Home
ಸುದ್ದಿಜಾಲ

ಈ ಎಂಟ್ರಿ ಲೆವೆಲ್‌ ಫೋನ್‌ ಬೆಲೆಯಲ್ಲಿ ಇಳಿಕೆ; 2TB ಸ್ಟೋರೇಜ್‌, ಬಿಗ್‌ ಬ್ಯಾಟರಿ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆ ಅಡ್ಡಾ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಮೊಬೈಲ್‌ಗಳಿಗೆ ಆಕರ್ಷಕ ಕೊಡುಗೆ ಲಭ್ಯ ಇದೆ. ಹಾಗೆಯೇ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ ಎಲ್ಲ ಪ್ರೈಸ್‌ರೇಂಜ್‌ನ ಸ್ಮಾರ್ಟ್‌ಫೋನ್‌ಗಳಿಗೂ ಕೂಡಾ ಸಖತ್‌ ಡಿಸ್ಕೌಂಟ್‌ ನೀಡಿದೆ. ಆ ಪೈಕಿ ಸದ್ಯ ರಿಯಲ್‌ಮಿ C63 (realme C63) ಫೋನ್‌ ಗ್ರಾಹಕರು ಹುಬ್ಬೇರಿಸುವಂತ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ರಿಯಲ್‌ಮಿ C63 (realme C63) ಮೊಬೈಲ್‌ ಶೇ. 15% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನ್‌ 4 GB RAM + 64 GB ಸ್ಟೋರೇಜ್‌ ವೇರಿಯಂಟ್‌ 8,499ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಆಯ್ದ ಬ್ಯಾಂಕ್‌ಗಳಿಂದ ಸಹ ಅತ್ಯುತ್ತಮ ಡಿಸ್ಕೌಂಟ್‌ ಕೂಡಾ ಸಿಗಲಿದೆ.

ಈ ಎಂಟ್ರಿ ಲೆವೆಲ್‌ ಫೋನ್‌ ಬೆಲೆಯಲ್ಲಿ ಇಳಿಕೆ; 2TB ಸ್ಟೋರೇಜ್‌, ಬಿಗ್‌ ಬ್ಯಾಟರಿ!

ಅಂದಹಾಗೆ ಈ ಎಂಟ್ರಿ ಲೆವೆಲ್‌ ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಅನುಗುಣವಾಗಿ 45W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ಗೆ ಇದೆ. ಅಲ್ಲದೇ ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಹಾಗಾದರೇ ರಿಯಲ್‌ಮಿ C63 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ

ಡಿಸ್‌ಪ್ಲೇ ಹೇಗಿದೆ

ರಿಯಲ್‌ಮಿ C63 ಮೊಬೈಲ್‌ 6.74 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಸಹ ಪಡೆದಿದೆ. ಹಾಗೆಯೇ ಅತ್ಯುತ್ತಮ ಬ್ರೈಟ್‌ನೆಸ್‌ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು ವಾಟರ್‌ ಡ್ರಾಪ್‌ ಕಟೌಟ್ ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು

ರಿಯಲ್‌ಮಿ C63 ಮೊಬೈಲ್ ಆಕ್ಟಾ ಕೋರ್ Unisoc T612 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಇದರ ಜೊತೆಗೆ 4GB + 128 GB ಆಂತರೀಕ ಸ್ಟೋರೇಜ್‌ ಆಯ್ಕೆ ಅನ್ನು ಈ ಫೋನ್‌ ಪಡೆದಿದೆ. ಅಲ್ಲದೇ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 2 TB ವರೆಗೂ ವಿಸ್ತರಿಸುವ ಆಯ್ಕೆ ಒಳಗೊಂಡಿರುವುದು ಪ್ರಮುಖ ಹೈಲೈಟ್‌ ಅಂಶವಾಗಿದೆ.

50ಎಂಪಿ ಕ್ಯಾಮೆರಾ

ರಿಯಲ್‌ಮಿ C63 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಇದರ ಜೊತೆಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಹಾಗೆಯೇ ಬೇಸಿಕ್ ಎಡಿಟಿಂಗ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಬಿಗ್ ಬ್ಯಾಟರಿ

ರಿಯಲ್‌ಮಿ C63 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದ್ದು, ಇದರೊಂದಿಗೆ 45W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ಗೆ ಸೌಲಭ್ಯ ಸಹ ಇದೆ. ಹಾಗೆಯೇ ರಿಯಲ್‌ಮಿ C63 ಫೋನ್ 5G ವೈ ಫೈ ಮತ್ತು ಬ್ಲೂಟೂತ್ ಸೌಲಭ್ಯ ಪಡೆದಿದ್ದು, ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP 54 ರೇಟಿಂಗ್ ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಏರ್ ಗೆಸ್ಚರ್‌ಗಳಂತಹ AI ಬೆಂಬಲಿತ ಆಯ್ಕೆಗಳನ್ನು ಸಹ ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ ಜೇಡ್ ಗ್ರೀನ್ ಮತ್ತು ಲೆದರ್ ಬ್ಲೂ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Massive Price Drop on Realme C63 on Flipkart Website. Check Offer, Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+