ದೇಶಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಎಲ್‌ಜಿ ವಿಂಗ್‌ ಸ್ಮಾರ್ಟ್‌ಫೋನ್‌!..ಬೆಲೆ ಎಷ್ಟು?

|

ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ದೈತ್ಯ ಎನಿಸಿಕೊಂಡಿರುವ ಎಲ್‌ಜಿ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಹೈ ಎಂಡ್‌ ಮತ್ತು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಸ್ವಿವೆಲ್ ಸ್ಕ್ರೀನ್ ಫೋನ್ - ಎಲ್ಜಿ ವಿಂಗ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಸ್ವಿವೆಲ್ ಸ್ಕ್ರೀನ್‌ ಅನ್ನು ಒಳಗೊಂಡಿದ್ದು, ಇದು 90 ಡಿಗ್ರಿಗಳಲ್ಲಿ ಪ್ರದಕ್ಷಿಣಾಕಾರವಾಗಿ ತಿರುಗುತ್ತದೆ.

ಎಲ್‌ಜಿ

ಹೌದು, ಎಲ್‌ಜಿ ಸಂಸ್ಥೆ ತನ್ನ ಹೊಸ ಎಲ್‌ಜಿ ವಿಂಗ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಇದು ಹೊಸ ಮಾದರಿಯ ಡ್ಯುಯೆಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು, ಸ್ವಿವೆಲ್ ಸ್ಕ್ರೀನ್‌ ಅನ್ನು ಒಳಗೊಂಡಿದೆ. ಇದರಿಂದ ಸ್ಕ್ರೀನ್‌ ಅನ್ನು 90 ಡಿಗ್ರಿಯಲ್ಲಿ ಪ್ರದಕ್ಷಿಣಾಕಾರವಾಗಿ ತಿರುಗಿಸಬಹುದಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಎಲ್‌ಜಿ ವಿಂಗ್‌ ಸ್ಮಾರ್ಟ್‌ಫೋನ್‌ ಪ್ರೈಮರಿ ಡಿಸ್‌ಪ್ಲೇ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ಸಾಮರ್ಥ್ಯ ಹೊಂದಿದ್ದು, 6.8-ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಪಿ-ಒಲೆಡ್ ಫುಲ್‌ವಿಷನ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು, 20.5:9 ರಚನೆಯ ಅನುಪಾತವನ್ನು ಹೊಂದಿದೆ. ಇದು 395PP ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಸೆಕೆಂಡರಿ ಡಿಸ್‌ಪ್ಲೇ 1,080x1,240 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 3.9-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 1.15: 1 ರಚನೆಯ ಅನುಪಾತ ಮತ್ತು 419 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೇಯೇ 8GB RAM ಮತ್ತು 128GB, 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಎಲ್‌ಜಿ ವಿಂಗ್‌ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಅಲ್ಲದೆ ಈ ಕ್ಯಾಮೆರಾ ಸೆಟಪ್ ಹೆಕ್ಸಾ-ಮೋಷನ್ ಸ್ಟೆಬಿಲೈಜರ್ ಅನ್ನು ಸಹ ಹೊಂದಿದೆ ಮತ್ತು ಗಿಂಬಲ್ ಮೋಷನ್ ಕ್ಯಾಮೆರಾ ಫೀಚರ್ಸ್‌ ಜೊತೆಗೆ ಕಾರ್ಯನಿರ್ವಹಿಸುತ್ತದೆ. ಇದು ದ್ವಿತೀಯ ಪರದೆಯಲ್ಲಿ ಲಭ್ಯವಿರುವ ವರ್ಚುವಲ್ ಜಾಯ್‌ಸ್ಟಿಕ್ ಬಳಸಿ ಡ್ಯುಯಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ಗಳ ಕ್ಯಾಮೆರಾ ಕೋನಗಳನ್ನು ನಿಯಂತ್ರಿಸಲು ಬಳಕೆದಾರರಿಗೆ ಅನುವು ಮಾಡಿಕೊಡುತ್ತದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು ಕ್ವಿಕ್ ಚಾರ್ಜ್ 4.0+ 25 ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್ ಮತ್ತು 10 ಡಬ್ಲ್ಯೂ ವೈರ್ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE-A, ವೈ-ಫೈ, ಬ್ಲೂಟೂತ್ v5.1, NFC, GPS ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಎಲ್‌ಜಿ ವಿಂಗ್ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 128GB ಶೇಖರಣಾ ರೂಪಾಂತರಕ್ಕೆ 69,990 ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅರೋರಾ ಗ್ರೇ ಮತ್ತು ಇಲ್ಯೂಷನ್ ಸ್ಕೈ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಇದು ನವೆಂಬರ್ 9 ರಿಂದ ಮಾರಾಟವಾಗಲಿದೆ.

Best Mobiles in India

Read more about:
English summary
LG Wing price in India has been set at Rs.69,990 for the base 128GB storage variant.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X