Home
ಸುದ್ದಿಜಾಲ

ರೆಡ್ಮಿಯ ಈ ಹೊಸ ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!..ಉಳಿತಾಯ ಖಚಿತ!

ಅಗ್ಗದ ಬೆಲೆಯಲ್ಲಿ ಹೊಸ ಮೊಬೈಲ್‌ ಖರೀದಿಸುವ ಪ್ಲ್ಯಾನ್‌ ಮಾಡಿದ್ದೀರಾ? ಹಾಗಿದ್ರೆ, ನಿಮಗಿದೆ ಗುಡ್‌ನ್ಯೂಸ್‌. ಜನಪ್ರಿಯ ರೆಡ್ಮಿ ಮೊಬೈಲ್‌ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ A3 ಫೋನ್‌ ಇದೀಗ ಸಖತ್‌ ಡಿಸ್ಕೌಂಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ದೈತ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ರೆಡ್ಮಿ A3 ಮೊಬೈಲ್‌ ಶೇ. 24% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು ಕೊಡುಗೆಯಲ್ಲಿ ಈಗ 8,299ರೂ. ಗಳ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರೊಂದಿಗೆ ಲಭ್ಯವಿರುವ ಇತರೆ ಕೊಡುಗೆ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಲು ಅವಕಾಶ ಸಿಗಲಿದೆ.

ರೆಡ್ಮಿಯ ಈ ಹೊಸ ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!..ಉಳಿತಾಯ ಖಚಿತ!

ಇನ್ನು ರೆಡ್ಮಿ A3 ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಅಂದಹಾಗೆ ಈ ಫೋನ್‌ 4 GB/ 6GB RAM 64GB/ 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಈ ಮೊಬೈಲ್‌ ಬ್ಲೂ, ಬ್ಲ್ಯಾಕ್‌ ಹಾಗೂ ಗ್ರೀನ್‌ ಕಲರ್‌ ಆಯ್ಕೆ ಪಡೆದಿದೆ. ಹಾಗಾದರೆ ರೆಡ್ಮಿ A3 ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿಯ ಈ ಹೊಸ ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!..ಉಳಿತಾಯ ಖಚಿತ!

ರೆಡ್ಮಿ A3 ಮೊಬೈಲ್‌ ಫೀಚರ್ಸ್‌ ಹೀಗಿವೆ

ರೆಡ್ಮಿ ಸಂಸ್ಥೆಯ ಈ ಫೋನ್ 6.71 ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1650 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಡಿಸ್‌ಪ್ಲೇ IPS LCD ಸ್ಕ್ರೀಸ್ಮಾರ್ಟ್‌ಫೋನ್‌ನ್ ಆಗಿದ್ದು, 90Hz ರಿಫ್ರೆಶ್ ರೇಟ್ ಸಪೋರ್ಟ್‌ ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ರೆಡ್ಮಿ A3 ಫೋನ್‌ 2.2 GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 (ಗೋ ಆವೃತ್ತಿ) ಬೆಂಬಲ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 3GB RAM + 64GB, 4GB RAM + 128GB ಹಾಗೂ 6GB RAM + 128GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಅಲ್ಲದೇ ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಆಯ್ಕೆ ಇದೆ.

ರೆಡ್ಮಿ ಸಂಸ್ಥೆಯ ಈ ಹೊಸ ಮೊಬೈಲ್‌ ಹಿಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, 0.08MP ಸೆಕೆಂಡರಿ ಕ್ಯಾಮೆರಾ ಸೆನ್ಸಾರ್‌ ಸಹ ಪಡೆದಿದೆ. ಅಲ್ಲದೇ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಇದರೊಂದಿಗೆ ಹಿಂಭಾಗದ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ.

ರೆಡ್ಮಿ A3 ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯದ ಜೊತೆಗೆ ದೊರೆಯುತ್ತದೆ, ಇದರ ಪೂರಕವಾಗಿ 10W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುವುದು. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ 4G VoLTE, Wi-Fi 802.11 b/g/n, ಬ್ಲೂಟೂತ್ 5.0, GPS + GLONASS, USB ಟೈಪ್- C ಪೋರ್ಟ್ ಅನ್ನು ಪಡೆದಿದೆ. ಇದಲ್ಲದೆ 3.5mm ಆಡಿಯೋ ಜಾಕ್, FM ರೇಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

Best Mobiles in India

English summary
Massive Price Drop on Redmi A3 in India. check offer price and other all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+