ಮೊಟೊರೊಲಾ ಸಂಸ್ಥೆಯ ಈ ಮಡಚುವ ಫೋನ್‌ಗಳಿಗೆ ಬಿಗ್ ರಿಯಾಯಿತಿ!
ಅಮೆಜಾನ್ ಪ್ಲಾಟ್‌ಫಾರ್ಮ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಪ್ರಾರಂಭಿಸಿದ್ದು, ಗ್ರಾಹಕರನ್ನು ಆಕರ್ಷಿದುತ್ತಿದೆ. ಈ ಸೇಲ್ ಮೇಳದಲ್ಲಿ ಜನಪ್ರಿಯ ಫೋನ್‌ಗಳು, ಹೈ ಎಂಡ್ ಫೋನ್‌ಗಳು ಕೂಡಾ ಆಕರ್ಷಕ ಕೊಡುಗೆಯ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯ ಆಗುತ್ತಿವೆ. ಆ ಪೈಕಿ ಮೊಟೊರೊಲಾ ರೇಜರ್ 40 ಹಾಗೂ ಮೊಟೊರೊಲಾ ರೇಜರ್ 40 ಅಲ್ಟ್ರಾ ಸಹ ಆಫರ್ ಪಡೆದಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಮೊಟೊರೊಲಾ ರೇಜರ್ 40 ಹಾಗೂ ಮೊಟೊರೊಲಾ ರೇಜರ್ 40 ಅಲ್ಟ್ರಾ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಮೊಟೊರೊಲಾ ರೇಜರ್ 40 ಆಫರ್ ಬೆಲೆಯು 44,999ರೂ. ಹಾಗೂ ಮೊಟೊರೊಲಾ ರೇಜರ್ 40 ಅಲ್ಟ್ರಾ ಹಬ್ಬದ ಆಫರ್ ದರವು 72,999ರೂ. ಗಳು ಆಗಿದೆ.

ಈ ಎರಡು ಫೋನ್‌ಗಳು ಮಡಚುವ ಮಾದರಿಯ ರಚನೆಯನ್ನು ಒಳಗೊಂಡಿದ್ದು, ಸ್ಟೈಲಿಶ್ ಲುಕ್‌ನಲ್ಲಿ ಕಾಣಿಸಿಕೊಂಡಿವೆ. ಇನ್ನುಳಿದಂತೆ ಈ ಎರಡು ಪ್ರೀಮಿಯಂ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ರೇಜರ್ 40 ಅಲ್ಟ್ರಾ ಫೀಚರ್ಸ್ ಹೇಗಿವೆ ಗೊತ್ತಾ
ಮೊಟೊದ ಈ ಮೊಬೈಲ್ ಫೋಲ್ಡಬಲ್ ಮಾದರಿಯ ಡಿಸ್‌ಪ್ಲೇ ಹೊಂದಿದ್ದು, ಇದರ ಮುಖ್ಯ ಡಿಸ್‌ಪ್ಲೇ 6.9 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದರ ಡಿಸ್‌ಪ್ಲೇಯು 165Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿದ್ದು, HDR10+ ಹಾಗೂ 1400 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದುಕೊಂಡಿದೆ. ಇನ್ನು ಇದರ ಕವರ್ ಡಿಸ್‌ಪ್ಲೇ 3.6 ಇಂಚಿನ ಕ್ವಿಕ್‌ವ್ಯೂ poOLED ಡಿಸ್‌ಪ್ಲೇ ಪಡೆದಿದ್ದು, ಈ ಸ್ಕ್ರೀನ್ 1000 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಪಡೆದಿದೆ.
ಅಲ್ಲದೇ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್ 1 SoC ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದೆ. ಈ ಫೋನ್ 8GB RAM ಮತ್ತು 256GB ಹಾಗೂ 12GB RAM ಮತ್ತು 512GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಪಡೆದುಕೊಂಡಿದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ.
ಇದರ ಪ್ರಾಥಮಿಕ ಕ್ಯಾಮೆರಾ 12 ಮೆಗಾ ಪಿಕ್ಸಲ್ ಸೆನ್ಸಾರ್ ಮತ್ತು ಸೆಕೆಂಡರಿ ಕ್ಯಾಮೆರಾ 13 ಮೆಗಾಪಿಕ್ಸಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಹೊಂದಿದೆ. ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಇದು 3800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ.
ಮೊಟೊರೊಲಾ ರೇಜರ್ 40 ಫೀಚರ್ಸ್ ಹೇಗಿವೆ ಗೊತ್ತಾ
ಮೊಟೊರೊಲಾ ರೇಜರ್ 40 ಫೋನ್ 6.9 ಇಂಚಿನ ಪ್ರಮುಖ ಡಿಸ್‌ಪ್ಲೇ ಹೊಂದಿದ್ದು, ಈ ಮೊಬೈಲ್ ಕವರ್ ಡಿಸ್‌ಪ್ಲೇ 1.5 ಇಂಚಿನ ರಚನೆ ಒಳಗೊಂಡಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಪಡೆದುಕೊಂಡಿದೆ.
ಈ ಫೋನ್ ಎರಡು ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಸೆಕೆಂಡರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಸಾಮರ್ಥ್ಯದಲ್ಲಿದೆ. ಅಲ್ಲದೇ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ಪಡೆದಿದ್ದು, 4200mAh ಸಾಮರ್ಥ್ಯದ ಬ್ಯಾಟರಿ ಶಕ್ತಿ ಇದೆ.


Click it and Unblock the Notifications








