ಕಡಿಮೆ ಬೆಲೆಯಲ್ಲಿ ಅಧಿಕ ಸ್ಟೋರೇಜ್ ಫೋನ್ ಬೇಕಿದ್ರೆ, ಈ ಲಿಸ್ಟ್ ಗಮನಿಸಿ!
ಪ್ರಸ್ತುತ ಪ್ರತಿಯೊಬ್ಬರಿಗೂ ಸ್ಮಾರ್ಟ್‌ಫೋನ್ ಅಗತ್ಯ ಡಿವೈಸ್ ಆಗಿದ್ದು, ಗ್ರಾಹಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಫೋನ್ ಖರೀದಿಗೆ ಮುಂದಾಗುತ್ತಾರೆ. ಅದರಲ್ಲಿಯೂ ಮುಖ್ಯವಾಗಿ ಅಧಿಕ ಸ್ಟೋರೇಜ್ ಆಯ್ಕೆ ಪಡೆದಿರುವ ಜೊತೆಗೆ ಬಜೆಟ್ ಬೆಲೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಅನ್ನು ಆಯ್ಕೆ ಮಾಡಲು ಇಚ್ಛಿಸುತ್ತಾರೆ.
ಹೌದು, ಹೊಸ ಮೊಬೈಲ್ ಖರೀದಿಸುವಾಗ ಬಹುತೇಕರು ಗ್ರಾಹಕಸ್ನೇಹಿ ಬೆಲೆಗೆ ಲಭ್ಯವಿರುವ ಫೋನ್ ಆಯ್ಕೆ ಮಾಡಲು ಇಷ್ಟಪಡುತ್ತಾರೆ. ಅತ್ಯುತ್ತಮ ಕ್ಯಾಮೆರಾ, ವೇಗದ ಪ್ರೊಸೆಸರ್, ಉತ್ತಮ ಡಿಸ್‌ಪ್ಲೇ ಆಯ್ಕೆಗಳೊಂದಿಗೆ ಅಧಿಕ/ ಹೆಚ್ಚಿನ ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿರುವ ಫೋನ್‌ಗಳು ಗಮನ ಸೆಳೆಯುತ್ತವೆ. ಅಂತಹ ಕೆಲವು ಅಧಿಕ ಸ್ಟೋರೇಜ್ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ N53 : ಈ ಸ್ಮಾರ್ಟ್‌ಫೋನ್ 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು ಯುನಿಸೊಕ್ T612 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, 6GB+128GB ಆಯ್ಕೆ ಪಡೆದಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೈರ್ಡ್ ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಪೊಕೊ C55 : ಈ ಸ್ಮಾರ್ಟ್‌ಫೋನ್ 6.71 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, ಇದು 720 x 1650 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಈ ಫೋನ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, 64GB ಹಾಗೂ 128GB ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯ ಪಡೆದುಕೊಂಡಿದೆ. ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, 50ಎಂಪಿ ಪ್ರಾಥಮಿಕ ಕ್ಯಾಮೆರಾ ಪಡೆದಿದೆ. ಅಲ್ಲದೇ 5,000 mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದೆ.

ರೆಡ್ಮಿ A1+ : ಈ ಸ್ಮಾರ್ಟ್‌ಫೋನ್ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಫುಲ್ ಹೆಚ್‌ಡಿ + ಮಾದಿರಯ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದ್ದು, 2GB RAM + 32 GB ಮತ್ತು 3GB + 32GB ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ.
ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ 5000 mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 : ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ.


Click it and Unblock the Notifications








