೋನ್‌ ಬೆಲೆಯಲ್ಲಿ ಭಾರಿ ಕಡಿತಗೊಳಿಸಲಾಗಿದೆ. ಭಾರತದಲ್ಲಿ 69,990 ರೂ.ಬೆಲೆಯಲ್ಲಿ ಬಿಡುಗಡೆ ಆಗಿದ್ದ ಈ ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 29,999 ರೂ. ಗಳಿಗೆ ಲಭ್ಯವಾಗಲಿದೆ. ಆಂದರೆ ಬರೋಬ್ಬರಿ 40,000 ರೂ ನಷ್ಟು ಬೆಲೆ ಕಡಿತ ಮಾಡಲಾಗಿದೆ. ಅಲ್ಲದೆ ಫ್ಲಿಪ್‌ಕಾರ್ಟ್ ಎಲ್ಜಿ ವಿಂಗ್‌ ಸ್ಮಾರ್ಟ್‌ಫೋನ್‌ ಒಂದು ವರ್ಷದ ಖಾತರಿ ಮತ್ತು ಐದು ವರ್ಷಗಳ ಸೇವೆಯನ್ನು ಪಟ್ಟಿ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಎಲ್‌ಜಿ ವಿಂಗ್ ಸ್ಮಾರ್ಟ್‌ಫೋನ್‌ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಪಿ-ಒಎಲ್ಇಡಿ ಫುಲ್ವಿಷನ್ ಡಿಸ್‌ಪ್ಲೇ ಆಗಿದೆ. ಇನ್ನು ದ್ವಿತೀಯ ಡಿಸ್‌ಪ್ಲೇ 1,080x1,240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 3.9-ಇಂಚಿನ ಫುಲ್‌ ಹೆಚ್‌ಡಿ + ಜಿ-ಒಎಲ್ಇಡಿ ಸ್ಕ್ರೀನ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 765G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಕ್ಯೂ ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಎಲ್‌ಜಿ ವಿಂಗ್ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಕ್ವಿಕ್ ಚಾರ್ಜ್ 4.0+ 25W ಫಾಸ್ಟ್ ಚಾರ್ಜಿಂಗ್ ಮತ್ತು 10W ವಾಯರ್‌ಲೆಸ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4GLTE-A, ವೈ-ಫೈ, ಬ್ಲೂಟೂತ್ ವಿ 5.1 ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ 8GB RAM + 128GB ಶೇಖರಣಾ ಮಾದರಿ ಮಾತ್ರ ಲಭ್ಯವಿದ್ದು, ಇದರ ಬೆಲೆ ಇದೀಗ ಫ್ಲಿಪ್ಕಾರ್ಟ್ ನಲ್ಲಿ ಕೇವಲ 29,999, ರೂ ಆಗಿದೆ. ಇದರ ಮೂಲ ಬೆಲೆ ಭಾರತದಲ್ಲಿ 69,990 ರೂ.ಆಗಿತ್ತು ಅನ್ನೊದು ಇಲ್ಲಿ ಗಮನಿಸಬೇಕಾದ ಸಂಗತಿ. ಇನ್ನು ಈ ಬೆಲೆ ಕಡಿತ ಇದೇ ಏಪ್ರಿಲ್ 13 ರಿಂದ ಶುರುವಾಗಲಿದೆ. ಈ ಸ್ಮಾರ್ಟ್‌ಫೋನ್‌ ಅರೋರಾ ಗ್ರೇ ಮತ್ತು ಇಲ್ಯೂಷನ್ ಸ್ಕೈ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
LG Wing Receives A Massive Price CUt With A Whopping Rs. 40000 discount.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+