Home
ಸುದ್ದಿಜಾಲ

32MP ಸೆಲ್ಫಿ ಕ್ಯಾಮೆರಾ ಇರುವ ಈ ಫೋನ್‌ ಬೆಲೆಯಲ್ಲಿ 5000ರೂ.ಗಿಂತ ಅಧಿಕ ಡಿಸ್ಕೌಂಟ್‌!

ದೈತ್ಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಈಗ ಬ್ಲ್ಯಾಕ್‌ ಫ್ರೈಡ್‌ ಸೇಲ್‌ ಲೈವ್‌ ಆಗಿದೆ. ಈ ಸ್ಪೆಷಲ್‌ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳು ಬೊಂಬಾಟ್‌ ಡಿಸ್ಕೌಂಟ್‌ನಲ್ಲಿ ಖರೀದಿಗೆ ಲಭ್ಯ ಇವೆ. ಆಫರ್‌ನಲ್ಲಿ ನೈತನ ಮೊಬೈಲ್ ಖರೀದಿಸುವ ಗ್ರಾಹಕರಿಗೆ ಇದು ಸೂಕ್ತ. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 50 ನಿಯೋ ( Motorola Edge 50 Neo ) ಸ್ಮಾರ್ಟ್‌ಫೋನ್‌ ಸಖತ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ದಿಗ್ಗಜ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 50 ನಿಯೋ (Motorola Edge 50 Neo) ಮೊಬೈಲ್ ಶೇ. 23% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8 GB RAM + 256GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 22,999ರೂ. ಗಳ ಕೊಡುಗೆಯ ದರದಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ದೊರೆಯುತ್ತದೆ.

32MP ಸೆಲ್ಫಿ ಕ್ಯಾಮೆರಾ ಇರುವ ಈ ಫೋನ್‌ ಬೆಲೆಯಲ್ಲಿ 5000ರೂ.ಗಿಂತ ಅಧಿಕ ಡಿಸ್ಕೌಂಟ್

ಅಂದಹಾಗೆ ಮೊಟೊರೊಲಾ ಎಡ್ಜ್ 50 ನಿಯೋ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್‌ ಪವರ್‌ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 32 ಮೆಗಾಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗಾದರೇ ಮೊಟೊರೊಲಾ ಎಡ್ಜ್ 50 ನಿಯೋ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ

ಮೊಟೊರೊಲಾ ಎಡ್ಜ್‌ 50 ನಿಯೋ ಮೊಬೈಲ್‌ 6.4 ಇಂಚಿನ pOLED LTPO ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 2670 x 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಮಾಡಲಿದೆ. ಇದಲ್ಲದೆ 120 Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 3,000 nits ಬ್ರೈಟ್‌ನೆಸ್‌ ಸಪೋರ್ಟ್‌ ನೀಡಲಿದೆ. ಇದರ ಜೊತೆಗೆ ಗೊರಿಲ್ಲಾ ಗ್ಲಾಸ್‌ 3 ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಯಾವ ಪ್ರೊಸೆಸರ್‌

ಮೊಟೊರೊಲಾ ಎಡ್ಜ್‌ 50 ನಿಯೋ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಪಡೆದಿದೆ. ಇದರೊಂದಿಗೆ 8 GB RAM + 256 GB ಸ್ಟೋರೇಜ್‌ನ ವೇರಿಯಂಟ್‌ ಆಯ್ಕೆ ಕೂಡಾ ಪಡೆದಿದೆ.

ತ್ರಿವಳಿ ಕ್ಯಾಮೆರಾ

ಮೊಟೊರೊಲಾ ಎಡ್ಜ್‌ 50 ನಿಯೋ ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆ ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಎರಡನೇ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 10 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಬಲದಲ್ಲಿ ಇವೆ. ಅಲ್ಲದೇ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ.

ಬ್ಯಾಟರಿ ಬಲ

ಮೊಟೊರೊಲಾ ಎಡ್ಜ್‌ 50 ನಿಯೋ ಫೋನ್‌ 4,310 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ 68 W ವೈರ್ಡ್‌ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ. ಹಾಗೆಯೇ 15W ವೈರ್‌ಲೆಸ್ ಚಾರ್ಜಿಂಗ್‌ ಆಯ್ಕೆ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡಾಲ್ಬಿ ಅಟ್ಮಾಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಹಾಗೂ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ.

Best Mobiles in India

English summary
Massive Price Drop on Motorola Edge 50 Neo in India. Check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+