ಶೀಘ್ರದಲ್ಲೇ ವಾಟ್ಸಾಪ್‌ ಸೇರಲಿದೆ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌!

|

ಜನಪ್ರಿಯ ಮೆಸೇಜಿಂಗ್‌ ಅಪ್ಲಿಕೇಶನ್‌ಗಳಲ್ಲಿ ವಾಟ್ಸಾಪ್‌ ಕೂಡ ಒಂದಾಗಿದೆ. ಈಗಾಗಲೇ ತನ್ನ ಬಳಕೆದಾರರಿಗೆ ಹಲವು ಆಕರ್ಷಕ ಫೀಚರ್ಸ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಕಾಲಕಾಲಕ್ಕೆ ತಕ್ಕಂತೆ ಅನುಕೂಲಕರ ಫೀಚರ್ಸ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಬಳಕೆದಾರರಿಗೆ ಉತ್ತಮ ಅನುಭವವನ್ನು ನೀಡಲು ಹೊಸ ಫೀಚರ್ಸ್‌ ಪರಿಚಯಿಸಲು ಮುಂದಾಗಿದೆ. WaBetaInfo ಹಂಚಿಕೊಂಡ ಸ್ಕ್ರೀನ್‌ಶಾಟ್‌ಗಳ ಪ್ರಕಾರ ವಾಟ್ಸಾಪ್‌ ಶೀಘ್ರದಲ್ಲೇ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ ಅನ್ನು ಪರಿಚಯಿಸುವ ಸಾಧ್ಯತೆ ಇದೆ.

ವಾಟ್ಸಾಪ್‌

ಹೌದು, ವಾಟ್ಸಾಪ್‌ ಶೀಘ್ರದಲ್ಲೇ ತನ್ನ ಬಳಕೆದಾರರಿಗೆ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ Instagram ಮತ್ತು Twitter ನಂತಹ ಜನಪ್ರಿಯ ಅಪ್ಲಿಕೇಶನ್‌ಗಳು ಬಳಕೆದಾರರಿಗೆ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ಗಳನ್ನು ನೀಡುತ್ತಿವೆ. ಇದೇ ಕಾರಣಕ್ಕೆ ವಾಟ್ಸಾಪ್ ಕೂಡ ಸದ್ಯದಲ್ಲೇ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೆಸೇಜ್‌ ರಿಯಾಕ್ಷನ್‌ ಸೇರಿಸಲು ಸಿದ್ಧತೆ ನಡೆಸಿದೆ. ಹಾಗಾದ್ರೆ ವಾಟ್ಸಾಪ್‌ನ ಹೊಸ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಾಕ್ಷನ್‌

ವಾಟ್ಸಾಪ್‌ನ ಮೆಸೇಜ್‌ ರಿಯಾಕ್ಷನ್‌ ಫಿಚರ್ಸ್‌ ಎಮೋಜಿ ಐಕಾನ್‌ಗಳೊಂದಿಗೆ ಪ್ರತಿಕ್ರಿಯಿಸಲು ನಿಮಗೆ ಅನುಮತಿಸುತ್ತದೆ. ಇದು ಫೇಸ್‌ಬುಕ್‌ನಲ್ಲಿನ ಪೋಸ್ಟ್‌ಗಳಿಗೆ ನೀವು ಹೇಗೆ ಪ್ರತಿಕ್ರಿಯಿಸಬಹುದು ಎಂಬುದಕ್ಕೆ ಹೋಲುತ್ತದೆ. ಇನ್ನು ಇನ್‌ಸ್ಟಾಗ್ರಾಮ್‌ನಲ್ಲಿ, ಎಮೋಜಿಗಳನ್ನು ಕಳುಹಿಸಲು ನೀವು ಸಂದೇಶವನ್ನು ಲಾಂಗ್‌ ಪ್ರೆಸ್‌ ಮಾಡಬೇಕಾಗುತ್ತದೆ. ಪಾಪ್ ಅಪ್ ಆಗುವ ಯಾವುದೇ ಎಮೋಜಿಗಳಿಂದ ಆಯ್ಕೆ ಮಾಡಬೇಕಾಗುತ್ತದೆ. ನಿಮ್ಮ ಮೆಚ್ಚಿನದನ್ನು ನೀವು ಆಯ್ಕೆ ಮಾಡಿದ ನಂತರ, ನೀವು ಯಾರ ಸಂದೇಶಕ್ಕೆ ಪ್ರತಿಕ್ರಿಯಿಸಿದ್ದೀರೋ ಅವರು ಅದೇ ಪ್ರತಿಕ್ರಿಯೆಗೆ ಅಧಿಸೂಚನೆಯನ್ನು ಪಡೆಯುತ್ತಾರೆ. ವಾಟ್ಸಾಪ್ ಕೂಡ ಈ ಫೀಚರ್ಸ್‌ ಅನ್ನು ಇದೇ ಮಾದರಿಯಲ್ಲಿ ಪರಿಚಯಿಸುವ ಸಾಧ್ಯತೆಯಿದೆ.

