ಭಾರತದಲ್ಲಿ ಬಜೆಟ್‌ ಬೆಲೆಯ 'ಮಾರ್ಕ್ಯು M3ಸ್ಮಾರ್ಟ್‌'ಫೋನ್‌ ಬಿಡುಗಡೆ!

|

ಭಾರತದಲ್ಲಿ ಫ್ಲಿಪ್‌ಕಾರ್ಟ್ ಒಡೆತನದ ಮಾರ್ಕ್ಯುಬ್ರಾಂಡ್ ತನ್ನ ಮೊದಲ ಸ್ಮಾರ್ಟ್‌ಫೋನ್‌ ಮಾರ್ಕ್ಯು M3 ಸ್ಮಾರ್ಟ್‌ ಅನ್ನು ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಜೆಟ್‌ ಸ್ಮಾರ್ಟ್‌ಫೋನ್‌ ಆಗಿದೆ. ಇದು ವಾಟರ್ ಡ್ರಾಪ್ ಶೈಲಿಯ ನಾಚ್ ಅನ್ನು ಹೊಂದಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನ್‌ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಮಾರಾಟವಾಗಲಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಒಡೆತನದ ಮಾರ್ಕ್ಯು ಕಂಪೆನಿ ಮಾರ್ಕ್ಯು M3 ಸ್ಮಾರ್ಟ್‌ ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದು 6.088-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಈ ಫೋನ್‌ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಮಾರಾಟದ ಭಾಗವಾಗಿ, ಅಕ್ಟೋಬರ್ 7 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಹಾಗಾದ್ರೆ ಈ ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಮಾರ್ಕ್ಯು M3ಸ್ಮಾರ್ಟ್‌ ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.08 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 2.5D ಕರ್ವ್ಡ್ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 281 PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮಾರ್ಕ್ಯು M3ಸ್ಮಾರ್ಟ್‌ ಸ್ಮಾರ್ಟ್‌ಫೋನ್‌ 1.6GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮಾರ್ಕ್ಯು M3ಸ್ಮಾರ್ಟ್‌ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಬೊಕೆ ಲೆನ್ಸ್ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್, ಬ್ಯೂಟಿ ಮೋಡ್, ಸ್ಲೋ ಮೋಷನ್, ಟೈಮ್ ಲ್ಯಾಪ್ಸ್ ನಂತ ಫೀಚರ್ಸ್‌ಗಳು ಸೇರಿವೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 24 ಗಂಟೆಗಳ ಮ್ಯೂಸಿಕ್‌, 9 ಗಂಟೆಗಳ ಚಲನಚಿತ್ರ ವೀಕ್ಷಣೆ ಮತ್ತು ಸುಮಾರು 42 ಗಂಟೆಗಳ ಟಾಕ್‌ ಟೈಂ ಅನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇದು ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ ಆದರೆ ಫಿಂಗರ್ಪ್ರಿಂಟ್ ಸ್ಕ್ಯಾನರ್ ಇಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೋ ಜಾಕ್, ಮೈಕ್ರೋ ಯುಎಸ್‌ಬಿ ಪೋರ್ಟ್, ಡ್ಯುಯಲ್-ಸಿಮ್ ಸ್ಲಾಟ್‌ಗಳು, ವೈ-ಫೈ ಬಿ/ಜಿ/ಎನ್, ಬ್ಲೂಟೂತ್ ವಿ 4.2, ಜಿಪಿಎಸ್, 4 ಜಿ ಸಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮಾರ್ಕ್ಯು M3 ಸ್ಮಾರ್ಟ್ ಏಕೈಕ 2GB RAM + 32GB ಸ್ಟೋರೇಜ್ ಆಯ್ಕೆಗೆ 7,999ರೂ ಬೆಲೆ ಹೊಂದಿದೆ. ಆದರೆ, ಈ ಸ್ಮಾರ್ಟ್‌ಫೋನ್‌ 6,299ರೂ ಗಳಿಗೆ ಸೀಮಿತ ಅವಧಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್‌ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಮಾರಾಟದ ಭಾಗವಾಗಿ ಇದೇ ಅಕ್ಟೋಬರ್ 7 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಮಾರ್ಕ್ಯು ಎಂ 3 ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ನೀಲಿ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
MarQ M3 Smart lacks a fingerprint scanner and has a Micro USB port for charging.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X