ಶಿಯೋಮಿ ಕಂಪೆನಿಯಿಂದ ಮಿ10 ಲೈಟ್‌ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಚೀನಾ ಮೂಲದ ಜನಪ್ರಿಯ ಶಿಯೋಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಹೆಸರುವಾಸಿಯಾಗಿರುವ ಶಿಯೋಮಿ ಹಂತಹಂತವಾಗಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಲೇ ಬಂದಿದೆ. ಇನ್ನು ಪ್ರತಿಭಾರಿಯು ತನ್ನ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ ಆಕರ್ಷಕ ಫೀಚರ್ಸ್‌ಗಳನ್ನ ಪರಿಚಯಿಸುತ್ತಿರುವ ಕಂಪೆನಿ ಈ ಭಾರಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಹೌದು

ಹೌದು, ಚೀನಾದ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ಶಿಯೋಮಿ ಇದೀಗ ತನ್ನ ಹೊಸ ಮಿ10 ಲೈಟ್‌ 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹೊಸ ಮಾದರಿಯ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಒಳಗೊಂಡಿದ್ದು, 5G ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಆಗಿರಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಈ ಹಿಂದೆ ಬಿಡುಗಡೆ ಆಗಿದ್ದ ಮಿ 10 ಮತ್ತು ಮಿ 10 ಪ್ರೊ ಸ್ಮಾರ್ಟ್‌ ಫೋನ್‌ಗಳ ಮಾದರಿಯನ್ನ ಹೊಂದಿಲ್ಲ, ಬದಲಿಗೆ ಹೊಸ ಮಾದರಿಯ ವಿನ್ಯಾಸವನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್‌ 6.57 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಅಮೋಲೆಡ್‌ ಟ್ರೂಕಲರ್‌ ಡಿಸ್‌ಪ್ಲೇ ಆಗಿದ್ದು, ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ. ಇದಲ್ಲದೆ ವಿಡಿಯೋ ಕರೆಗಳು ಹಾಗೂ ವಿಡಿಯೋ ವೀಕ್ಷಣೆಗೆ ಉತ್ತಮವಾದ ಡಿಸ್‌ಪ್ಲೇ ಮಾದರಿಯನ್ನು ಒಳಗೊಂಡಿದೆ. ಇದಲ್ಲದೆ ಇನ್‌ಡಿಸ್‌ಪ್ಲೇ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಶಿಯೋಮಿ ಮಿ10 ಲೈಟ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 765 G SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ ಈ ಸ್ಮಾರ್ಟ್‌ಫೋನ್‌ 64GB RAM ಮತ್ತು 128GB ಆಂತರಿಕ ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನುಳಿದ ಮೂರು ಕ್ಯಾಮೆರಾಗಳ ಮೆಗಾಪಿಕ್ಸೆಲ್‌ ಸಾಮರ್ಥ್ಯದ ಬಗ್ಗೆ ಇನ್ನ ಯಾವುದೇ ಮಾಹಿತಿ ಲಬ್ಯವಾಗಿಲ್ಲ. ಇದಲ್ಲದೆ ಕ್ಯಾಮೆರಾ ಫಿಚರ್ಸ್‌ಗಳಲ್ಲಿ ಈ ಸ್ಮಾರ್ಟ್‌ಫೋನ್‌ ನೈಟ್ ಮೋಡ್ 2.0, AI ಡೈನಾಮಿಕ್ ಸ್ಕೈಸ್ಕೇಪಿಂಗ್ ಮತ್ತು ವ್ಲಾಗ್ ಮೋಡ್‌ನಂತ ಫೀಚರ್ಸ್‌ಗಳನ್ನ ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,160mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 20W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ ಶಿಯೋಮಿ ಮಿ 10 ಲೈಟ್ 5 ಜಿ ಬೆಲೆ ಕೇವಲ € 349 (26,131.ರೂ,) ಆಗಿದೆ. ಇದಲ್ಲದೆ ಬಿಳಿ, ಬೂದು ಮತ್ತು ನೀಲಿ / ಹಸಿರು ಗ್ರೇಡಿಯಂಟ್ ಬಣ್ಣಗಳ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್‌ ಲಭ್ಯವಾಗಲಿದ್ದು, ಇದೇ ಏಪ್ರಿಲ್ 7 ಮತ್ತು 15 ರಿಂದ ಯುರೋಪಿನ ಕೆಲವು ಭಾಗಗಳಲ್ಲಿ ಮಾರಾಟವಾಗಲಿದೆ.

Best Mobiles in India

English summary
Mi 10 Lite With Quad Rear Cameras, 5G Support Launched: Price, Specifications.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X