ಈ ನೂತನ 5G ಫೋನಿನ ಆಫರ್ ಬೆಲೆ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಎಲ್ಲ ಮಾದರಿಯ ಮೊಬೈಲ್‌ಗಳಿಗೆ ಏನಾದರೂಂದು ಡಿಸ್ಕೌಂಟ್ ಲಭ್ಯ ಮಾಡಿರುತ್ತದೆ. ಹೀಗಾಗಿ ಅನೇಕರು ಹೊಸ ಫೋನ್ ಖರೀದಿಸುವಾಗ ಇ ಕಾಮರ್ಸ್‌ಗಳತ್ತ ಮುಖ ಮಾಡುತ್ತಾರೆ. ಸದ್ಯ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ C65 5G ಫೋನ್ ಸಖತ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ರಿಯಲ್‌ಮಿ C65 5G ಮೊಬೈಲ್ ಶೇ. 23% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 11,499ರೂ. ಗಳ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಮತ್ತಷ್ಟು ರಿಯಾಯಿತಿ ಸಹ ಪಡೆದುಕೊಳ್ಳಲು ಅವಕಾಶ ಇದೆ.

ಈ ಅಗ್ಗದ ಬೆಲೆಯ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಹೊಂದಿದೆ. ಇನ್ನು ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಹ ಪಡೆದುಕೊಂಡಿದೆ. ಹಾಗಾದರೇ ರಿಯಲ್‌ಮಿ C65 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ರಿಯಲ್‌ಮಿ C65 5G - ಫೀಚರ್ಸ್ ಹೀಗಿವೆ
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1604×720 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, 1500:1 ಅನುಪಾತವನ್ನು ಕೂಡಾ ಪಡೆದಿದೆ. ಹಾಗೆಯೇ ಈ ಫೋನ್ 625nits HBM ಬ್ರೈಟ್ನೆಸ್ ಸಪೋರ್ಟ್ ಹೊಂದಿದೆ.
ರಿಯಲ್‌ಮಿ C65 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್ ಬಲವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಹೊಂದಿದೆ. ಅಲ್ಲದೇ 4GB + 64 GB, 4GB + 128 GB ಹಾಗೂ 6GB + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆ ಪಡೆದಿದ್ದು, ಜೊತೆಗೆ ಎಲ್‌ಇಡಿ ಫ್ಲ್ಯಾಶ್ ಲೈಟ್ ಸೌಲಭ್ಯ ಸಹ ಇದೆ. ಇನ್ನು ಮುಂಭಾಗದಲ್ಲಿ ಈ ಫೋನ್ 8 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 15W ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಹಾಗೆಯೇ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೌಲಭ್ಯ ಪಡೆದಿದೆ ಜೊತೆಗೆ ಕನೆಕ್ಟಿವಿಟಿ ಸೌಲಭ್ಯ ಡ್ಯುಯಲ್ ಸಿಮ್, 5G, ವೈಫೈ 5 802.11 a/b/g/n/ac, ಬ್ಲೂಟೂತ್ 5.3 ಆಯ್ಕೆಗಳ ಸೌಲಭ್ಯಗಳನ್ನು ಪಡೆದಿದೆ.
ಇನ್ನು ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ವೆಬ್‌ಸೈಟ್ ತಾಣದಲ್ಲಿ ಖರೀದಿಗೆ ಲಭ್ಯ. ಈ ಫೋನ್ ಫೆದರ್ ಗ್ರೀನ್ ಹಾಗೂ ಗ್ಲೋವಿಂಗ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








