ಐಫೋನ್ 15 ಖರೀದಿಸುವ ಪ್ಲ್ಯಾನ್ ಇದ್ರೆ, ಈ ಕೂಡಲೇ ಖರೀದಿಸಿ!..ಬೆಸ್ಟ್ ಆಫರ್!
ಟೆಕ್ ದೈತ್ಯ ಆಪಲ್ ಸಂಸ್ಥೆಯ ಐಫೋನ್‌ಗಳು ಭಾರೀ ಡಿಮ್ಯಾಂಡ್ ಪಡೆದಿವೆ. ಸಂಸ್ಥೆಯ ಐಫೋನ್ 15 (iPhone 15) ಮೊಬೈಲ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದಲೂ ಸಹ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಈಗ ಭರ್ಜರಿ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದ್ದು, ಈ ಮೂಲಕ ಮತ್ತೆ ಖರೀದಿದಾರರನ್ನು ತನ್ನತ್ತ ಸೆಳೆದಿದೆ.
ಹೌದು, ಫ್ಲಿಪ್‌ಕಾರ್ಟ್ ( Flipkart ) ವೆಬ್‌ಸೈಟ್‌ನಲ್ಲಿ ಇದೀಗ ಐಫೋನ್ 15 (iPhone 15) ಮೊಬೈಲ್ ಸ್ಮಾರ್ಟ್‌ಫೋನ್ ಶೇ. 15% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 128 GB ವೇರಿಯಂಟ್ 58,999ರೂ. ಗಳ ಆಫರ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಎಕ್ಸ್‌ಚೇಂಜ್ ರಿಯಾಯಿತಿ ಸಹ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ಬೆಲೆಯಲ್ಲಿ ಫೋನ್ ಖರೀದಿಸಬಹುದು.

ಹಾಗೆಯೇ ಇದು 128 GB, 256 GB, 512 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ 12 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಐಫೋನ್ 15 (iPhone 15) ಮೊಬೈಲ್ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಐಫೋನ್ 15 - ಮೊಬೈಲ್ ಫೀಚರ್ಸ್ ಹೀಗಿವೆ
ಐಫೋನ್ 15 ( iPhone 15 ) ಫೋನ್ 6.1 ಇಂಚಿನ ಡಿಸ್‌ಪ್ಲೇ ಸೌಲಭ್ಯ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1600 nits ಬ್ರೈಟ್ನಸ್ ಸಪೋರ್ಟ್ ಸಹ ಪಡೆದುಕೊಂಡಿದೆ. ಹಾಗೆಯೇ ಇದು ಮಾತ್ರೆ ಮಾದರಿಯ ( ಪಿಲ್ ಶೇಪ್ ಮಾದರಿ ) ಪಂಚ್ ಹೋಲ್ ಸೆಟ್‌ಅಪ್ ಹೊಂದಿದ್ದು, ಫೇಸ್‌ಟೈಮ್ ಕ್ಯಾಮೆರಾ ಮತ್ತು ಫೇಸ್‌ಐಡಿ ಹೊಂದಿದೆ.
ಐಫೋನ್ 15 ಫೋನ್ A16 ಬಯೋನಿಕ್ ಚಿಪ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಈ ಐಫೋನ್ ios 16 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಅಲ್ಲದೇ ಇದು 128 GB, 256 GB, 512 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ.
ಐಫೋನ್ 15 ( iPhone 15 ) ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಅವುಗಳಲ್ಲಿ ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದು ಮಂದ ಬೆಳಕಿನಲ್ಲಿಯೂ ಉತ್ತಮ ಫೋಟೋ ಸೆರೆಹಿಡಿಯಲು ಪೂರಕವಾಗಿ ಕೆಲಸ ನಿರ್ವಹಿಸಲಿದೆ. ಅಂದಹಾಗೆ ದ್ವಿತೀಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ನ ಅಲ್ಟ್ರಾ ವೈಲ್ಡ್ ಆಂಗಲ್ ಲೆನ್ಸ್ ಅನ್ನು ಪಡೆದಿದೆ. ಇಲ್ಲದೇ ಇದು ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಐಫೋನ್ 15 ( iPhone 15 ) ಮೊಬೈಲ್ ತನ್ನ ಈ ಹಿಂದಿನ ಸರಣಿಗಿಂತ ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಐಫೋನ್ ಪ್ರಿಯರ ಗಮನ ಸೆಳೆದಿದೆ. ಹಾಗೆಯೇ ಇದು ಡೈನಾಮಿಕ್ ಐಲ್ಯಾಂಡ್ ( Dynamic Island ) ಆಯ್ಕೆ ಅನ್ನು ಪಡೆದಿದೆ. ಇದು 5G ಸಪೋರ್ಟ್ ಪಡೆದಿದೆ. ಅಲ್ಲದೇ ವೈರ್‌ಲೆಸ್ ಕನೆಕ್ಟಿವಿಟಿ ಸೌಲಭ್ಯ ಕೂಡಾ ಪಡೆದಿದೆ. ಅಲ್ಲದೇ ಇದು ರೋಡ್ ಸೈಡ್ ಅಸಿಸ್ಟಂಟ್ ವೈಯಾ ಸೆಟಲೈಟ್ ಆಯ್ಕೆ ಇದೆ.


Click it and Unblock the Notifications








