ಮಾರುಕಟ್ಟೆಗೆ ಬಂತು 200 ಮೆಗಾಪಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್‌ಫೋನ್! ಇದರ ಡಿಸೈನ್ ಅಂತೂ ಸೂಪರ್!
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳ ಸಾಲಿನಲ್ಲಿ ಮೀಜು ಸಂಸ್ಥೆ ಕೂಡ ಸ್ಥಾನಪಡೆದುಕೊಂಡಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಮೀಜು 21 ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಮೀಜು 21 ಸ್ಮಾರ್ಟ್‌ಫೋನ್ ಟೆಕ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದು 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಜೊತೆಗೆ 80W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೀಜು 21 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೀಜು 21 ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದ್ದು, 1,100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇ 1,920Hz ಹೈ-ಫ್ರೀಕ್ವೆನ್ಸಿ 3ppi ಡಿಮ್ಮಿಂಗ್ ಮತ್ತು ಸೂಪರ್ mTouch ಡಿಸ್‌ಪ್ಲೇ 0.075 ಸೆಕೆಂಡುಗಳ ರೆಸ್ಪಾನ್ಸ್ ರೇಟ್ ಅನ್ನು ನೀಡಲಿದೆ.
ಮೀಜು 21 ಪ್ರೊಸೆಸರ್ ಯಾವುದು?
ಮೀಜು 21 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಮೀಜು 21 ಕ್ಯಾಮೆರಾ ಸೆಟ್‌ಅಪ್
ಮೀಜು 21 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಸಹ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಮೀಜು 21 ಬ್ಯಾಟರಿ ಮತ್ತು ಇತರೆ ಫೀಚರ್ಸ್
ಮೀಜು 21 ಸ್ಮಾರ್ಟ್‌ಫೋನ್ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, NavIC, ಬ್ಲೂಟೂತ್ 5.4, NFC, USB ಟೈಪ್-C ಪೋರ್ಟ್, GPS ಮತ್ತು A-GPS ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಲೈಟ್ ಸೆನ್ಸಾರ್, ಇ-ಕಂಪಾಸ್, ಐಆರ್ ರಿಮೋಟ್ ಕಂಟ್ರೋಲ್ ಮತ್ತು ಲೀನಿಯರ್ ಮೋಟರ್ ಅನ್ನು ಒಳಗೊಂಡಿದೆ. ಇದು ಭದ್ರತೆಗಾಗಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಮೀಜು 21 ಬೆಲೆ ಮತ್ತು ಲಭ್ಯತೆ
ಮೀಜು 21 ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಬಿಡುಗಡೆ ಆಗಿರುವುದರಿಂದ, ಇದರ ಬೇಸ್ ಮಾಡೆಲ್ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 3,399 (ಸುಮಾರು 39,000ರೂ)ಬೆಲೆ ಪಡೆದಿದೆ. ಇದು 12GB RAM + 256GB ಸ್ಟೋರೇಜ್ ಮಾದರಿಯ ಬೆಲೆ CNY 3,699 (ಸುಮಾರು 43,000ರೂ) ಆಗಿದೆ. ಇದು ಪ್ರಸ್ತುತ ಚೀನಾದಲ್ಲಿ ಅಧಿಕೃತ Meizu ವೆಬ್‌ಸೈಟ್‌ನಲ್ಲಿ Meizu ವೈಟ್, Ruiyi ಗ್ರೀನ್, ಸ್ಮಾರ್ಟ್ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








