Home
ಸುದ್ದಿಜಾಲ

ಮೀಜು 18 ಮತ್ತು ಮೀಜು 18 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌!

ಸ್ಮಾರ್ಟ್‌ಫೋನ್‌ ವಲಯದಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆನೂ ಭರವಿಲ್ಲ. ಪ್ರತಿನಿತ್ಯವೂ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಸದ್ಯ ಇದೀಗ ಮೀಜು ಕಂಪೆನಿ ತನ್ನ ಹೊಸ ಮೀಜು 18 ಮತ್ತು ಮೀಜು 18 ಪ್ರೊ ಅನ್ನು ಒಳಗೊಂಡಿರುವ ಮೀಜು 18 ಸರಣಿಯನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇನ್ನು ಎರಡೂ ಸ್ಮಾರ್ಟ್‌ಫೋನ್‌ಗಳು ಇತ್ತೀಚಿನ ಸ್ನಾಪ್‌ಡ್ರಾಗನ್ 888 ಪ್ರೊಸೆಸರ್‌ ಅನ್ನು ಒಳಗೊಂಡಿವೆ.

ಮೀಜು

ಹೌದು, ಮೀಜು ಕಂಪೆನಿ ತನ್ನ ಮೀಜು 18 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಮೂರು ಶೇಖರಣಾ ಸಂರಚನೆಗಳಲ್ಲಿ ಬರುತ್ತವೆ. ಅಲ್ಲದೆ ಮೀಜು 18 ಪ್ರೊ 8K ವಿಡಿಯೋ ರೆಕಾರ್ಡಿಂಗ್ ಸಾಮರ್ಥ್ಯವನ್ನು ಹೊಂದಿದೆ ಮತ್ತು ಧೂಳು ಮತ್ತು ನೀರು-ನಿರೋಧಕತೆಗಾಗಿ ಐಪಿ 68 ರೇಟಿಂಗ್ ಅನ್ನು ಸಹ ಹೊಂದಿದೆ. ಇದರಲ್ಲಿ ಮೀಜು 18 ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಮೀಜು 18 ಸ್ಮಾರ್ಟ್‌ಫೋನ್‌ 1440x3200 ಪಿಕ್ಸೆಲ್‌ ಕ್ಯೂಹೆಚ್‌ಡಿ ಪ್ಲಸ್‌ ರೆಸಲ್ಯೂಶನ್‌ ಸಾಮರ್ಥ್ಯದ 6.2-ಇಂಚಿನ ಎಸ್-ಅಮೋಲೆಡ್ E4 ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಮತ್ತು HDR10 + ನ ಸ್ಕ್ರೀನ್ ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸುತ್ತದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ

ಕ್ಯಾಮೆರಾ

ಮೀಜು 18 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಟೆಲಿಫೋಟೋ ಶೂಟರ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೀಜು 18 ಸ್ಮಾರ್ಟ್‌ಫೋನ್‌ 4000mAh ಬ್ಯಾಟರಿಯನ್ನು ಹೊಂದಿದ್ದು, ಇದು 36W ಸೂಪರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ 6 6 E, ಬ್ಲೂಟೂತ್ 5.2, ಡ್ಯುಯಲ್-ಫ್ರೀಕ್ವೆನ್ಸಿ GPS, NFC ಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೀಜು 18 ಮೀಜು 18 ಬೆಲೆ ಚೀನಾದಲ್ಲಿ 8GB RAM+ 128GB ಶೇಖರಣಾ ಮಾದರಿಗೆ 4,399 ಯುವಾನ್ (ಸುಮಾರು 49,611 ರೂ.), 256GB ಶೇಖರಣಾ ಮಾದರಿಗೆ 4,699 ಯುವಾನ್ (ಸುಮಾರು 52,995 ರೂ.) ಬೆಲೆಯನ್ನು ಹೊಂದಿದೆ. ಇನ್ನು ಜಾಗತಿಕ ಮಾರುಕಟ್ಟೆಯಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

Best Mobiles in India

English summary
Meizu 18 series that includes the Meizu 18 and the Meizu 18 Pro has been launched in China.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+