Home
ಸುದ್ದಿಜಾಲ

ಇತ್ತೀಚಿನ ಈ ಪೊಕೊ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ; ಉಳಿತಾಯ ಖಚಿತ!

ಜನಪ್ರಿಯ ಇ ಕಾಮರ್ಸ್‌ ಎನಿಸಿರುವ ಫ್ಲಿಪ್‌ಕಾರ್ಟ್‌ ಮೊಬೈಲ್‌ಗಳಿಗೆ ಆಕರ್ಷಕ ಕೊಡುಗೆ ನೀಡುತ್ತದೆ. ಈ ಪ್ಲಾಟ್‌ಫಾರ್ಮ್ ಅಗ್ಗದ ಬೆಲೆಯ ಫೋನ್‌ಗಳಿಗೂ ಹಾಗೂ ದುಬಾರಿ ದರದ ಫೋನ್‌ಗಳಿಗೂ ರಿಯಾಯಿತಿ ಲಭ್ಯ ಮಾಡುತ್ತದೆ. ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ C61 ಮೊಬೈಲ್‌ ಬೊಂಬಾಟ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ಪೊಕೊ C61 ಸ್ಮಾರ್ಟ್‌ಫೋನ್‌ ಶೇ. 30% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 6,999ರೂ. ಗಳ ಆಫರ್‌ ಬೆಲೆಯಲ್ಲಿ ತಮ್ಮದಾಗಿಸಿಕೊಳ್ಳಬಹುದು. ಇದಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ರಿಯಾಯಿತಿ ಕೂಡಾ ಲಭ್ಯ.

ಇತ್ತೀಚಿನ ಈ ಪೊಕೊ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ; ಉಳಿತಾಯ ಖಚಿತ!

ಹಾಗೆಯೇ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದ್ದು, 4GB + 64GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ. ಇನ್ನು ಇದು ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಪೊಕೊ C61 ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಪೊಕೊ C61 ಮೊಬೈಲ್‌ - ಫೀಚರ್ಸ್‌
ಪೊಕೊ C61 ಮೊಬೈಲ್‌ 6.71 ಇಂಚಿನ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಅನ್ನು ಪಡೆದುಕೊಂಡಿದ್ದು, 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಒಳಗೊಂಡಿದೆ. ಇದರ ಜೊತೆಗೆ 90Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್‌ಸ್ಯಾಂಪಲಿಂಗ್‌ ರೇಟ್‌ ಪಡೆದಿದೆ.

ಪೊಕೊ C61 ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G36 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ವಿಆರ್ GE8320 ಜಿಪಿಯು ಸಪೋರ್ಟ್‌ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ ಇದು ಆಂಡ್ರಾಯ್ಡ್ 14 ಓಎಸ್‌ ಬೆಂಬಲ ಒಳಗೊಂಡಿದೆ. ಅಲ್ಲದೇ ಈ ಫೋನ್‌ 4GB + 64GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಒಳಗೊಂಡಿದ್ದು, 6GB ವರೆಗಿನ ವರ್ಚುವಲ್ RAM ಆಯ್ಕೆ ಸಹ ಹೊಂದಿದೆ.

ಪೊಕೊ C61 ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ದ್ವಿತೀಯ ಕ್ಯಾಮೆರಾ ಬೇಸಿಕ್‌ ಲೆನ್ಸ್‌ ಸಪೋರ್ಟ್‌ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5 ಮೆಗಾ ಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಪೊಕೊ C61 ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದರ ಜೊತೆಗೆ 10W ವೈರ್ಡ್ ಚಾರ್ಜಿಂಗ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್, 3.5mm ಆಡಿಯೊ ಜಾಕ್ ಆಯ್ಕೆ ಸಹ ಒಳಗೊಂಡಿದೆ. ಇದಲ್ಲದೇ 4G LTE, ಬ್ಲೂಟೂತ್ ಆವೃತ್ತಿ 5.4, ವೈ-ಫೈ 5 ಆಯ್ಕೆಗಳು ಕೂಡಾ ಪಡೆದಿದೆ.

ಬೆಲೆ ಹಾಗೂ ಲಭ್ಯತೆ
ಎಂಟ್ರಿ ಲೆವೆಲ್‌ ಮಾದರಿಯ ಈ ಪೊಕೊ C61 ಮೊಬೈಲ್‌ನ ಆರಂಭಿಕ ವೇರಿಯಂಟ್‌ ಬೆಲೆಯು 6,999ರೂ. ಗಳು ಆಗಿದೆ. ಇನ್ನು ಈ ಮೊಬೈಲ್‌ ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಕಲರ್‌ ಆಯ್ಕೆಗಳಲ್ಲಿ ಗ್ರಾಹಕರ ಖರೀದಿಗೆ ಲಭ್ಯ ಇದ್ದು, ಖರೀದಿದಾರರು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಖರೀದಿಸಬಹುದು.

Best Mobiles in India

English summary
Massive price cut on POCO C61 on flipkart website. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+