ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್‌ ಖರೀದಿಸಿದರೆ ಸಿಗಲಿದೆ 10,000ರೂ. ಕ್ಯಾಶ್‌ಬ್ಯಾಕ್‌!

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈಗಾಗಲೇ ತನ್ನ ಗ್ಯಾಲಕ್ಸಿ ಎಂ, ಎ, ಎಸ್‌, ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಗ್ಯಾಲಕ್ಸಿ S21 ಸರಣಿಗೆ ಕ್ಯಾಶ್‌ಬ್ಯಾಕ್ ಘೋಷಿಸಿದೆ. ಗ್ಯಾಲಕ್ಸಿ S21 ಮತ್ತು S21+ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವಾಗ ವಿವಿಧ ಬ್ಯಾಂಕ್ ಕೊಡುಗೆಗಳ ಜೊತೆಗೆ, 10,000ರೂ.ವರೆಗಿನ ತ್ವರಿತ ಕ್ಯಾಶ್‌ಬ್ಯಾಕ್ ಅನ್ನು ಪಡೆದುಕೊಳ್ಳಬಹುದಾಗಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ S21 ಸರಣಿಗೆ ಕ್ಯಾಶ್‌ಬ್ಯಾಕ್‌ ಆಫರ್‌ ಘೋಷಣೆ ಮಾಡಿದೆ. ಇನ್ನು ಈ ಕ್ಯಾಸ್‌ಬ್ಯಾಕ್‌ ಆಫರ್‌ ಡಿಸೆಂಬರ್ 22 ರವರೆಗೆ ಲೈವ್ ಆಗಿರುತ್ತದೆ ಎಂದು ಹೇಳಲಾಗಿದೆ. ಸ್ಯಾಮ್‌ಸಂಗ್ ಈ ವರ್ಷದ ಜನವರಿಯಲ್ಲಿ S21 ಸರಣಿಯನ್ನು ಬಿಡುಗಡೆ ಮಾಡಿತ್ತು. ಹಾಗಾದ್ರೆ ಗ್ಯಾಲಕ್ಸಿ S21 ಸರಣಿ ಸ್ಮಾರ್ಟ್‌ಫೋನ್‌ಗಳ ಮೇಲೆ ಕ್ಯಾಶ್‌ಬ್ಯಾಕ್‌ ಪಡೆಯುವುದಕ್ಕೆ ಏನು ಮಾಡಬೇಕು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಆಫರ್‌ ಏನಿದೆ?

ಆಫರ್‌ ಏನಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 ಸ್ಮಾರ್ಟ್‌ಫೋನ್‌ ಮೇಲೆ ಸ್ಯಾಮ್‌ಸಂಗ್‌ ಕಂಪೆನಿ 10,000 ರೂಪಾಯಿಗಳ ತ್ವರಿತ ಕ್ಯಾಶ್‌ಬ್ಯಾಕ್ ಅನ್ನು ನೀಡುತ್ತಿದೆ. ಹೆಚ್ಚುವರಿಯಾಗಿ, ಗ್ರಾಹಕರು ಐಸಿಐಸಿಐ ಕಾರ್ಡ್‌ಗಳ ಮೇಲೆ 5,000 ಬ್ಯಾಂಕ್ ಕ್ಯಾಶ್‌ಬ್ಯಾಕ್ ಅಥವಾ 5,000 ಅಪ್‌ಗ್ರೇಡ್ ಬೋನಸ್ ಅನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಈ ಸ್ಮಾರ್ಟ್‌ಫೋನ್‌ನ ಬೆಲೆ 44,999ರೂ.ಗಳಿಗೆ ಇಳಿದಿದೆ. ಇನ್ನು ಸ್ಯಾಮ್‌ಸಂಗ್ ತನ್ನ Galaxy S21+ ಸ್ಮಾರ್ಟ್‌ಫೋನ್‌ ಖರೀದಿಸಿದರೂ ಕೂಡ ನಿಮಗೆ 10,000 ರೂಪಾಯಿಗಳ ಕ್ಯಾಶ್‌ಬ್ಯಾಕ್ ಅನ್ನು ಸಹ ನೀಡುತ್ತಿದೆ. ಖರೀದಿದಾರರು ICICI ಕಾರ್ಡ್‌ಗಳ ಮೇಲೆ 10,000ರೂ. ಬ್ಯಾಂಕ್ ಕ್ಯಾಶ್‌ಬ್ಯಾಕ್ ಪಡೆಯಲು ಸಾದ್ಯವಾಗಲಿದೆ. ಆಸಕ್ತ ಗ್ರಾಹಕರು Samsung.com, Samsung ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳು, ಪ್ರಮುಖ ಚಿಲ್ಲರೆ ಅಂಗಡಿಗಳು ಮತ್ತು ಇ-ಕಾಮರ್ಸ್ ಪೋರ್ಟಲ್‌ಗಳ ಮೂಲಕ ಈ ಕೊಡುಗೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಕಂಪನಿಯು ದೃಢಪಡಿಸಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 ಸ್ಮಾರ್ಟ್‌ಫೋನ್‌ ವಿಶೇಷತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 ಸ್ಮಾರ್ಟ್‌ಫೋನ್‌ ವಿಶೇಷತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 ಸ್ಮಾರ್ಟ್‌ಫೋನ್‌ 6.2-ಇಂಚಿನ ಫ್ಲಾಟ್ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ HDR10 + ಪ್ರಮಾಣೀಕರಣ, ಸ್ಯಾಮ್‌ಸಂಗ್‌ನ ಐ ಕಂಫರ್ಟ್ ಶೀಲ್ಡ್ ಮತ್ತು ಅಡಾಪ್ಟಿವ್ 120Hz ರಿಫ್ರೆಶ್ ರೇಟ್‌ ಅನ್ನು ಸಹ ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 2100 SoC ಪ್ರೊಸೆಸರ್‌ ಅನ್ನು ಹೊಂದಿದ್ದು,ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.ಸ್ಯಾಮ್‌ಸಂಗ್ ಗ್ಯಾಲಕ್ಸಿ s21 ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ನೊಂದಿಗೆ 120 ಡಿಗ್ರಿಗಳಷ್ಟು ಫೀಲ್ಡ್-ಆಫ್-ವ್ಯೂ ಹೊಂದಿದೆ. ಇದು 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 + ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 + ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 + ಸ್ಮಾರ್ಟ್‌ಫೋನ್‌ 6.7-ಇಂಚಿನ ಫ್ಲಾಟ್ ಫುಲ್-ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ ಮತ್ತು 120 Hz ಅಡಾಪ್ಟಿವ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಗ್ಯಾಲಕ್ಸಿ ಎಸ್ 21 + ಎಕ್ಸಿನೋಸ್ 2100SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM+128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 12 ಮೆಗಾಪಿಕ್ಸೆಲ್ ಡ್ಯುಯಲ್ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಹೊಂದಿದೆ. ಜೊತೆಗೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಕೂಡ ಇದೆ. ಈ ಸ್ಮಾರ್ಟ್‌ಫೋನ್‌ 4,800 ಎಮ್‌ಎಹೆಚ್ ಬ್ಯಾಟರಿಯನ್ನು ಒದಗಿಸಿದೆ, ಇದು ಗ್ಯಾಲಕ್ಸಿ ಎಸ್ 21 ರಂತೆ ವೇಗದ ವೈರ್ಡ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Samsung has announced cashback for its Galaxy S21 series in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X