ಶಿಯೋಮಿಯಿಂದ 108MP ಕ್ಯಾಮೆರಾದ 'ಮಿ 10 5G' ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಚೀನಾ ಮೂಲದ ಶಿಯೋಮಿ ಕಂಪನಿಯು ತನ್ನ ಬಹುನಿರೀಕ್ಷಿತ ಮಿ 10 5G ಸ್ಮಾರ್ಟ್‌ಫೋನ್‌ ಅನ್ನು ಇಂದು ಅಧಿಕೃತವಾಗಿ ಭಾರತದಲ್ಲಿ ಲಾಂಚ್ ಮಾಡಿದೆ. ಈಗಾಗಲೇ ಭಾರೀ ಕುತೂಹಲ ಮೂಡಿಸಿದ್ದ ಈ ಸ್ಮಾರ್ಟ್‌ಫೋನ್ 108ಎಂಪಿ ಸೆನ್ಸಾರ್ ಕ್ಯಾಮೆರಾ ಪಡೆದಿರುವುದು ಪ್ರಮುಖ ಹೈಲೈಟ್‌ ಆಗಿದೆ. ಜೊತೆಗೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 ಪ್ರೊಸೆಸರ್‌ ಹಾಗೂ 8GB+128GB ಸ್ಟೋರೇಜ್ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ.

ಮಿ 10 5G

ಶಿಯೋಮಿ ಸಂಸ್ಥೆಯು ಮಿ 10 5G ಸ್ಮಾರ್ಟ್‌ಫೋನ್‌ ಜೊತೆಗೆ ಮಿ ಬಾಕ್ಸ್‌ 4k ಡಿವೈಸ್‌ ಅನ್ನು ಬಿಡುಗಡೆ ಮಾಡಿದೆ. ಆಂಡ್ರಾಯ್ಡ್ 10 ಓಎಸ್‌ನ ಸಪೋರ್ಟ್‌ ಪಡೆದಿರುವ ದೈತ್ಯ ಮಿ 10 ಸ್ಮಾರ್ಟ್‌ಫೋನ್ ಕೋರಲ್ ಗ್ರೀನ್ ಮತ್ತು ಟ್ವಿಲೈಟ್ ಗ್ರೇ ಬಣ್ಣಗಳ ಆಯ್ಕೆಗಳಲ್ಲಿ ಹೊಂದಿದೆ. ಮೇ.8ರಿಂದ (ಇಂದಿನಿಂದ) ಇ-ಕಾಮರ್ಸ್ ತಾಣ ಅಮೆಜಾನ್ ಮತ್ತು ಸಂಸ್ಥೆಯ ಮಿ.ಕಾಮ್ ತಾಣಗಳ ಮೂಲಕ ಪ್ರೀ-ಆರ್ಡರ್ ಪ್ರಾರಂಭವಾಗಿದೆ. ಆರಂಭಿಕ ವೇರಿಯಂಟ್ ಬೆಲೆಯು 49,999ರೂ. ಆಗಿದೆ. ಮಿ 10 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಶಿಯೋಮಿ ಮಿ 10 5G ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಜೊತೆಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನ ಹೊಂದಿದೆ. ಡಿಸ್‌ಪ್ಲೇಯು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದೆ. ಜೊತೆಗೆ ಈ ಡಿಸ್‌ಪ್ಲೇಯು 1120 ನಿಟ್ಸ್ ಬ್ರೈಟ್ನೆಸ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಶಿಯೋಮಿ ಮಿ 10 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿದೆ. ಮೆಮೊರಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಅವಕಾಶದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಶಿಯೋಮಿ ಮಿ 10 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮೂರನೇ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾವನ್ನು ನೀಡಲಾಗಿದೆ. ಆಕರ್ಷಕ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಶಿಯೋಮಿ ಮಿ 10 5G ಸ್ಮಾರ್ಟ್‌ಫೋನ್‌ 4780mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 10W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈ-ಫೈ 5, ಬ್ಲೂಟೂತ್ ವಿ 5.1, NFC, ಜಿಪಿಎಸ್, 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಆಪ್ಟಿಕಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಹೊಂದಿದೆ. ಜೊತೆಗೆ ಅಲ್ಟ್ರಾಸಾನಿಕ್ ದೂರ ಸೆನ್ಸಾರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಮಿ 10 5G ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. 8GB RAM + 128GB ಸ್ಟೋರೇಜ್‌ನ ವೇರಿಯಂಟ್‌ ಬೆಲೆಯು 49,999ರೂ. ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್‌ ವೇರಿಯಂಟ್ ಬೆಲೆಯು 54,999ರೂ. ಆಗಿದೆ. ಸದ್ಯ ಪ್ರೀ-ಆರ್ಡರ್ ಶುರುವಾಗಿದ್ದು, ಸೇಲ್ ದಿನಾಂಕವನ್ನು ಬಹಿರಂಗಪಡಿಸಿಲ್ಲ.

Best Mobiles in India

English summary
Mi 10 5G price in India starts at Rs. 49,999 for the base 8GB RAM + 128GB storage configuration.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X