ಸ್ಯಾಮ್‌ಸಂಗ್‌ನ ಈ 5G ಫೋನಿಗೆ ಈಗ ಸಖತ್ ರಿಯಾಯಿತಿ!
ದಕ್ಷಿಣ ಕೊರಿಯಾದ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಮೊಬೈಲ್ ಪರಿಚಯಿಸಿ ಗಮನ ಸೆಳೆದಿದೆ. ಅವುಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಬಜೆಟ್ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರನ್ನು ಸೆಳೆದಿದೆ. ಆದರೆ ಈ ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರಿಗೆ ಮತ್ತಷ್ಟು ಡಿಸ್ಕೌಂಟ್ ಲಭ್ಯ ಆಗಿದೆ.
ಹೌದು, ಅಮೆಜಾನ್ ಆನ್‌ಲೈನ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನ್ ಶೇ. 32% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 18,990ರೂ. ಆಗಿದ್ದು, ಆಫರ್‌ನಲ್ಲಿ ಗ್ರಾಹಕರು 12,990ರೂ. ಪ್ರೈಸ್ ಟ್ಯಾಗ್ ನಲ್ಲಿ ಖರೀದಿಸಬಹುದಾಗಿದೆ. ಅದಲ್ಲದೇ ಕೆಲವು ಆಯ್ದ ಬ್ಯಾಂಕ್ಗಳಿಂದ ಕೊಡುಗೆ ಹಾಗೂ ನೋ ಕಾಸ್ಟ್ ಇಎಮ್‌ಐ ಸಹ ದೊರೆಯುತ್ತದೆ.

ಇನ್ನು ಸ್ಯಾಮ್‌ಸಂಗ್‌ನ ಈ 5G ಫೋನ್ 6000 mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿದ್ದು, 50 ಮೆಗಾಪಿಕ್ಸೆಲ್ ಸೆನ್ಸಾರ್ ಪ್ರಾಥಮಿಕ ಕ್ಯಾಮೆರಾ ಪಡೆದುಕೊಂಡಿದೆ. ಇನ್ನು ಈ ಮೊಬೈಲ್ ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಡಿಸ್‌ಪ್ಲೇ ಮಾಹಿತಿ :
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್ ಅನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಪ್ರೊಸೆಸರ್ ಮಾಹಿತಿ :
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ ಎಕ್ಸಿನೋಸ್ 1330 ಆಕ್ಟಾ ಕೋರ್ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್ ಅನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಪಡೆದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G, ವೈಫೈ, ಬ್ಲೂಟೂತ್ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್ ಅನ್ನು ಪಡೆದಿವೆ.


Click it and Unblock the Notifications








