Home
ಸುದ್ದಿಜಾಲ

ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ? ಇಲ್ಲಿವೆ ನೋಡಿ ನಿಮ್ಮಿಷ್ಟದ ಫೋನ್‌ಗಳು

ಈಗಂತೂ ವಾರದಲ್ಲಿ ಎರಡು ಮೂರು ಹೊಸ ಸ್ಮಾರ್ಟ್‌ಫೋನ್‌ಗಳು (Smartphones) ಲಾಂಚ್ ಆಗುತ್ತಲೇ ಇರುತ್ತವೆ. ಆದರೆ, ಲಾಂಚ್(Launch) ಆಗುವ ಹೊಸ ಸ್ಮಾರ್ಟ್‌ಫೋನ್‌ಗಳೆಲ್ಲಾ ಮಾರುಕಟ್ಟೆಯಲ್ಲಿ ಭದ್ರವಾಗಿ ನೆಲೆಯೂರಲು ಸಾಧ್ಯ ಆಗುವುದಿಲ್ಲ. ಇದಕ್ಕೆ ಹಲವಾರು ಕಾರಣಗಳಿರಬಹುದು. ಆದರೆ, ಲಾಂಚ್‌ ಆಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳಲ್ಲಿ ಈ ಫೋನ್‌ಗಳು ಮಾತ್ರ ಬಳಕೆದಾರರನ್ನು ಹೆಚ್ಚಾಗಿ ಆಕರ್ಷಿಸಿವೆ.

ಹೌದು, ಈಗಂತೂ ಬಹುಪಾಲು ಮಂದಿ ಹೊಸ ಸ್ಮಾರ್ಟ್‌ಫೋನ್‌ಗೆ ಅಪ್‌ಗ್ರೇಡ್‌ ಆಗಲು ಹಾತೊರೆಯುತ್ತಿರುತ್ತಾರೆ. ಅದರಂತೆ ವಿವಿಧ ಫೀಚರ್ಸ್‌ (Features) ಆಯ್ಕೆಯ ಹೊಸ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆಯಾದರೂ ಹಲವಾರು ಬಳಕೆದಾರರಿಗೆ ಯಾವ ಹೊಸ ಫೋನ್‌ ಸೂಕ್ತ ಎಂದು ತಿಳಿದಿರುವುದಿಲ್ಲ. ಹೀಗಾಗಿ ಕೆಲವು ದಿನಗಳ ಹಿಂದೆ ಲಾಂಚ್‌ ಆಗಿರುವ ಫೋನ್‌ಗಳು ಯಾವುವು?, ಅವುಗಳ ಬೆಲೆ ಎಷ್ಟು ಎಂಬಿತ್ಯಾದಿ ಮಾಹಿತಿಗಾಗಿ ಈ ಲೇಖನ ಓದಿರಿ.

ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ? ಇಲ್ಲಿವೆ ನೋಡಿ ನಿಮ್ಮಿಷ್ಟದ ಫೋನ್‌ಗಳು

ಒಪ್ಪೋ ರೆನೋ 10 5G: ಈ ಸ್ಮಾರ್ಟ್‌ಫೋನ್ 32,999ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಇದು 6.7ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಜೊತೆಗೆ 120Hz LTPSಡೈನಾಮಿಕ್ ರಿಫ್ರೆಶ್ ರೇಟ್‌ ಈ ಸ್ಮಾರ್ಟ್‌ಫೋನ್‌ನ ವಿಶೇಷತೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್ ಬಲ, 8GBRAM+256GB ಇಂಟರ್‌ ಸ್ಟೋರೇಜ್‌ ಬೆಂಬಲ ಹಾಗೂ 64MP+8MP+32MP ಟ್ರಿಪಲ್ ರಿಯರ್‌ ಕ್ಯಾಮೆರಾದೊಂದಿಗೆ ಕಾಣಿಸಿಕೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದೆ.