ಫೇಸ್‌ಬುಕ್

ಅಲ್ಲದೆ ಎಮೋಜಿಗಳ ಆಯ್ಕೆಯು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ಗಿಂತ ಭಿನ್ನವಾಗುತ್ತದೆಯೇ ಅಥವಾ ಇದೇ ರೀತಿಯಾಗುತ್ತದೆಯೇ ಎಂಬುದು ಪ್ರಸ್ತುತ ತಿಳಿದಿಲ್ಲ. ಆದರೆ ಈ ಫೀಚರ್ಸ್‌ ವಾಟ್ಸಾಪ್‌ನ ಹಳೆಯ ಆವೃತ್ತಿಯಲ್ಲಿ ಲಭ್ಯವಾಗುವುದಿಲ್ಲ. ಈ ಹೊಸ ಫೀಚರ್ಸ್‌ ಆಯ್ಕೆಗೆ ನೀವು ಹೊಸ ಆವೃತ್ತಿಯ ವಾಟ್ಸಾಪ್‌ಗೆ ಅಪ್ಡೇಟ್‌ ಆಗ ಬೇಕಾಗುತ್ತದೆ. ಸದ್ಯ ವಾಟ್ಸಾಪ್‌ ನೀವು ಪ್ರತಿಕ್ರಿಯೆಯನ್ನು ಬೆಂಬಲಿಸದ ಹಳೆಯ ಆವೃತ್ತಿಯನ್ನು ಬಳಸುತ್ತಿರುವ ಎಚ್ಚರಿಕೆಯ ಸಂದೇಶವನ್ನು ಪ್ರದರ್ಶಿಸಲಿದೆ.

ಫೀಚರ್ಸ್‌

ಈ ಫೀಚರ್ಸ್‌ ಮೊದಲು ವಾಟ್ಸಾಪ್‌ನ ಆಂಡ್ರಾಯ್ಡ್ ಆವೃತ್ತಿಯಲ್ಲಿ ಮತ್ತು ನಂತರ ಐಒಎಸ್ ಬಳಕೆದಾರರಿಗೆ ಲಭ್ಯವಿರುತ್ತದೆ. ಪ್ರಸ್ತುತ ಈ ಫೀಚರ್ಸ್‌ ಪರೀಕ್ಷಾ ಹಂತದಲ್ಲಿದೆ. ಭವಿಷ್ಯದ ಅಪ್‌ಡೇಟ್‌ನಲ್ಲಿ ಲಭ್ಯವಾಗುತ್ತದೆ ಎಂದು ಹೇಳಲಾಗುತ್ತಿದೆ. ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ನಿಂದಾಗಿ ನಿಮಗೆ ಬಂದ ಸಂದೇಶಗಳಿಗೆ ತ್ವರಿತವಾಗಿ ಎಮೊಜಿಗಳ ಮೂಲಕ ಉತ್ತರಿಸಲು ಸಾಧ್ಯವಾಗಲಿದೆ. ಇದರಿಂದ ನಿಮ್ಮ ಚಾಟ್‌ ಸಂಬಾಷಣೆ ಇನ್ನಷ್ಟು ಉಲ್ಲಾಸದಾಯಕವಾಗಿರಲಿದೆ ಎಂದು ಹೇಳಲಾಗ್ತಿದೆ.

ವಾಟ್ಸಾಪ್‌

ಇದಲ್ಲದೆ ಇತ್ತೀಚಿಗೆ ವಾಟ್ಸಾಪ್‌ ಹೊಸದಾಗಿ ವ್ಯೂ ಒನ್ಸ್‌ ಫೀಚರ್ಸ್‌ ಅನ್ನು ಅಧಿಕೃತಗೊಳಿಸಿದೆ. ಈ ಫೀಚರ್ಸ್‌ ಸ್ವಯಂಚಾಲಿತವಾಗಿ ಒಂದು ನಿರ್ದಿಷ್ಟ ಅವಧಿಯ ನಂತರ ಸಂದೇಶಗಳನ್ನು ತೊಡೆದುಹಾಕುವ ಮೂಲಕ ಬಳಕೆದಾರರ ಗೌಪ್ಯತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ವಾಟ್ಸಾಪ್ ಈ ಫೀಚರ್ಸ್‌ ಅನ್ನು ಪರಿಚಯಿಸಲು ಮುಖ್ಯ ಕಾರಣ ಫೋನ್ ಅನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳುವುದು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್‌ಗಳು ಚುರುಕಾಗುವುದರಿಂದ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆಯುವುದು ಹೆಚ್ಚು ಸಾಮಾನ್ಯವಾಗಿದೆ. ಈ ಚಿತ್ರಗಳು ನಿಮ್ಮ ಫೋನ್‌ಗಳಲ್ಲಿ ಜಾಗವನ್ನು ತೆಗೆದುಕೊಳ್ಳಬಹುದು ಇದರಿಂದ ಸ್ಟೋರೇಜ್‌ ಸ್ಪೇಸ್‌ಗೆ ಸಮಸ್ಯೆಯಾಗಬಹುದು. ಇವುಗಳಲ್ಲಿ ಬೇಡವಾದದ್ದನ್ನು ಡಿಲೀಟ್‌ ಮಾಡುವ ಬದಲು ವ್ಯೂ ಒನ್ಸ್‌ ಫೀಚರ್ಸ್‌ ಇದ್ದರೆ ತನ್ನಿಂದ ತಾನೆ ಒಂದು ನಿರ್ದಿಷ್ಟ ಅವಧಿಯ ನಂತರ ಫೋಟೋ, ವಿಡಿಯೋಗಳನ್ನು ಡಿಲೀಟ್‌ ಮಾಡಲಿದೆ.

Best Mobiles in India

English summary
Popular apps like Instagram and Twitter are already offering message reaction feature to users. Now, WhatsApp is all set to get it, as per the latest report by WaBetaInfo.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X