ಬಜೆಟ್ ದರದ ಈ 5G ಫೋನ್ ಬೆಲೆಯಲ್ಲಿ ಈಗ ಸಖತ್ ಇಳಿಕೆ!
ಇನ್ಫಿನಿಕ್ಸ್ ಮೊಬೈಲ್ ಕಂಪನಿಯು ಕೂಡಾ ಬಜೆಟ್ ಹಾಗೂ ಅಗ್ಗದ ಫೋನ್ ಮಾರುಕಟ್ಟೆಯಲ್ಲಿ ತನ್ನ ಛಾಪು ಮೂಡಿಸಿದೆ. ಆ ಪೈಕಿ ಸಂಸ್ಥೆಯ ಇನ್ಫಿನಿಕ್ಸ್ ನೋಟ್ 30 5G ಸ್ಮಾರ್ಟ್‌ಫೋನ್ ಇದೀಗ ಆನ್‌ಲೈನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದ್ದು, ಖರೀದಿದಾರರ ಗಮನ ಸೆಳೆದಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ನಲ್ಲಿ ಇನ್ಫಿನಿಕ್ಸ್ ನೋಟ್ 30 5G ಫೋನ್ ಬರೋಬ್ಬರಿ ಶೇ. 22% ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8 GB RAM + 256 GB ಸ್ಟೋರೇಜ್ ವೇರಿಯಂಟ್ 19,999ರೂ. ಬೆಲೆ ಅನ್ನು ಪಡೆದುಕೊಂಡಿದ್ದು, ಕೊಡುಗೆಯಲ್ಲಿ 15,499ರೂ. ಗಳಿಗೆ ಗ್ರಾಹಕರು ಖರೀದಿಸಲು ಚಾನ್ಸ್ ಕೂಡಾ ಇದೆ. ಇದರೊಂದಿಗೆ ಗ್ರಾಹಕರಿಗೆ ಆಯ್ದ ಬ್ಯಾಂಕ್ ಆಫರ್ ಕೊಡುಗೆಗಳು ಸಹ ಸಿಗಲಿವೆ.

ಇನ್ಫಿನಿಕ್ಸ್ ನೋಟ್ 30 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದ್ದು, ಇದು 16 ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗಾದರೇ ಇನ್ಫಿನಿಕ್ಸ್ ನೋಟ್ 30 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ರಚನೆಯ ಮಾಹಿತಿ
ಇನ್ಫಿನಿಕ್ಸ್ ನೋಟ್ 30 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 1,080 x 2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇ 240Hz ಟಚ್ ಸ್ಯಾಪ್ಲಿಂಗ್ ರೇಟ್ ಮತ್ತು 580 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್ ಪವರ್ ಯಾವುದು
ಇನ್ಫಿನಿಕ್ಸ್ ನೋಟ್ 30 5G ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ವೇಗವನ್ನು ಪಡೆದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯ ಮಾಡಲಿದೆ. ಹಾಗೆಯೇ 4 GB ಮತ್ತು 128 GB ಹಾಗೂ 8 GB RAM ಮತ್ತು 256 GB ಆಂತರೀಕ ಬಿಲ್ಟ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯಲ್ಲಿ ಲಭ್ಯ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ಇನ್ಫಿನಿಕ್ಸ್ ನೋಟ್ 30 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಅನಿರ್ದಿಷ್ಟ AI ಕ್ಯಾಮರಾ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒದಗಿಸಲಾಗಿದೆ.
ಅಧಿಕ ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಆಯ್ಕೆ
ಇನ್ಫಿನಿಕ್ಸ್ ನೋಟ್ 30 5G ಮೊಬೈಲ್ 45W ವೈರ್ಡ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಈ ಫೋನ್ ಜಸ್ಟ್ 30 ನಿಮಿಷಗಳಲ್ಲಿ 1% ಯಿಂದ 75% ಬ್ಯಾಟರಿ ಚಾರ್ಜ್ ಮಾಡುವುದು.
ಇನ್ನು ಇನ್ಫಿನಿಕ್ಸ್ ನೋಟ್ 30 5G ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಜೆಬಿಎಲ್ ಸ್ಟಿರಿಯೊ ಸ್ಪೀಕರ್‌ಗಳು, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, 3.55 ಎಂಎಂ ಆಡಿಯೊ ಜ್ಯಾಕ್ ಸಪೋಟ್ ಸಹ ಪಡೆದಿದೆ. ಇನ್ನು ಈ ಫೋನ್ 4 GB ಮತ್ತು 128 GB ಹಾಗೂ 8 GB RAM ಮತ್ತು 256 GB ವೇರಿಯಂಟ್‌ಗಳಲ್ಲಿ ಲಭ್ಯ ಇದ್ದು, ಜೊತೆಗೆ ಮ್ಯಾಜಿಕ್ ಬ್ಲ್ಯಾಕ್, ಇಂಟರ್‌ಸ್ಟೆಲ್ಲರ್ ಬ್ಲೂ ಮತ್ತು ಸನ್‌ಸೆಟ್ ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