ಒನ್‌ಪ್ಲಸ್‌ ನಾರ್ಡ್‌ 3 5G: ಈ ಸ್ಮಾರ್ಟ್‌ಫೋನ್ 33,999ರೂ.ಗಳ ಬೆಲೆಯೊಂದಿಗೆ ಕಾಣಿಸಿಕೊಂಡಿದೆ. ಈ ಫೋನ್ 6.74 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, 120Hz ರಿಫ್ರೆಶ್ ರೇಟ್‌ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 9000ಪ್ರೊಸೆಸರ್, 8GBRAM ಬೆಂಬಲ ಫೋನ್‌ ಅನ್ನು ಉತ್ತಮವಾಗಿಸಿದೆ. ಉಳಿದಂತೆ 50MP+8MP+2MP ಟ್ರಿಪಲ್ ರಿಯರ್‌ ಕ್ಯಾಮೆರಾ, 16MP ಸೆಲ್ಫಿ ಕ್ಯಾಮೆರಾ ಆಯ್ಕೆ ವಿಶೇಷ ಎನಿಸಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ರಿಯಲ್‌ಮಿ C53: ಈ ಸ್ಮಾರ್ಟ್‌ಫೋನ್‌ 10,999ರೂ.ಗಳ ಬೆಲೆ ಹೊಂದಿದೆ. ಇದು 6.74ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದುಕೊಂಡಿದೆ. ಜೊತೆಗೆ ಯುನಿಸೊಕ್ T612 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ಈ ಫೋನ್ 6 GBRAM ಆಯ್ಕೆ ಹಾಗೂ 108MP ಡ್ಯುಯಲ್ ರಿಯರ್‌ ಕ್ಯಾಮೆರಾ ಹಾಗೂ 8MP ಸೆಲ್ಫಿ ಕ್ಯಾಮರಾ ಹೊಂದಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಪ್ಯಾಕ್‌ ಆಗಿದ್ದು, ಇದು ಫಾಸ್ಟ್‌ ಚಾರ್ಜಿಂಗ್ ಬೆಂಬಲ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34: ಈ ಸ್ಮಾರ್ಟ್‌ಫೋನ್‌ ಅನ್ನು ನೀವು 18,999ರೂ.ಗಳಿಗೆ ಖರೀದಿ ಮಾಡಬಹುದು. ಇದು 6.5 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, 120Hz ರಿಫ್ರೆಶ್ ರೇಟ್‌ ಆಯ್ಕೆ ಮೂಲಕ ವಿಶೇಷ ಎನಿಸಿದೆ. ಇದರ ಜೊತೆಗೆ ಸ್ಯಾಮ್‌ಸಂಗ್‌ ಎಕ್ಸಿನೋಸ್ 1280ಪ್ರೊಸೆಸರ್‌ ಹಾಗೂ 6GBRAM ಆಯ್ಕೆ ಪಡೆದಿದ್ದು, 50MP+8MP+2MP ಟ್ರಿಪಲ್ ರಿಯರ್‌ ಕ್ಯಾಮೆರಾ ಆಯ್ಕೆ ಹಾಗೂ 13MP ಸೆಲ್ಫಿ ಕ್ಯಾಮೆರಾ ಆಯ್ಕೆ ಆಕರ್ಷಕವಾಗಿದೆ. ಇದು 6000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದೆ.

ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ? ಇಲ್ಲಿವೆ ನೋಡಿ ನಿಮ್ಮಿಷ್ಟದ ಫೋನ್‌ಗಳು

ರಿಯಲ್‌ಮಿ 11 ಪ್ರೊ: ಈ ಸ್ಮಾರ್ಟ್‌ಫೋನ್ 23,599ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಹಾಗೂ 120Hz ರಿಫ್ರೆಶ್ ರೇಟ್‌ ಹೊಂದಿದೆ. ಉಳಿದಂತೆ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ ಬಲ ಪಡೆದಿರುವ ಈ ಫೋನ್ 8GBRAM ಅನ್ನು ಹೊಂದಿದ್ದು, ಇದರೊಂದಿಗೆ 100MP+2MP ಡ್ಯುಯಲ್ ರಿಯರ್‌ ಕ್ಯಾಮೆರಾ, 16MP ಸೆಲ್ಫಿ ಕ್ಯಾಮೆರಾದ ಆಯ್ಕೆ ಪಡೆದುಕೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬಾಟರಿಯಿಂದ ಪ್ಯಾಕ್‌ ಆಗಿದ್ದು, ಸೂಪರ್ ವೂಕ್‌ ಚಾರ್ಜಿಂಗ್‌ಗೆ ಬೆಂಬಲ ಪಡೆದಿದೆ.

ಐಕ್ಯೂ ನಿಯೋ 7 ಪ್ರೊ: ಈ ಸ್ಮಾರ್ಟ್‌ಫೋನ್ 34,999ರೂ.ಗಳ ಬೆಲೆ ಹೊಂದಿದೆ. ಇದರೊಂದಿಗೆ 6.78 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು,120Hz ರಿಫ್ರೆಶ್ ರೇಟ್‌ ನೊಂದಿಗೆ ಬಳಕೆದಾರರಿಗೆ ವಿಶೇಷ ಅನುಭವ ನೀಡಲಿದೆ. ಜೊತೆಗೆ ಸ್ನಾಪ್‌ಡ್ರಾಗನ್ 8 ಪ್ಲಸ್ ಜನ್ 1 ಪ್ರೊಸೆಸರ್‌ ಬಲ ಇದ್ದು, 8GBRAM ಆಯ್ಕೆ ಹಾಗೂ 50MP+8MP+2MP ಟ್ರಿಪಲ್ ರಿಯರ್‌ ಕ್ಯಾಮೆರಾ, 16MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಉಳಿದಂತೆ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಉತ್ತಮ ಬ್ಯಾಕಪ್‌ ನೀಡಲಿದೆ.

Best Mobiles in India

English summary
Even now, most people are eager to upgrade to a new smartphone. Accordingly, new smartphones with various features are available in the market and here are the best phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+