ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್ ಈಗ ಸಸ್ತಾ ಬೆಲೆಯಲ್ಲಿ ಖರೀದಿಗೆ ಲಭ್ಯ!
ರಿಯಲ್‌ಮಿ ಮೊಬೈಲ್ ಸಂಸ್ಥೆಯ ಭಿನ್ನ ರೇಂಜ್‌ನ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಆಕರ್ಷಿಸಿದೆ. ಆ ಪೈಕಿ ಕಂಪನಿಯ ರಿಯಲ್‌ಮಿ 12X 5G (Realme 12x 5G) ಮೊಬೈಲ್ ಕ್ಯಾಮೆರಾ, ಪ್ರೊಸೆಸರ್ ಹಾಗೂ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ಈಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸದ್ಯ ಸಖತ್ ಬೆಲೆ ಇಳಿಕೆ ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಇದೀಗ ರಿಯಲ್‌ಮಿ 12X 5G (Realme 12x 5G) ಮೊಬೈಲ್ ಶೇ. 28% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್‌ನ 6 GB RAM + 128 GB ಸ್ಟೋರೇಜ್ ವೇರಿಯಂಟ್ 13,499ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಕೂಡಾ ಪಡೆಯಬಹುದಾಗಿದೆ.

ಇನ್ನು ಈ ಫೋನ್ 50 ಮೆಗಾ ಪಿಕ್ಸಲ್ ಸೆನ್ಸಾರ್ ಮೊದಲ ಕ್ಯಾಮೆರಾ ಪಡೆದಿದ್ದು, ಹಾಗೆಯೇ 5000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಸೌಲಭ್ಯವನ್ನು ಪಡೆದಿದೆ. ಇನ್ನು ಇದು ಟ್ವಿಲೈಟ್ ಪರ್ಪಲ್ ಹಾಗೂ ವುಡ್‌ಲ್ಯಾಂಡ್ ಗ್ರೀನ್ ಕಲರ್ ಆಯ್ಕೆ ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ 12X 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ರಿಯಲ್‌ಮಿ 12X 5G - ಫೀಚರ್ಸ್ ಹೀಗಿವೆ
ರಿಯಲ್‌ಮಿ 12X 5G ಮೊಬೈಲ್ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ರಚನೆ ಪಡೆದಿದ್ದು, ಹಾಗೆಯೇ 1080 x 2400 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು 120 Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, 91.40% ಅನುಪಾತವನ್ನು ಕೂಡಾ ಪಡೆದಿದೆ. ಹಾಗೆಯೇ ಈ ಫೋನ್ 950 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ.
ರಿಯಲ್‌ಮಿ 12X 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಸಾಮರ್ಥ್ಯವನ್ನು ಇದು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಹಾಗೆಯೇ 4GB/6GB/8GB RAM ವೇರಿಯಂಟ್ ಆಯ್ಕೆಗಳಲ್ಲಿ ಇದು ಲಭ್ಯ. ಇದರೊಂದಿಗೆ 8GB ಡೈನಾಮಿಕ್ RAM ಸೌಲಭ್ಯ ಸಹ ಲಭ್ಯ.
ರಿಯಲ್‌ಮಿಯ ಈ ಮೊಬೈಲ್ ಈ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆ ಪಡೆದಿದೆ. ಇನ್ನು ಮುಂಭಾಗದಲ್ಲಿ ಈ ಫೋನ್ 8 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ 1080P@30fps ಸಪೋರ್ಟ್‌ನಲ್ಲಿ ವಿಡಿಯೋ ರೆಕಾರ್ಡಿಂಗ್ ಮಾಡಬಹುದು.
ರಿಯಲ್‌ಮಿ 12X 5G ಮೊಬೈಲ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 45W SuperVOOC ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಅಲ್ಲದೇ ಏರ್ ಗೆಸ್ಚರ್ ಸೌಲಭ್ಯ, IP54 ರೇಟಿಂಗ್ ಆಯ್ಕೆ ಹಾಗೂ ಡ್ಯುಯಲ್ ಸ್ಟಿರಿಯೋ ಸ್ಪೀಕರ್ ಸೌಲಭ್ಯದ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈ-ಫೈ, ಯುಎಸ್‌ಬಿ ಸಿ ಟೈಪ್ ಆಯ್ಕೆಗಳು ಕಾಣಬಹುದು.


Click it and Unblock the Notifications








