ಹೊಸ ವಿವೋ 5G ಸ್ಮಾರ್ಟ್‌ಫೋನ್ ಖರೀದಿಸಲು ಇದುವೇ ಬೆಸ್ಟ್ ಟೈಮ್!..ಮಸ್ತ್ ಆಫರ್!
ಲೀಡಿಂಗ್ ಇ ಕಾಮರ್ಸ್ ಎನಿಸಿರುವ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಏನಾದರೊಂದು ಭರ್ಜರಿ ಮಾರಾಟ ಮೇಳ ಆಯೋಜಿಸುತ್ತ ಸಾಗಿದೆ. ಸದ್ಯ ಬಿಗ್ ಸೇವಿಂಗ್ ಡೇಸ್ (Big Saving Days) ಸೇಲ್ ಮೇಳ ಲೈವ್ ಇದೆ. ಈ ಮಾರಾಟದಲ್ಲಿ ವಿವೋ T3 ಲೈಟ್ 5G (vivo T3 Lite 5G) ಮೊಬೈಲ್ ಅತ್ಯುತ್ತಮ ಡಿಸ್ಕೌಂಟ್ ಬೆಲೆಯಲ್ಲಿ ಸಖತ್ ಕಡಿತ ಕಂಡಿದೆ. ಅಲ್ಲದೇ ಈ ಎಂಟ್ರಿ ಲೆವೆಲ್ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪಡೆದಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಿವೋ ಸಂಸ್ಥೆಯ ವಿವೋ T3 ಲೈಟ್ 5G ( vivo T3 Lite 5G ) ಸ್ಮಾರ್ಟ್‌ಫೋನ್ ಶೇ. 25% ರಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 11,499 ರೂ. ಗಳ ಆಕರ್ಷಕ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಕೂಡಾ ಸಿಗಲಿದೆ.

ವಿವೋ T3 ಲೈಟ್ 5G ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದರ ಜೊತೆಗೆ 15W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಅಲ್ಲದೇ ಈ ಫೋನ್ ವೈಬ್ರೆಂಟ್ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಈ ಮೊಬೈಲ್ ಖರೀದಿಗೆ ಲಭ್ಯ ಆಗಲಿದೆ. ಇನ್ನುಳಿದಂತೆ ವಿವೋ T3 ಲೈಟ್ 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ T3 ಲೈಟ್ 5G - ಫೀಚರ್ಸ್ ಮಾಹಿತಿ
ವಿವೋ T3 ಲೈಟ್ 5G ಸ್ಮಾರ್ಟ್‌ಫೋನ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಹಾಗೆಯೇ 90Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಲಭ್ಯ ಇದೆ.
ವಿವೋ T3 ಲೈಟ್ 5G ಸ್ಮಾರ್ಟ್‌ಫೋನ್ 4GB RAM + 128 GB ಹಾಗೂ 6GB RAM + 128 GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ.
ವಿವೋ T3 ಲೈಟ್ 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಸೌಲಭ್ಯ ಒಳಗೊಂಡಿದೆ.


Click it and Unblock the Notifications








