Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಹೊಸ ಫೋನಿನ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ; ಗ್ರಾಹಕರು ಖುಷ್!

ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಸಂಸ್ಥೆಯು ಇತ್ತೀಚಿನ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನ್‌ ಸಖತ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ Exynos 1380 ಚಿಪ್‌ಸೆಟ್‌ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಆಕರ್ಷಕ ಡಿಸೈನ್‌ನಿಂದ ಗ್ರಾಹಕರ ಗಮನ ಸೆಳೆದಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಸ್ಮಾರ್ಟ್‌ಫೋನ್‌ ಶೇ. 9% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನ್‌ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 30,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಸಹ ರಿಯಾಯಿತಿ ಸಹ ದೊರೆಯಲಿದೆ.

ಸ್ಯಾಮ್‌ಸಂಗ್‌ನ ಈ ಹೊಸ ಫೋನಿನ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ; ಗ್ರಾಹಕರು ಖುಷ್!

ಹಾಗೆಯೇ ಈ ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿದೆ. ಇದರ ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿ ಇದೆ. ಅಲ್ಲದೇ ಇದು 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಮೊಬೈಲ್‌ 1080 × 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಪ್ರತಿ ಇಂಚಿನ ಪಿಕ್ಸಲ್‌ ಸಾಂದ್ರತೆಯು 389 PPI ಆಗಿದ್ದು, 120 Hz ರಿಫ್ರೆಶ್‌ ರೇಟ್‌ ಸೌಲಭ್ಯ ಸಹ ಪಡೆದಿದೆ.

ಪ್ರೊಸೆಸರ್‌ ಪವರ್‌ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಸ್ಮಾರ್ಟ್‌ಫೋನ್‌ Exynos 1380 ಚಿಪ್‌ಸೆಟ್‌ ಪ್ರೊಸೆಸರ್ ಸೌಲಭ್ಯ ಅನ್ನು ಒಳಗೊಂಡಿದ್ದು, ಇದರ ಜೊತೆಗೆ ಮಾಲಿ G68 GPUಸಪೋರ್ಟ್ ಅನ್ನು ಪಡೆದಿದೆ. ಹಾಗೆಯೇ ಇದು ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಒಳಗೊಂಡಿದೆ. ಇದು 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಮೊಬೈಲ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೌಲಭ್ಯದಲ್ಲಿ ಇದೆ ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಇನ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಸ್ಟೋರೇಜ್‌ ಹಾಗೂ ಕಲರ್ ಆಯ್ಕೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನಿನ ಬೆಲೆ ವಿವರ 8 GB + 128 GB ಸ್ಟೋರೇಜ್ ವೇರಿಯಂಟ್‌ ಹಾಗೂ 8 GB + 256 GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಗಳನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಆಸ್ಸಮ್ ಐಸ್‌ ಬ್ಲೂ, ಆಸ್ಸಮ್ ಲೈಲಾಕ್ ಹಾಗೂ ಆಸ್ಸಮ್ ನಾವಿ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Massive price drop on Samsung Galaxy A35 5G in amazon India. check price, offer and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+