Just In
- 19 min ago
ಸ್ಮಾರ್ಟ್ಫೋನ್ಗಳಲ್ಲಿನ ಸೆನ್ಸರ್ಗಳ ಬಗ್ಗೆ ನಿಮಗೆ ಗೊತ್ತಾ?..ಇವುಗಳಿಂದ ಲಾಭವೇನು?
- 58 min ago
ಏರ್ಟೆಲ್ ಗ್ರಾಹಕರೇ, ಅವಸರವಾಗಿ ರೀಚಾರ್ಜ್ ಮಾಡಬೇಡಿ, ಈ ಪ್ಲ್ಯಾನ್ ಗಮನಿಸಿ!
- 1 hr ago
ಲೆನೊವೊದಿಂದ ಭಾರತದಲ್ಲಿ ಹೊಸ ಲ್ಯಾಪ್ಟಾಪ್ ಬಿಡುಗಡೆ! ಇದರ ಕಾರ್ಯದಕ್ಷತೆ ಹೇಗಿದೆ?
- 2 hrs ago
ಟೆಲಿಗ್ರಾಮ್ನಲ್ಲಿ ವಾಟ್ಸಾಪ್ ಅನ್ನೇ ಮೀರಿಸುವ ಫೀಚರ್ಸ್!; ಬಳಕೆದಾರರಿಗೆ ಸಾಕಷ್ಟು ಅನುಕೂಲ
Don't Miss
- News
ಯಡಿಯೂರಪ್ಪ ಅವರ ಮಗನ್ನ ಮಂತ್ರಿ ಮಾಡಬೇಕಾಗುತ್ತೆ ಅಂತಲೇ ಮಂತ್ರಿಮಂಡಲ ವಿಸ್ತರಣೆ ಮಾಡುತ್ತಿಲ್ಲ:ಸಿದ್ದರಾಮಯ್ಯ
- Automobiles
ಭಾರತದಲ್ಲಿ ಗ್ಲಾಂಝಾ ಪ್ರೀಮಿಯಂ ಹ್ಯಾಚ್ಬ್ಯಾಕ್ನ ಬೆಲೆ ಹೆಚ್ಚಿಸಿದ ಟೊಯೊಟಾ
- Sports
Border-Gavaskar Trophy: ಭಾರತ vs ಆಸ್ಟ್ರೇಲಿಯಾ ಅತಿ ಹೆಚ್ಚು ರನ್, ಹೆಚ್ಚು ವಿಕೆಟ್ ಗಳಿಸಿದ ಆಟಗಾರರ ಪಟ್ಟಿ
- Movies
"ನನ್ನ ಕೋರಿಕೆಯನ್ನು ನಡೆಸಿಕೊಡುವಿರಿ ಎಂದು ನಂಬಿರುತ್ತೇನೆ": ಅಭಿಮಾನಿಗಳಲ್ಲಿ ದರ್ಶನ್ ವಿಶೇಷ ಮನವಿ
- Finance
Real Estate Deal: ದೇಶದ ಅತೀ ದೊಡ್ಡ ರಿಯಲ್ ಎಸ್ಟೇಟ್ ಡೀಲ್ಗೆ ಹೂಡಿಕೆ ಮಾಡಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle
ಕ್ಯಾನ್ಸರ್ ಚಿಕಿತ್ಸೆ ಬಳಿಕ ಮಗು ಪಡೆಯಲು ಸುರಕ್ಷಿತ ವಿಧಾನ ಇದೇ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶಿಯೋಮಿಯ ಮಿ 10 ಸ್ಮಾರ್ಟ್‌ಫೋನ್ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!
ಪ್ರಮುಖ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಶಿಯೋಮಿ ಕಂಪನಿಯು ಈಗಾಗಲೇ ಹಲವು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಬಜೆಟ್ ದರದ ಫೋನ್‌ಗಳ ಜೊತೆಗೆ ಹೈ ಎಂಡ್ ಮಾದರಿಯ ಫೋನ್‌ಗಳ ಆಯ್ಕೆಯನ್ನು ಸಹ ಹೊಂದಿದೆ. ಆ ಪೈಕಿ ಅತ್ಯುತ್ತಮ ಫೀಚರ್ಸ್‌ಗಳನ್ನು ಒಳಗೊಂಡಿರುವ ಮಿ 10 ಸ್ಮಾರ್ಟ್‌ಫೋನ್ ಈಗ ಭರ್ಜರಿ ಡಿಸ್ಕೌಂಟ್ ಕೊಡುಗೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಶಿಯೋಮಿ ಕಂಪನಿಯ ಮಿ 10 ಸ್ಮಾರ್ಟ್‌ಫೋನ್ ಅಮೆಜಾನ್ ಇ-ಕಾಮರ್ಸ್ ತಾಣದಲ್ಲಿ ವಿಶೇಷ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ. ಅಮೆಜಾನ್‌ನಲ್ಲಿ 10,000ರೂ.ಗಳ ರಿಯಾಯಿತಿ ಕೂಪನ್‌ನೊಂದಿಗೆ ಪಟ್ಟಿ ಮಾಡಲಾಗಿದೆ. ಪ್ರಮುಖ ಫೋನ್ ಖರೀದಿಸಲು ಬಯಸುವ ಎಲ್ಲಾ ಖರೀದಿದಾರರಿಗೆ ಕೂಪನ್ ಲಭ್ಯವಿದೆ. ಇದಂದು ಸೀಮಿತ ಅವಧಿಯ ಕೊಡುಗೆ ಆಗಿದ್ದು. ಇಂದೇ ಕೊನೆಯ ದಿನ ಎನ್ನಲಾಗಿದೆ. ಅಮೆಜಾನ್‌ನಲ್ಲಿ ಈ ಫೋನ್ 54,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೊನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 ಪ್ರೊಸೆಸರ್ ಹಾಗೂ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಹಾಗಾದರೇ ಮಿ 10 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನ ಹೊಂದಿದೆ. ಡಿಸ್‌ಪ್ಲೇಯು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದೆ. ಜೊತೆಗೆ ಈ ಡಿಸ್‌ಪ್ಲೇಯು 1120 ನಿಟ್ಸ್ ಬ್ರೈಟ್ನೆಸ್ ಸಾಮರ್ಥ್ಯವನ್ನು ಒಳಗೊಂಡಿದೆ.

ಪ್ರೊಸೆಸರ್ ಸಾಮರ್ಥ್ಯ
ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿದೆ. ಮೆಮೊರಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಅವಕಾಶದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ
ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮೂರನೇ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಲ್ಫಿಗಾಗಿ 20 ಎಂಪಿ ಸೆನ್ಸಾರ್ ಕ್ಯಾಮೆರಾವನ್ನು ನೀಡಲಾಗಿದೆ. ಆಕರ್ಷಕ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ ಮಿ 10 ಸ್ಮಾರ್ಟ್‌ಫೋನ್ 4780mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಜೊತೆಗೆ 10W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈ-ಫೈ 5, ಬ್ಲೂಟೂತ್ ವಿ 5.1, NFC, ಜಿಪಿಎಸ್, 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಆಪ್ಟಿಕಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಜೊತೆಗೆ ಅಲ್ಟ್ರಾಸಾನಿಕ್ ದೂರ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಅನ್ನು ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470