Home
ಸುದ್ದಿಜಾಲ

ರೆಡ್ಮಿಯ ಈ 5G ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಆಫರ್‌ ತಿಳಿದ್ರೆ, OMG ಅಂತೀರಾ!

ಮೊಬೈಲ್‌ ಮಾರುಕಟ್ಟೆಯಲ್ಲಿ ರೆಡ್ಮಿ ಸಂಸ್ಥೆಯು ಗ್ರಾಹಕರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ಸಂಸ್ಥೆಯ ನೋಟ್‌ ಸರಣಿಯಲ್ಲಿ ಇತ್ತೀಚಿಗೆ ಬಿಡುಗಡೆ ಆಗಿರುವ ರೆಡ್ಮಿ ನೋಟ್‌ 13 5G ಫೋನ್‌ ಹಲವು ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿಯೂ ಸಖತ್‌ ರಿಯಾಯಿತಿ ಪಡೆದಿದ್ದು, ಗ್ರಾಹಕರು ಫೋನಿನತ್ತ ಹಿಂತಿರುಗಿ ನೋಡುವಂತಾಗಿದೆ.

ಹೌದು, ಅಧಿಕೃತ ಶಿಯೋಮಿ ವೆಬ್‌ಸೈಟ್‌ ಪ್ಲಾಟ್‌ಫಾರ್ಮ್‌ನಲ್ಲಿ ರೆಡ್ಮಿ ನೋಟ್‌ 13 5G ಫೋನ್‌ ಆಕರ್ಷಕ ರಿಯಾಯಿತಿ ಹೊಂದಿದೆ. ಈ ಫೋನ್‌ 6 GB + 128 GB ಪ್ರಿಸ್ಮ್‌ ಗೋಲ್ಡ್‌ ವೇರಿಯಂಟ್‌ 17,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಕೂಡಾ ಖರೀದಿದಾರರಿಗೆ ಲಭ್ಯ ಆಗಲಿದೆ.

ರೆಡ್ಮಿಯ ಈ 5G ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಆಫರ್‌ಗೆ OMG ಅಂತೀರಾ

ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್‌ ಪಡೆದಿರುವ ಈ ಫೋನಿನ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು 5000mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ. ಇನ್ನುಳಿದಂತೆ ರೆಡ್ಮಿ ನೋಟ್‌ 13 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರೆಡ್ಮಿ ನೋಟ್‌ 13 5G - ಫೀಚರ್ಸ್‌

ರೆಡ್ಮಿ ನೋಟ್‌ 13 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್‌ ಪಡೆದಿದ್ದು, ಇದು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಹ ಹೊಂದಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಆಯ್ಕೆ ಒಳಗೊಂಡಿದೆ.

ರೆಡ್ಮಿಯ ಈ 5G ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಆಫರ್‌ಗೆ OMG ಅಂತೀರಾ

ರೆಡ್ಮಿ ನೋಟ್‌ 13 ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಸಾಮರ್ಥ್ಯ ಬಲವನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಅದೇ ರೀತಿ 6GB RAM + 128 GB ಹಾಗೂ 8GB RAM+ 256 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಕೂಡಾ ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಸಪೋರ್ಟ್‌ ಜೊತೆಗೆ ಹೆಚ್ಚುವರಿ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒದಗಿಸಲಾಗಿದೆ.

ರೆಡ್ಮಿ ನೋಟ್‌ 13 ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದ್ದು, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಅಲ್ಲದೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ರೆಡ್ಮಿ ನೋಟ್‌ 13 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಅನ್ನು ಇದು ಸಪೋರ್ಟ್‌ ಮಾಡುತ್ತದೆ.

Best Mobiles in India

English summary
Massive Price Cut on Redmi Note 13 5G in India. Check offer price, specifications and other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+