Home
ಸುದ್ದಿಜಾಲ

Flipkart GOAT ಸೇಲ್‌: ರೆಡ್ಮಿಯ ಈ ಜನಪ್ರಿಯ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಜನಪ್ರಿಯ ಇ ಕಾಮರ್ಸ್‌ ತಾಣ ಎನಿಸಿರುವ ಫ್ಲಿಪ್‌ಕಾರ್ಟ್‌ ಇದೀಗ ಫ್ಲಿಪ್‌ಕಾರ್ಟ್‌ ಗೋಟ್‌ ಸೇಲ್‌ (Flipkart GOAT Sale 2024) ಮಾರಾಟ ಮೇಳವನ್ನು ಆಯೋಜಿಸಿದೆ. ಈ ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ತಿಳಿಸಿದೆ. ಆ ಪಟ್ಟಿಯಲ್ಲಿ ರೆಡ್ಮಿ 13C (Redmi 13C) ಮೊಬೈಲ್‌ ಕೂಡಾ ವಾವ್‌ ಎನಿಸುವ ಡಿಸ್ಕೌಂಟ್‌ ಪಡೆದಿದ್ದು, ಖರೀದಿದಾರರು OMG ಎನ್ನುವಂತಾಗಿದೆ. ಅಂದಹಾಗೆ ಈ ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತನ್ನ ವೆಬ್‌ಸೈಟ್‌ನಲ್ಲಿ ಫ್ಲಿಪ್‌ಕಾರ್ಟ್‌ ಗೋಟ್‌ ಸೇಲ್‌ (Flipkart GOAT Sale 2024) ಮಾರಾಟ ಆಯೋಜಿಸಿದೆ. ಈ ಸೇಲ್‌ನಲ್ಲಿ ಶಿಯೋಮಿ ಸಂಸ್ಥೆಯ ಅಗ್ಗದ ಬೆಲೆಯ ರೆಡ್ಮಿ 13C 4G ಮೊಬೈಲ್‌ ಶೇ. 35% ರಷ್ಟು ನೇರ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಫೋನಿನ 4GB RAM + 128GB ವೇರಿಯಂಟ್‌ ಆಫರ್‌ನಲ್ಲಿ 7,699ರೂ. ಗಳ ದರದಲ್ಲಿ ಕಾಣಿಸಿಕೊಂಡಿದೆ.

Flipkart GOAT ಸೇಲ್‌: ರೆಡ್ಮಿಯ ಈ ಜನಪ್ರಿಯ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಇನ್ನು ಈ ಫೋನಿನ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಸ್ಟಾರ್ಡಸ್ಟ್ ಕಪ್ಪು ಮತ್ತು ಸ್ಟಾರ್ ಶೈನ್ ಗ್ರೀನ್ ಕಲರ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದು. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ ಮುಂದೆ ನೋಡೋಣ ಬನ್ನಿರಿ.

ರೆಡ್ಮಿ 13C ಫೀಚರ್ಸ್ ಮಾಹಿತಿ

ರೆಡ್ಮಿ 13C ಫೋನ್‌ 6.74 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಅನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಪಡೆದಿದೆ. ಇದರ ಜೊತೆಗೆ ಡಿಸ್‌ಪ್ಲೇ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಬೆಂಬಲ ಮಾಡುತ್ತದೆ.

ರೆಡ್ಮಿ 13C ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಪವರ್‌ ಪಡೆದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB / 6GB / 8GB RAM ಮತ್ತು 128GB / 256GB ಆಂತರೀಕ ಸ್ಟೋರೇಜ್‌ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಎಸ್‌ಡಿ ಮೆಮೊರಿ ಕಾರ್ಡ್‌ ಸಪೋರ್ಟ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಇದೆ.

ರೆಡ್ಮಿ 13C ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ರೆಡ್ಮಿ 13C ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಬೆಂಬಲಿತವಾಗಿದೆ ಮತ್ತು 18W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಬೆಂಬಲ ಒದಗಿಸುತ್ತದೆ. ಇನ್ನು ಇದು ಸ್ಟಾರ್ಡಸ್ಟ್ ಕಪ್ಪು ಮತ್ತು ಸ್ಟಾರ್ ಶೈನ್ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

Best Mobiles in India

English summary
Massive discount on REDMI 13C phone during Flipkart GOAT Sale 2024. check out offer, price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+