12GB RAM ಸೌಲಭ್ಯದ ಈ ಫೋನ್ ಬೆಲೆಯಲ್ಲಿ ಇಳಿಕೆ; ಆಫರ್ ತಿಳಿದ್ರೆ ಅಚ್ಚರಿ ಪಡ್ತೀರಾ!
ದೈತ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಹೈ ಎಂಡ್ ಫೋನ್‌ಗಳಿಗೂ ಅತ್ಯುತ್ತಮ ರಿಯಾಯಿತಿ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಆಕರ್ಷಿಸುತ್ತದೆ. ಇದೀಗ ಅಮೆಜಾನ್ ತಾಣವು ಆಯ್ದ ಕೆಲವು ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್ ಘೋಷಿಸಿದ್ದು, ಆ ಪೈಕಿ ಐಕ್ಯೂ ಸಂಸ್ಥೆಯ ಪ್ರೀಮಿಯಂ ಫೋನ್‌ಗಳಲ್ಲಿ ಒಂದಾದ ಐಕ್ಯೂ 12 5G ಸ್ಮಾರ್ಟ್‌ಫೋನ್ ಸಖತ್ ಆಫರ್ ಪಡೆದಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 3 SoC ಪ್ರೊಸೆಸರ್ ನಲ್ಲಿ ಕಾರ್ಯ ಮಾಡಲಿದ್ದು, ಜೊತೆಗೆ 50 ಮೆಗಾ ಪಿಕ್ಸೆಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಐಕ್ಯೂ 12 5G ಮೊಬೈಲ್ ಶೇ. 12% ರಷ್ಟು ನೇರ ಡಿಸ್ಕೌಂಟ್ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ನ 12GB RAM + 256GB ಸ್ಟೋರೇಜ್ ವೇರಿಯಂಟ್ 52,999ರೂ. ಗಳ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಇತರೆ ಕೆಲವು ಆಯ್ದ ಬ್ಯಾಂಕ್ ಆಫರ್‌ಗಳು ಕೂಡಾ ಖರೀದಿದಾರರಿಗೆ ಲಭ್ಯ ಸಿಗಲಿವೆ.

ಅಂದಹಾಗೆ ಈ ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್ ಸಹ ಹೊಂದಿದೆ. ಹಾಗೆಯೇ ಈ ಫೋನ್ 16GB RAM ಮತ್ತು 512GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಐಕ್ಯೂ 12 5G ಫೋನ್ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ 12 5G ಮೊಬೈಲ್ ಫೀಚರ್ಸ್
ಐಕ್ಯೂ 12 5G ಮೊಬೈಲ್ 6.78 ಇಂಚಿನ 1.5K LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2800 x 1260 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಜೊತೆಗೆ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 2160Hz PWM ಡಿಮ್ಮಿಂಗ್ ಅನ್ನು ಬೆಂಬಲಿಸಲಿದ್ದು, ಕಣ್ಣಿಗೆ ಸುರಕ್ಷತೆಯನ್ನು ನೀಡಲಿದೆ.
ಐಕ್ಯೂ 12 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 3 SoC ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ನಲ್ಲಿ ರನ್ ಆಗಲಿದೆ. ಇನ್ನು ಗೇಮಿಂಗ್ ಅನುಭವಗಳನ್ನು ಹೆಚ್ಚಿಸಲು ಮತ್ತು ಫ್ರೇಮ್ ದರಗಳನ್ನು ಆಪ್ಟಿಮೈಜ್ ಮಾಡಲು, ಮೀಸಲಾದ Q1 ಚಿಪ್‌ಸೆಟ್ ಅನ್ನು ಡಿವೈಸ್‌ನ ಆರ್ಕಿಟೆಕ್ಚರ್‌ಗೆ ಸಂಯೋಜಿಸಲಾಗಿದೆ. ಹಾಗೆಯೇ 16GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ.
ಐಕ್ಯೂ 12 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹಾಗೂ ತೃತೀಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಐಕ್ಯೂ 12 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 120W ವರೆಗಿನ ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯ ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್, ತಲ್ಲೀನಗೊಳಿಸುವ ಆಡಿಯೊ ಅನುಭವಕ್ಕಾಗಿ ಸ್ಟೀರಿಯೋ ಸ್ಪೀಕರ್‌ಗಳು ಮತ್ತು ಹೈ-ರೆಸ್ ಆಡಿಯೊಗೆ ಸಪೋರ್ಟ್ ಒದಗಿಸುತ್ತದೆ.


Click it and Unblock the Notifications