ಅಗ್ಗದ ಬೆಲೆಗೆ 1GB ಡೇಟಾ ಬೇಕೆ?..ಹಾಗಿದ್ರೆ, ಈ ಪ್ಲ್ಯಾನ್‌ಗಳನ್ನು ಗಮನಿಸಿ!
ಭಾರ್ತಿ ಏರ್‌ಟೆಲ್, ರಿಲಯನ್ಸ್ ಜಿಯೋ ಮತ್ತು ವಿ ಟೆಲಿಕಾಂಗಳು ಭಿನ್ನ ಶ್ರೇಣಿಯಲ್ಲಿ ಪ್ರಿಪೇಯ್ಡ್ ಯೋಜನೆಗಳ ಆಯ್ಕೆ ಪಡೆದಿವೆ. ಆ ಪೈಕಿ ಕೆಲವೊಂದು ಯೋಜನೆಗಳು ಆಕರ್ಷಕ ಡೇಟಾ ಪ್ರಯೋಜನ, ಅನಿಯಮಿಯ ವಾಯಿಸ್ ಕರೆ, ಬಿಗ್ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ. ಮತ್ತೆ ಕೆಲವು ಯೋಜನೆಗಳು ನಿಯಮಿತ ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಪಡೆದಿವೆ. ಕೆಲವು ಬಳಕೆದಾರರು ಅಗ್ಗದ ಬೆಲೆಗೆ ಅತ್ಯುತ್ತಮ ಎನಿಸುವ ಯೋಜನೆ ಗಳನ್ನು ರೀಚಾರ್ಜ್ ಮಾಡಲು ಮುಂದಾಗುತ್ತಾರೆ.

ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳ ಕೆಲವು ಯೋಜನೆಗಳು ಆಕರ್ಷಕ ಡೇಟಾ, ಅನಿಯಮಿತ ವಾಯಿಸ್ ಕರೆ ಹಾಗೂ ದೀರ್ಘ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ. ಕೆಲವು ಗ್ರಾಹಕರು ಅಧಿಕ ಡೇಟಾ ಸೌಲಭ್ಯ ಬಯಸಿದರೇ, ಮತ್ತೆ ಕೆಲವು ಗ್ರಾಹಕರು ಅಗ್ಗದ ದರದಲ್ಲಿ ಉತ್ತಮ ಸೌಲಭ್ಯವನ್ನು ಬಯಸುತ್ತಾರೆ. ಇನ್ನು ಕೆಲವರು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯಗಳ ಯೋಜನಗಳತ್ತ ಗಮನ ನೀಡುತ್ತಾರೆ. ಹಾಗಾದರೇ ಅಗ್ಗದ ಬೆಲೆಯಲ್ಲಿ 1 GB ಡೇಟಾ ಪ್ರಯೋಜನ ಪಡೆದ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಜಿಯೋದ 149ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನ
ಜಿಯೋ ಟೆಲಿಕಾಂನ 149ರೂ ಪ್ಲ್ಯಾನ್ ಒಟ್ಟು 20 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1 GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.
ಜಿಯೋದ 179ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನ
ಜಿಯೋ ಟೆಲಿಕಾಂನ 179 ರೂ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1 GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.

ವಿ ಟೆಲಿಕಾಂನ 199ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 18 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ಜಿಯೋದ 208ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನ
ಜಿಯೋ ಟೆಲಿಕಾಂನ 208 ರೂ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1 GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್ ಗಳಿಗೆ ಪೂರ್ಣ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.
ಏರ್‌ಟೆಲ್ 209ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.


Click it and Unblock the Notifications








